ಮುಸ್ಲಿಮರಿಗೆ ಜನಸಂಖ್ಯಾ ಸ್ಫೋಟದ ಪರಿವೆ ಇಲ್ಲ
Team Udayavani, Aug 17, 2019, 5:48 AM IST
ನವದೆಹಲಿ: ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದಲ್ಲಿ ಜನಸಂಖ್ಯಾ ನಿಯಂತ್ರಣ ಹಾಗೂ ಒಂದೇ ಬಾರಿಗೆ ಚುನಾವಣೆ ನಡೆಸುವ ಘೋಷಣೆ ಬಗ್ಗೆ ಶಿವಸೇನೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಕಾಶ್ಮೀರದ 370ನೇ ವಿಧಿ ರದ್ದತಿ ಮತ್ತು ತ್ರಿವಳಿ ತಲಾಖ್ ರದ್ದತಿ ಮಾಡುವ ಮೂಲಕ ಪ್ರಧಾನಿ ಮೋದಿ ಒಂದು ಸಂದೇಶ ನೀಡಿದ್ದಾರೆ. ಅವರು ಜನಸಂಖ್ಯಾ ಸ್ಫೋಟ ಸಮಸ್ಯೆಯನ್ನು ಖಂಡಿತವಾಗಿಯೂ ಪರಿಹರಿಸುತ್ತಾರೆ. ಸದ್ಯ ಮುಸ್ಲಿಂ ಸಂಪ್ರದಾಯವಾದಿಗಳು ಜನಸಂಖ್ಯಾ ಸ್ಫೋಟದ ಬಗ್ಗೆ ಯಾವ ಕಾಳಜಿಯನ್ನೂ ಹೊಂದಿಲ್ಲ. ‘ನಾವಿಬ್ಬರು, ನಮಗೆ ಇಪ್ಪತ್ತೈದು’ ಎಂಬ ಮನಸ್ಥಿತಿಯಿಂದ ಅವರು ಇನ್ನೂ ಹೊರಬಂದಿಲ್ಲ ಎಂದು ಶಿವಸೇನೆಯ ಮುಖವಾಣಿ ಸಾಮ್ನಾ ದಲ್ಲಿನ ಸಂಪಾದಕೀಯದಲ್ಲಿ ವಿವರಿಸಲಾಗಿದೆ.
ಮೋದಿ ಹೇಳಿಕೆಗೆ ಚಿದಂಬರಂ ಸ್ವಾಗತ: ಪ್ರಧಾನಿ ನರೇಂದ್ರ ಮೋದಿಯನ್ನು ಕಟುವಾಗಿ ಟೀಕಿಸುತ್ತಿದ್ದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಕೆಂಪುಕೋಟೆ ಮೇಲೆ ಮೋದಿ ಮಾತನಾಡಿದ ಹಲವು ವಿಷಯಗಳನ್ನು ಸ್ವಾಗತಿಸಿದ್ದಾರೆ. ಜನಸಂಖ್ಯೆ ನಿಯಂತ್ರಣ, ಸಂಪನ್ಮೂಲ ವರ್ಧಿಸುವವರಿಗೆ ಗೌರವ ನೀಡುವುದು, ಬಳಸಿ ಎಸೆಯುವ ಪ್ಲಾಸ್ಟಿಕ್ ನಿರ್ಬಂಧ ವಿಚಾರವನ್ನು ಚಿದಂಬರಂ ಬೆಂಬಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.