ಶಾಶ್ವತ ಪರ್ಯಾಯ ವಸತಿ ಕಲ್ಪಿಸಿ: ದವೆ

ಜಿಲ್ಲಾ ಮೇಲ್ವಿಚಾರಣಾಧಿಕಾರಿ ಸಭೆೆ•ಶೀಘ್ರ ಮನೆ-ಬೆಳೆ ಹಾನಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಿ

Team Udayavani, Aug 17, 2019, 10:00 AM IST

17-Agust-3

ದಾವಣಗೆರೆ: ಡಾ| ಸಂದೀಪ್‌ ದವೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ದಾವಣಗೆರೆ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾದ ಮನೆ, ಬೆಳೆ ಸೇರಿದಂತೆ ಇತರೆ ನಷ್ಟಗಳಿಗೆ ವಿಕೋಪ ನಿರ್ವಹಣೆ ಅನುದಾನದಲ್ಲಿ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮೇಲ್ವಿಚಾರಣಾಧಿಕಾರಿ ಡಾ| ಸಂದೀಪ್‌ ದವೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ಭವಿಸಿರುವ ಸಮಸ್ಯೆಗಳ ಪರಿಹಾರ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊನ್ನಾಳಿ ಮತ್ತು ಹರಿಹರ ಭಾಗದಲ್ಲಿ ನೆರೆಗೆ ತುತ್ತಾದ ವಸತಿಗಳು ವಾಸಿಸಲು ಯೋಗ್ಯವಿಲ್ಲವಾಗಿದ್ದರೆ ಬೇರೆಡೆ ಜಾಗ ಗುರುತಿಸಿ ಗುಂಪು ವಸತಿಗಳನ್ನು ನಿರ್ಮಿಸಿ ಶಾಶ್ವತ ಪರಿಹಾರ ಒದಗಿಸಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು 287 ಪಕ್ಕಾ ಮನೆಗಳು ಭಾಗಶಃ ಹಾನಿ ಮತ್ತು 1 ತೀವ್ರ ಹಾನಿಯಾಗಿರುತ್ತದೆ ಮತ್ತು 111 ಕಚ್ಚಾ ಮನೆಗಳು ಭಾಗಶಃ ಹಾನಿಯಾಗಿದ್ದು ಒಟ್ಟಾರೆ 339 ಮನೆಗಳು ಹಾನಿಗೊಳಗಾಗಿದ್ದು.38,55,400 ರೂ. ನಷ್ಟ ವಾಗಿದೆ.

ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಮನೆ ಗೋಡೆ ಬಿದ್ದು ಉಮಾದೇವಿ, ಧನುಷ್‌ ಎಂಬಿಬ್ಬರು ಮೃತಪಟ್ಟಿದ್ದಾರೆ. ಕುಟುಂಬದವರಿಗೆ 10 ಲಕ್ಷ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ತಿಳಿಸಿದರು.

ಚನ್ನಗಿರಿ ತಾಲೂಕಿನಲ್ಲಿ 2 ಎಮ್ಮೆ ಸಾವಿನಿಂದ 60 ಸಾವಿರ ನಷ್ಟವಾಗಿದೆ. ಅತಿವೃಷ್ಟಿಯಿಂದ ಒಟ್ಟು 619.21 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, ಭತ್ತ, ಹತ್ತಿ ಮತ್ತು ರಾಗಿ ಹಾನಿಯಾಗಿ 79,00,929 ನಷ್ಟವಾಗಿದೆ. 72 ಹೆಕ್ಟೇರ್‌ನಲ್ಲಿ ತರಕಾರಿ, ಹೂವು ಬಾಳೆ ಹಾನಿಯಿಂದ 5,29,800 ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಒಟ್ಟು 12,71,24,129 ನಷ್ಟ ಉಂಟಾಗಿದೆ ಎಂದು ಮಾಹಿತಿ ನೀಡಿದರು.

ಅತಿವೃಷ್ಟಿಯಿಂದ ರಸ್ತೆಗಳು, ಸೇತುವೆಗಳು, ಸರ್ಕಾರಿ ಕಟ್ಟಡಗಳು, ಟ್ಯಾಂಕ್‌ಗಳು ಹಾನಿಯಿಂದ 1.98 ಕೋಟಿ ನಷ್ಟ ಸಂಭವಿಸಿದೆ ಎಂದು ಜಿಲ್ಲಾ ಪಂಚಾಯತಿ ಅಧಿಕಾರಿ ತಿಳಿಸಿದರು.

ದಾವಣಗೆರೆ ಮತ್ತು ಹರಿಹರ ವಿಭಾಗದಲ್ಲಿ ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌, ಲೈನ್‌ ಹಾನಿಯಿಂದ ಒಟ್ಟು 2,74,78,000 ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಘವೇಂದ್ರಸ್ವಾಮಿ ಮಾತನಾಡಿ, ನ್ಯಾಮತಿ ತಾಲೂಕಿನ 4ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾವಣಿ ಹಾಳಾಗಿದೆ. ಒಟ್ಟು 40 ಪಿಎಚ್ಸಿ ದುರಸ್ತಿಗೊಳಗಾಗಿದ್ದು 71 ಲಕ್ಷ ಹಾನಿಯಾಗಿದೆ. ಅಗತ್ಯ ಔಷಧಿಗಳ ಲಭ್ಯತೆ ಇದೆ. ಕೊರತೆ ಕಂಡು ಬಂದಲ್ಲಿ ಖರೀದಿಸಲು ಅನುದಾನವಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ನಜ್ಮಾ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ರಸ್ತೆ, ಸೇತುವೆ, ಕುಡಿಯುವ ನೀರು ಪೈಪ್‌ಲೈನ್‌ ಹಾಗೂ ಇತರೆ ಹಾನಿಯಿಂದ 5.94 ಲಕ್ಷ ಹಾನಿ ಸಂಭವಿಸಿದೆ ಎಂದರು.

