ಪತ್ರಕರ್ತರಿಂದ ನೆರೆ ಸಂತ್ರಸ್ತರಿಗೆ ದೇಣಿಗೆ
Team Udayavani, Aug 18, 2019, 3:30 PM IST
ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾ ಕೇಂದ್ರದ ಪತ್ರಕರ್ತರು ನೆರೆ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಿದರು.
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಪತ್ರ ಕರ್ತರು ಶನಿವಾರ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ವ್ಯಾಪಾರ ಸ್ಥರಿಂದ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದರು.
ನಗರದ ಪತ್ರಕರ್ತರ ಭವನ ಆವರಣ ದಿಂದ ಆರಂಭಗೊಂಡ ದೇಣಿಗೆ ಸಂಗ್ರಹ ಬಿಬಿ ರಸ್ತೆ, ಬಜಾರ್ ರಸ್ತೆ, ಮಹಾಕಾಳಿ ರಸ್ತೆ, ಗಂಗಮ್ಮ ಗುಡಿ ರಸ್ತೆ, ಎಂ ರಸ್ತೆಯ ಮುಖಾಂತರ ಸಾಗಿ ಸಾರ್ವಜನಿಕರಿಂದ, ವರ್ತಕರಿಂದ ಸಂಘ, ಸಂಸ್ಥೆಗಳಿಂದ ದೇಣಿಗೆ ಸಂಗ್ರಹಿಸಲಾಯಿತು.
ನೆರೆ ಸಂತ್ರಸ್ತರಿಗೆ ನೆರವಾಗಲು ಆಸಕ್ತಿ ಇರುವ ಸಾರ್ವಜನಿಕರು ಅಗತ್ಯ ದಿನಸಿ ಪದಾರ್ಥಗಳು, ಉಡುಪುಗಳು ಮತ್ತಿತರ ಅಗತ್ಯ ದಿನಬಳಕೆಯ ವಸ್ತುಗಳನ್ನು ನಗ ರದ ಪತ್ರಕರ್ತರ ಭವನಕ್ಕೆ ತಲುಪಿಸ ಬಹು ದಾಗಿದೆ. ಈಗಾಗಲೇ ಪತ್ರಕರ್ತರ ಮನ ವಿಗೆ ಸ್ಪಂದಿಸಿ ಜಿಲ್ಲಾ ಕೇಂದ್ರದ ಸಮಾಜ ಸೇವಕರು, ವರ್ತಕರು ಅಕ್ಕಿ, ಬೇಳೆ, ರವೆ, ಎಣ್ಣೆ, ಬಟ್ಟೆಗಳು, ಕುಡಿಯುವ ನೀರಿನ ಬಾಟಲುಗಳನ್ನು ಪತ್ರಕರ್ತರ ಭವನಕ್ಕೆ ತಲುಪಿಸಿದ್ದಾರೆ. ದೇಣಿಗೆ ಸಂಗ್ರಹ ಕಾರ್ಯ ಕ್ರಮದಲ್ಲಿ ಹಲವು ಪತ್ರಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.