ಅಖಂಡ ಭಾರತವೇ ಸಂಪತ್ತು: ಬಿದರಿ
ದೇಶದಲ್ಲೆಡೆ ಉದ್ಯೋಗ ದೊರೆತರೂ ಹೋಗಿ•ಹೆತ್ತವರನ್ನು ಗೌರವದಿಂದ ಕಾಣಿರಿ
Team Udayavani, Aug 17, 2019, 2:51 PM IST
ಕಲಬುರಗಿ: ಶರಣಬಸವ ವಿವಿಯ ಇಂಡಕ್ಸನ್ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಮಾತನಾಡಿದರು.
ಕಲಬುರಗಿ: ವಿದ್ಯಾರ್ಥಿಗಳು ವೈಯಕ್ತಿಕ ಸಂಪತ್ತು, ಸ್ವಾರ್ಥ ಮನೋಭಾವನೆಗೆ ಬೆಲೆ ಕೊಡದೇ, ದೇಶಕ್ಕಾಗಿ ದುಡಿಯಬೇಕು. ಜತೆಗೆ ಇಡೀ ಭಾರತವೇ ನಮ್ಮ ಸಂಪತ್ತು ಎಂದು ತಿಳಿಯಬೇಕು ಎಂದು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಹೇಳಿದರು.
ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ಶರಣಬಸವ ವಿವಿಯಿಂದ ನಡೆಯುತ್ತಿರುವ ಇಂಡಕ್ಸನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶವೇ ಕುಟುಂಬ ಎಂದು ತಿಳಿದುಕೊಂಡು ಮುನ್ನಡೆದಲ್ಲಿ ಮಾತ್ರ ಭಾರತ ಸಮೃದ್ಧ ರಾಷ್ಟ್ರವಾಗುವುದಕ್ಕೆ ಸಾಧ್ಯ. ಇದರಲ್ಲಿ ಹೆಚ್ಚಿನ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಹೀಗಾಗಿ ತಾವು ಅಧ್ಯಯನ ಮಾಡುವ ವಿಷಯದಲ್ಲಿ ಪಾರದರ್ಶಕತೆ, ಗುಣಾತ್ಮಕ ಶಿಕ್ಷಣ ಪಡೆಯಬೇಕು ಎಂದರು. ಶರಣಬಸವ ವಿದ್ಯಾಸಂಸ್ಥೆಯಲ್ಲಿ ಎಂಜಿನಿಯರಿಂಗ್, ಬಿಬಿಎಂ, ಕಲಾ, ವಿಜ್ಞಾನ ಸೇರಿದಂತೆ ವಿವಿಧ ಹೊಸ ಕೋರ್ಸ್‌ಗಳು ಆರಂಭವಾಗಿವೆ. ಈ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವಾಗ ದೇಶದೆಲ್ಲೆಡೆ ಉದ್ಯೋಗವಕಾಶ ದೊರೆತರೆ ಖುಷಿಯಿಂದ ಹೋಗಬೇಕು. ಅವಕಾಶಗಳು ಮತ್ತೆ ಮರಳಿ ಬರುವುದಿಲ್ಲ. ನಿಮ್ಮ ಕರ್ತವ್ಯದಿಂದ ದೇಶಾಭಿಮಾನ ಹೆಚ್ಚುತ್ತದೆ ಎಂದು ಹೇಳಿದರು.
ವಿವಿ ಕುಲಪತಿ ಡಾ| ನಿರಂಜನ ನಿಷ್ಠಿ ಮಾತನಾಡಿ, ಶ್ರವಣಕುಮಾರ ಹೆತ್ತ ತಂದೆ, ತಾಯಿಯನ್ನು ಯಾವ ರೀತಿ ಗೌರವದಿಂದ ಕಂಡಿದ್ದರು. ಅದೇ ರೀತಿ ನೀವು ಹೆತ್ತವರನ್ನು ಪ್ರೀತಿಸಿ, ಗೌರವಿಸಿ ಎಂದರು.
ಶರಣಬಸವ ವಿವಿ ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿ.ವಿ ಕುಲಸಚಿವ ಡಾ| ಅನೀಲಕುಮಾರ ಬಿಡವೆ, ವಿವಿ ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ, ಡಾ| ಶಿವದತ್ತ ಹೊನ್ನಳಿ, ಡಾ| ಬಸವರಾಜ ಮಠಪತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.