ಭತ್ತದ ಬೆಳೆ ಹಾನಿ ವಿವರವನ್ನು ಸಂಪೂರ್ಣಗೊಳಿಸಿದ ನಂತರ ಪರಿಹಾರ ಕ್ರಮ ಕೈಗೊಳ್ಳಬೇಕು. ಜಗಳೂರಿನಂತಹ ಬರ ಪೀಡಿತ ಪ್ರದೇಶಗಳಲ್ಲಿ ಅಡಿಕೆ ಮತ್ತು ಇತರೆ ನೀರು ಹೆಚ್ಚು ಬಯಸುವ ಬೆಳೆ ಬಿಟ್ಟು ಕಡಿಮೆ ನೀರಿನಿಂದ ಬೆಳೆಯಬಹುದಾದ ಪೂರಕ ಬೆಳೆಗಳನ್ನು ಉತ್ತೇಜಿಸಬೇಕು ಎಂದು ಡಾ| ಸಂದೀಪ್‌ ದವೆ ಸೂಚಿಸಿದರು.

ಜಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಕಂಬ, ಟ್ರಾನ್ಸ್‌ಫಾರ್ಮರ್‌ಗಳ ಸಂಖ್ಯೆ ಹೆಚ್ಚಿದೆ. ಅಲ್ಲಿ ಹೆಚ್ಚು ಮಳೆಯೇ ಆಗಿಲ್ಲ. ಆದ್ದರಿಂದ ಮರು ಪರಿಶೀಲನೆ ಮಾಡಬೇಕು. ಪಂಚಾಯತ್‌ರಾಜ್‌ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರಾಭಿವೃದ್ಧಿ ಕೋಶದ ವತಿಯಿಂದ ನೀಡಿರುವ ಅಂಕಿಅಂಶಗಳನ್ನೂ ಕೂಡ ಮರುಪರಿಶೀಲನೆ ಮಾಡಿ ನಷ್ಟದ ಅಂದಾಜನ್ನು ತಯಾರಿಸಬೇಕು. ಸಿಆರ್‌ಎಫ್‌ ಅನುದಾನದಲ್ಲಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಗಳೂರು ತಾಲೂಕು ಮತ್ತು ನೀರಿನ ಕೊರತೆ ಹೆಚ್ಚು ಇರುವ ಪ್ರದೇಶಗಳಲ್ಲಿನ ಬೋರ್‌ ಸುತ್ತಮುತ್ತ ರೀಚಾರ್ಜ್‌ ಪಿಟ್‌ಗಳನ್ನು ಈಗಲೇ ತೆಗೆದುಕೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲು ಸಿಇಒ ಎಚ್. ಬಸವರಾಜೇಂದ್ರಗೆ ಸೂಚಿಸಿದರು.

ಜಗಳೂರು ಪಟ್ಟಣಕ್ಕೆ ಸೂಳೆಕೆರೆಯಿಂದ ನೀರು ಸರಬರಾಜು ಮಾಡುವುತ್ತಿರುವುದರಿಂದ ಸಮಸ್ಯೆ ಇಲ್ಲ. 178 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಮೋದನೆ ಹಂತದಲ್ಲಿದೆ ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 6 ಗಂಜಿ ಕೇಂದ್ರ ತೆರೆಯಲಾಗಿತ್ತು. ಹರಿಹರದಲ್ಲಿ ಒಂದು ಗಂಜಿ ಕೇಂದ್ರವನ್ನು ಮಾತ್ರ ಮುಂದುವರೆಸಲಾಗಿದ್ದು, ಇನ್ನುಳಿದವನ್ನು ಪರಿಸ್ಥಿತಿ ಸುಧಾರಣೆಗೊಂಡ ಕಾರಣ ಸ್ಥಗಿತಗೊಳಿಸಲಾಗಿದೆ ಎಂದರು.

ಹರಿಹರದ ಗಂಜಿ ಕೇಂದ್ರದಲ್ಲಿರುವ ನಿವಾಸಿಗಳ ಮನೆಗಳು ಸುಸ್ಥಿತಿಯಲ್ಲಿದ್ದರೆ ಸ್ವಚ್ಛಗೊಳಿಸಿ, ಸಂತ್ರಸ್ತರ ಖಾತೆಗೆ ನಿಯಮಾನುಸಾರ 10 ಸಾವಿರ ನೀಡಿ ಕಳುಹಿಸಿಕೊಡುವಂತೆ ಡಾ| ದವೆ ಸೂಚಿಸಿದರು.

ನೆರೆ ಹಾನಿ ಕುರಿತು ಮತ್ತೂಮ್ಮೆ ಆದಷ್ಟು ಶೀಘ್ರದಲ್ಲಿ ಮರು ಪರಿಶೀಲನೆ ನಡೆಯಿಸಿ ಸಿಆರ್‌ಎಫ್‌ನಿಂದ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ನೆರೆ ಪ್ರದೇಶಗಳಲ್ಲಿ ಸಮರ್ಪಕ ವೈದ್ಯಕೀಯ ನೆರವು ಮತ್ತು ಸಾಂಕ್ರಾಮಿಕ ರೋಗ ಬಾರದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ತೋಟಗಾರಿಕೆ ಉಪ ನಿರ್ದೇಶಕ ಲಕ್ಷ್ಮಿಕಾಂತ ಬೊಮ್ಮಣ್ಣರ್‌ ಇತರರು ಇದ್ದರು.

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.