ಗುರುಸಾರ್ವಭೌಮರ 348ನೇ ಆರಾಧನಾ ಮಹೋತ್ಸವ
Team Udayavani, Aug 18, 2019, 1:18 PM IST
ಶೃಂಗೇರಿ: ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಶ್ರೀ ಗುರುರಾಯರ 348ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುಸಾರ್ವಭೌಮರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಶೃಂಗೇರಿ: ಮೆಣಸೆ ಗ್ರಾಪಂ ವ್ಯಾಪ್ತಿಯ ಕಲ್ಕಟ್ಟೆಯ ತುಂಗಾ ನದಿ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಶ್ರೀ ಗುರುರಾಯರ 348ನೇ ಆರಾಧನಾ ಮಹೋತ್ಸವ ಶನಿವಾರ ಶ್ರದ್ಧಾ-ಭಕ್ತಿಯಿಂದ ನಡೆಯಿತು.
ಶುಕ್ರವಾರದಿಂದ ಆರಂಭವಾಗಿರುವ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ರಾಯರ ಮಠವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ತಾಲೂಕಿನ ವಿವಿಧ ಭಾಗಗಳಿಂದ ಭಕ್ತರು ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಶುಕ್ರವಾರ ಸಂಜೆ ಸ್ವಾಮಿ ಸನ್ನಿಧಿಯಲ್ಲಿ ಹಾಗೂ ಶ್ರೀ ವೀರಾಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಗೀತಾ ರಮಾನಂದ್‌ರಿಂದ ವೀಣಾವಾದನ ನಡೆಯಿತು.
ಶನಿವಾರ ಬೆಳಗ್ಗೆಯಿಂದ ಆರಾಧನಾ ಕಾರ್ಯಕ್ರಮ ಹಾಗೂ ಶ್ರೀ ಆಂಜನೇಯ ಮೂಲಮಂತ್ರ ಹೋಮ ನಡೆಯಿತು. ನಂತರ ಪಂಚಾಮೃತಾಭಿಷೇಕ, ಮಹಾಮಂಗಳಾರತಿ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಭಾರತೀ ಸಂಗೀತ ಶಾಲೆಯ ಸಾವಿತ್ರಿ ಪ್ರಭಾಕರ್ ಮತ್ತು ಶಿಷ್ಯಂದಿರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಮಾತನಾಡಿ, ಭಕ್ತರ ಸಹಕಾರದಿಂದ ರಾಯರ ಬೃಂದಾವನ ಅಭಿವೃದ್ಧಿ ಹೊಂದುತ್ತಿದ್ದು, ಪ್ರತಿ ವರ್ಷ ರಾಯರ ಆರಾಧನೆಯನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಶ್ರೀ ಶಾರದಾ ಪೀಠಕ್ಕೆ ಬರುವ ಭಕ್ತಾದಿಗಳು ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನಕ್ಕೂ ಭೇಟಿ ನೀಡಬಹುದಾಗಿದೆ. ಈಗಾಗಲೇ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ವ್ಯಾಸ ಕಲಾ ಮಂದಿರವನ್ನು ಸಮಾರಂಭಗಳಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.