‘ಕಣಮಸ್’ ದುರಸ್ತಿ ಮಾಡಿ
ಶಾಲೆ-ಕಾಲೇಜಿಗೆ ತೆರಳಲು 5ಕಿ.ಮೀ ಸಂಚಾರ•ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ
Team Udayavani, Aug 18, 2019, 3:06 PM IST
ಆಳಂದ: ಕಣಮಸ್ ಸೇತುವೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ದುರಸ್ತಿಗೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಗ್ರಾಮಸ್ಥರೊಂದಿಗೆ ಮುಖಂಡರು ಪ್ರತಿಭಟನೆ ನಡೆಸಿದರು.
ಆಳಂದ: ತಾಲೂಕಿನ ಕಣಮಸ್ ಗ್ರಾಮದ ಸಂಪರ್ಕ ಸೇತುವೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದು, ಕೂಡಲೇ ದುರಸ್ತಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಕಚೇರಿ ಎಂದು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ ಗ್ರಾಮದ ನಾಗೀಂದ್ರಪ್ಪ ಥಂಬೆ ಮಾತನಾಡಿ, ಸೇತುವೆ ಮಳೆ ನೀರಿಗೆ ಕುಸಿದಿರುವುದರಿಂದ ಗ್ರಾಮದ ಸಂಚಾರಕ್ಕೆ ಅಡ್ಡಿಯಾಗಿ ಜನರು ಹೈರಾಣವಾಗುತ್ತಿದ್ದಾರೆ. ಆದರೂ ತಾಲೂಕು ಆಡಳಿತ ಮತ್ತು ಜನ ಪ್ರತಿನಿಧಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇತುವೆ ಕುಸಿದಿರುವದರಿಂದ ಗ್ರಾಮಕ್ಕೆ ಬರುವ ಬಸ್ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಐದು ಕಿ.ಮೀ ನಡೆದುಕೊಂಡು ಹೋಗುವಂತಾಗಿದೆ ಎಂದು ಗೋಳು ತೋಡಿಕೊಂಡರು.
ಸೇತುವೆ ಕುಸಿದಿರುವುದರಿಂದ ವಾಹನಗಳ ಸಂಚಾರ ಸಾಧ್ಯವಿಲ್ಲದಾಗಿದೆ. ಇದೇ ಮಾರ್ಗವಾಗಿ ಭಾಲಖೇಡ, ಕೊತನಹಿಪ್ಪರಗಾ, ನಂದಗೂರ, ಹತ್ತರಗಾ ಗ್ರಾಮದ ಪ್ರಯಾಣಕ್ಕೆ ಅಡ್ಡಿಯಾಗಿದೆ. ಶೀಘ್ರವೇ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೇ ಆಳಂದ ಹಳೆ ಚೆಕ್‌ಪೋಸ್ಟ್ ಹತ್ತಿರ ರಸ್ತೆ ತಡೆ ಚಳವಳಿ ಮಾಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಬಸವರಾಜ ಎಂ.ಬೆಣ್ಣೆಶಿರೂರ ಮನವಿ ಸ್ವೀಕರಿಸಿ ಸೇತುವೆ ದುರಸ್ತಿ ಮಾಡಿಸುವ ಭರವಸೆ ನೀಡಿದರು.
ಸಂಘದ ತಾಲೂಕು ಅಧ್ಯಕ್ಷ ವಿಜಯಕುಮಾರ ಹತ್ತರಕಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜುಳಾ ಭಜಂತ್ರಿ, ಪುರಸಭೆ ಸದಸ್ಯ ಶಿವಪುತ್ರ ನಡಗೇರಿ, ಸಿದ್ಧು ವೇದಶಟ್ಟಿ, ಪುರಸಭೆ ಸದಸ್ಯ ದೊಂಡಿಬಾ ಸೋಲಂಕರ್, ಮಲ್ಲಿಕಾರ್ಜುನ ಬೋಳಣಿ, ಶರಣಯ್ಯ ಸ್ವಾಮಿ, ದಶವಂತ, ನೀಲಮ್ಮ ವಾಲಿಕರ್, ಸುಮನಬಾಯಿ ಡಾಕೆ, ಮಹಾನಂದ ನರೋಣಿ, ರಾಜು ಡಾಕೆ, ವಿಶ್ವ ಸ್ವಾಮಿ, ಬಸವರಾಜ ಬಿರಾದಾರ, ಪ್ರವೀಣ ಹೂಗಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.