ಕೇಂದ್ರ ಸಚಿವರ ಭೇಟಿ ಮಾಡಿದ ಯಡಿಯೂರಪ್ಪ
Team Udayavani, Aug 17, 2019, 3:00 AM IST
ಬೆಂಗಳೂರು: ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯದ ನಾನಾ ರೈಲ್ವೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಚರ್ಚಿಸಿದರು. ಮುಖ್ಯವಾಗಿ ಬೆಂಗಳೂರಿನ ಸಬ್‌ಅರ್ಬನ್ ರೈಲ್ವೆ ಯೋಜನೆ, ರಾಜ್ಯದಲ್ಲಿ ರೈಲ್ವೆ ಪೊಲೀಸ್ ಬಲವರ್ಧನೆ, ಹಾಸನ- ಬೇಲೂರು- ಶೃಂಗೇರಿ ಹೊಸ ರೈಲು ಮಾರ್ಗ, ಬೀದರ್- ನಾಂದೇಡ್ ರೈಲ್ವೆ ಮಾರ್ಗ ಸೇರಿದಂತೆ ಇತರ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ನಂತರ ಯಡಿಯೂರಪ್ಪ ಅವರು ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾದರು. ಸರ್ಕಾರಿ ಸ್ವಾಮ್ಯದ ವಿಮಾನ ನಿಲ್ದಾಣಗಳ ಅಭಿವೃದ್ದಿ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಜಂಟಿ ಸಹಭಾಗಿತ್ವದಲ್ಲಿ ಕಂಪನಿ ಸ್ಥಾಪನೆ, ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಚುರುಕುಗೊಳಿಸುವಂತೆ ಮನವಿ ಮಾಡಿದರು.
ಜತೆಗೆ, ಕಾರ್ಯಾಚರಣೆಗೆ ಸಿದ್ಧವಾಗಿರುವ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸುವಂತೆ ಹರ್ದೀಪ್ ಸಿಂಗ್ ಪುರಿ ಅವರಿಗೆ ಆಹ್ವಾನಿಸಿ, ದಿನಾಂಕ ನಿಗದಿಪಡಿಸುವಂತೆ ಕೋರಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.