ಕೇಂದ್ರದಿಂದ ಕೈ ನಾಯಕರ ದೂರವಾಣಿ ಕದ್ದಾಲಿಕೆ
Team Udayavani, Aug 17, 2019, 3:06 AM IST
ಬೆಂಗಳೂರು: ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ದೂರವಾಣಿಗಳನ್ನು ಕದ್ದಾಲಿಕೆ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಈ ಬಗ್ಗೆ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುವುದನ್ನು ಬಿಟ್ಟು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ದೂರವಾಣಿಗಳನ್ನು ಕದ್ದಾಲಿಕೆ ಮಾಡುತ್ತಿದ್ದು, ಇಂದಿಗೂ ನಮ್ಮ ದೂರವಾಣಿ ಕದ್ದಾಲಿಕೆ ಮುಂದುವರೆದಿದೆ. ಸರ್ಕಾರ ನಡೆಸುವವರೇ ಈ ಬಗ್ಗೆ ಆರೋಪ ಮಾಡಿದರೆ ಹೇಗೆ? ದೂರವಾಣಿ ಕದ್ದಾಲಿಕೆ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಹೇಳಿದರು.
ದೇಶದ ಇತಿಹಾಸದಲ್ಲೇ ಸಚಿವ ಸಂಪುಟವಿಲ್ಲದೆ ಆಡಳಿತ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪದಾಖಲೆ ನಿರ್ಮಿಸಿದ್ದಾರೆ. ದೆಹಲಿಗೆ ತೆರಳಿರುವ ಅವರು ಪ್ರಧಾನಿಯನ್ನು ಭೇಟಿಯಾಗಿದ್ದಾರಷ್ಟೆ. ಸಂಪುಟ ರಚನೆ ಕುರಿತು ಗೃಹ ಸಚಿವರ ಕಚೇರಿಯಿಂದಾಗಲಿ ಅಥವಾ ಪ್ರಧಾನಿ ಕಾರ್ಯಾಲಯದಿಂದಾಗಲಿ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಕೇವಲ ಪ್ರಧಾನಿಯನ್ನು ಭೇಟಿಯಾದರಷ್ಟೇ ಸಾಲದು. ರಾಜ್ಯದಲ್ಲಿ ಪ್ರವಾಹಪೀಡಿತ ಪ್ರದೇಶಗಳಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಬೇಕು ಎಂದು ಆಗ್ರಹಿಸಿದರು.
ನನ್ನ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆಯಾಗಿಲ್ಲ
ಬೆಂಗಳೂರು: “ನಾನು ಗೃಹ ಸಚಿವನಾಗಿದ್ದ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆ ನಡೆದಿಲ್ಲ. ಒಂದು ವೇಳೆ, ನಡೆದಿದ್ದರೂ ಅದು ನನ್ನ ಗಮನಕ್ಕೆ ಬಂದಿಲ್ಲ. ಇದು ಗೃಹ ಸಚಿವರ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
“ಒಂದು ವೇಳೆ ದೂರವಾಣಿ ಕದ್ದಾಲಿಕೆ ನಡೆದಿದ್ದರೆ ತನಿಖೆ ನಡೆಸಬಹುದು. ಭಯೋತ್ಪಾದಕರು ಮತ್ತು ಅಪರಾಧಿಗಳ ಚಲನವಲನಗಳ ಮೇಲೆ ಕಣ್ಣಿಡಲು ಗೃಹ ಇಲಾಖೆಯವರು ಅನುಮತಿ ಪಡೆದು ದೂರವಾಣಿ ಕದ್ದಾಲಿಕೆ ಮಾಡುತ್ತಾರೆ. ಅದನ್ನು ಹೊರತುಪಡಿಸಿದರೆ ಉಳಿದ ಸಂದ ರ್ಭಗಳಲ್ಲಿ ಫೋನ್ ಕದ್ದಾಲಿಕೆ ನಡೆದಿರಲು ಸಾಧ್ಯವಿಲ್ಲ ‘ ಎಂದು ಹೇಳಿದರು.
ಫೋನ್ ಕದ್ದಾಲಿಕೆಯ ಬಗ್ಗೆ ಮಾಧ್ಯಮಗಳಲ್ಲಿ ಹೇಗೆ ಬಂದಿದೆಯೋ ಗೊತ್ತಿಲ್ಲ. ನಾನು ನನಗೆ ಗೊತ್ತಿರುವವರನ್ನು ವಿಚಾರಿಸಿದೆ. ಯಾವುದೇ ರೀತಿಯ ಟ್ಯಾಪಿಂಗ್ ಆಗಿಲ್ಲ. ನಾವು ಇಂತಹ ಕೆಲಸಕ್ಕೆ ಕೈ ಹಾಕಿಲ್ಲ. ಈ ಬಗ್ಗೆ ಯಾವುದೇ ತನಿಖೆ ಬೇಕಾದರೂ ಮಾಡಲಿ. ನಮ್ಮ ಅಭ್ಯಂತರವಿಲ್ಲ.
-ಡಿ.ಕೆ.ಶಿವಕುಮಾರ್, ಮಾಜಿ ಸಚಿವ
ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ಫೋನ್ ಕದ್ದಾಲಿಕೆ ಆಗಿದೆ ಎಂಬ ಆರೋಪ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಫೋನ್ ಕದ್ದಾಲಿಕೆ ಮಾಡುವುದು ಹೊಸದೇನಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಸಹ ಫೋನ್ ಕದ್ದಾಲಿಕೆ ಮಾಡಿದೆ. ಪ್ರಸ್ತುತ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಯಲಿ. ಆಗ ನಿಜಾಂಶ ಏನೆಂಬುದು ಗೊತ್ತಾಗಲಿದೆ.
-ಡಿ.ಸಿ. ತಮ್ಮಣ್ಣ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.