ಆಲಮಟ್ಟಿ ಜಲಾಶಯಕ್ಕೆ ಭಾರೀ ಬಿಗಿ ಭದ್ರತೆ
• ಬಾದಾಮಿ-ಐಹೊಳೆ ಸೇರಿ ಪ್ರವಾಸಿ ತಾಣಗಳಲ್ಲಿ ಭದ್ರತೆ ಹೆಚ್ಚಳ • ಬಸ್-ರೈಲ್ವೆ ನಿಲ್ದಾಣಗಳಲ್ಲಿ ಪ್ರತಿ ಗಂಟೆಗೊಮ್ಮೆ ವಾಹನ ತಪಾಸಣೆ
Team Udayavani, Aug 18, 2019, 12:32 PM IST
ಬಾಗಲಕೋಟೆ: ಆಲಮಟ್ಟಿ ಡ್ಯಾಂಗೆ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ.
ಬಾಗಲಕೋಟೆ: ಭಯೋತ್ಪಾದಕ ಕೃತ್ಯ ನಡೆಯಬಹುದೆಂಬ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಬಿಗಿ ಭದ್ರತೆ ಒದಗಿಸಲಾಗಿದೆ.
ದೇಶದ 2ನೇ ಅತಿದೊಡ್ಡ ಜಲಾಶಯ ಎಂಬ ಖ್ಯಾತಿ ಪಡೆದ ಆಲಮಟ್ಟಿ ಜಲಾಶಯದ ಒಟ್ಟು 26 ಕ್ರಸ್ಟ್‌ಗೇಟ್‌ಗಳಲ್ಲಿ 12 ಗೇಟ್‌ಗಳು ಬಾಗಲಕೋಟೆ ಜಿಲ್ಲೆ ವ್ಯಾಪ್ತಿಗೆ ಬಂದರೆ, ಇನ್ನುಳಿದ 14 ಗೇಟ್‌ಗಳು ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿವೆ. ಹೀಗಾಗಿ ಎರಡೂ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆಲಮಟ್ಟಿ ಡ್ಯಾಂಗೆ ಭದ್ರತೆ ಬಿಗಿಗೊಳಿಸಿದ್ದಾರೆ.
ಪ್ರವಾಸಿ ತಾಣಗಳಲ್ಲೂ ಭದ್ರತೆ: ಜಿಲ್ಲೆಯ ಪಾರಂಪರಿಕ ತಾಣಗಳಾದ ಬಾದಾಮಿ, ಮೇಣಬಸದಿ, ಮಹಾಕೂಟ, ಪಟ್ಟದಕಲ್ಲ, ಕೂಡಲಸಂಗಮ, ಐಹೊಳೆ ಸೇರಿದಂತೆ ಪ್ರವಾಸಿ ತಾಣಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ಪ್ರವಾಹದಿಂದ ಪಟ್ಟದಕಲ್ಲ-ಐಹೊಳೆಯ ಪ್ರಾಚೀನ ಸ್ಮಾರಕಗಳು ನೀರಿನಲ್ಲಿ ನಿಂತು ರಾಡಿಮಯವಾಗಿವೆ. ಭಾರತೀಯ ಪುರಾತತ್ವ ಇಲಾಖೆ ಸ್ವಚ್ಛತೆ ಕಾರ್ಯ ಕೈಗೊಂಡಿದೆ.
ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ: ಇನ್ನು ಬಾದಾಮಿ, ಗುಳೇದಗುಡ್ಡ, ಬಾಗಲಕೋಟೆ, ಸೀತಿಮನಿ ಆರ್‌ಎಸ್, ಮುಗಳೊಳ್ಳಿ, ಕಡ್ಲಿಮಟ್ಟಿ ರೈಲ್ವೆ ನಿಲ್ದಾಣಗಳಲ್ಲೂ ಪ್ರತಿ ಗಂಟೆಗೊಮ್ಮೆ ತಪಾಸಣೆ ನಡೆಯುತ್ತಿದೆ. ರೈಲ್ವೆ ಮತ್ತು ಬಸ್ ನಿಲ್ದಾಣಗಳಿಗೆ ಬರುವ ವಾಹನ, ಹೊರ ಹೋಗುವ ವಾಹನ ಹಾಗೂ ಅಪರಿಚಿತ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅವರನ್ನು ವಿಚಾರಿಸಲಾಗುತ್ತಿದೆ.
ಹೆಚ್ಚುವರಿ ಜವಾಬ್ದಾರಿ: ಕಳೆದ ಆ.1ರಿಂದ ಜಿಲ್ಲೆಯಾದ್ಯಂತ ಪ್ರವಾಹ ಬಂದಿದ್ದು, 1 ಸಾವಿರಕ್ಕೂ ಹೆಚ್ಚು ಪೊಲೀಸರು ಪ್ರವಾಹ ಪರಿಸ್ಥಿತಿ ನಿಭಾಯಿಸಲು ನಿಯೋಜನೆಗೊಂಡಿದ್ದರು. ಈಗಲೂ ಮುಧೋಳ, ಜಮಖಂಡಿ, ಹುನಗುಂದ, ಅರ್ಧ ಬಾಗಲಕೋಟೆ ತಾಲೂಕಿನಲ್ಲಿ ಪರಿಹಾರ ಕೇಂದ್ರ, ಹಳೆಯ ಮನೆಗಳಿಗೆ ಜನರು ಹೋಗದಂತೆ ಎಚ್ಚರಿಕೆ ವಹಿಸುವ ಕೆಲಸದಲ್ಲಿ ಪೊಲೀಸರು ನಿರತರಾಗಿದ್ದಾರೆ. ಈ ಜವಾಬ್ದಾರಿ ಜತೆಗೆ ಕೇಂದ್ರ ಗುಪ್ತಚರ ಇಲಾಖೆ, ಭಯೋತ್ಪಾದಕ ದಾಳಿ ಕುರಿತು ಮುನ್ನೆಚ್ಚರಿಕೆ ನೀಡಿದ್ದರಿಂದ ಪೊಲೀಸರು ಹೆಚ್ಚುವರಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ಖಚಿತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.