ಸಮಸ್ಯೆ ನಿವಾರಣೆಗೆ ಫೋನ್‌ಇನ್‌ ಕಾರ್ಯಕ್ರಮ

ಸರ್ಕಾರದ ಸವಲತ್ತುಗಳು ಸಾರ್ವಜನಿಕರ ಮನೆ ಬಾಗಿಲಿಗೆ: ತಹಶೀಲ್ದಾರ್‌ ದಯಾನಂದ್‌

Team Udayavani, Aug 18, 2019, 3:34 PM IST

cb-tdy-2

ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಫೋನ್‌ಇನ್‌ ಕಾರ್ಯಕ್ರಮದ ಮೂಲಕ ತಹಶೀಲ್ದಾರ್‌ ಎಂ.ದಯಾನಂದ್‌ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಶಿಡ್ಲಘಟ್ಟ: ತಾಲೂಕಿನಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಫೋನ್‌ ಇನ್‌ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಂದಾಯ ಇಲಾಖೆಯ ಸೇವೆ ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಹಶೀಲ್ದಾರ್‌ ಎಂ. ದಯಾನಂದ್‌ ತಿಳಿಸಿದರು.

ನಗರದ ತಾಲೂಕು ಕಚೇರಿಯಲ್ಲಿ ಫೋನ್‌ಇನ್‌ ಕಾರ್ಯಕ್ರಮದಲ್ಲಿ ಕರೆಗಳನ್ನು ಸ್ವೀಕರಿಸಿ ಮಾತ ನಾಡಿದ ಅವರು, ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡುವ ಸಲುವಾಗಿ ಅನೇಕ ಕಾರ್ಯಕ್ರಮ ಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗು ತ್ತದೆ.

ಪರಿಣಾಮಕಾರಿ ಅನುಷ್ಠಾನ: ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫ‌ಲಾನುಭವಿಗಳನ್ನು ಗುರುತಿಸಿ ಮಾಸಾಶನ ಮಂಜೂರು ಮಾಡಲು ಪಿಂಚಣಿ ಅದಾಲತ್‌ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಕಂದಾಯ ಅದಾಲತ್‌ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದರು.

ಮಾಸಾಶನ ನೀಡಲು ಲಂಚ: ನಗರದ ಕೃಷ್ಣಮೂರ್ತಿ ಕರೆ ಮಾಡಿ ಪಿಂಚಣಿ ಹಣ ನೀಡಲು ಅಂಚೆ ಪೇದೆಗಳು ಅಕ್ರಮವಾಗಿ ಹಣ ಸ್ವೀಕಾರ ಮಾಡುತ್ತಿದ್ದಾರೆ ಎಂದು ದೂರು ನೀಡಿದರು. ಇದಕ್ಕೆ ಸ್ಪಂದಿಸಿದ ತಾಲೂಕು ದಂಡಾಧಿ ಕಾರಿಗಳು, ಫ‌ಲಾನುಭವಿಗಳು ಕಡ್ಡಾಯವಾಗಿ ಬ್ಯಾಂಕ್‌ ಖಾತೆ ತೆರೆದು ಆಧಾರ್‌ ಲಿಂಕ್‌ ಮಾಡಿದರೆ ನೇರವಾಗಿ ಫ‌ಲಾನುಭವಿಗಳ ಖಾತೆ ಜಮಾ ಆಗಲಿದೆ ಎಂದು ಸಲಹೆ ನೀಡಿದರು.

ಸ್ಮಶಾನಕ್ಕೆ ಸಂಬಂಧಿಸಿ ದೂರು: ಎದ್ದಲತಿಪ್ಪೇನಹಳ್ಳಿ ಸುರೇಶ್‌, ಸಾರ್ವಜನಿಕ ಸ್ಮಶಾನದ ಕುರಿತು ದೂರು ನೀಡಿದಾಗ ಈ ಸಂಬಂಧ ಪ್ರಸ್ತಾವನೆ ಉಪವಿಭಾ ಗಾಧಿಕ ಞಾರಿಗಳಿಗೆ ಕಳುಹಿಸಲಾಗುತ್ತದೆ ಎಂದರು.

ಬಚ್ಚಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ರಸ್ತೆಯಿಲ್ಲ ಎಂಬ ದೂರಿಗೆ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕೆಂದು ರಾಜಸ್ವ ನಿರೀಕ್ಷಕರಿಗೆ ಸೂಚನೆ ನೀಡಿದರು

ಕೆ.ಕೆ.ಪೇಟೆಯಿಂದ ಕರೆ ಮಾಡಿದ ನಾಗರಿಕರಿಬ್ಬರು ಮನೆಯೊಂದರ ಜಾಗ ಒತ್ತುವರಿ ಮಾಡಿಕೊಂಡಿ ದ್ದಾರೆ. ಅದನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದರು. ಮತ್ತೂಂದೆಡೆ ಕದಿರಿಪಾಳ್ಯದ ವೆಂಕಟೇಶ್‌ ಎಂಬುವರು 22 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ .ಇದರಿಂದ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗಿದೆ ಎಂದು ದೂರು ಸಲ್ಲಿಸಿದರು. ನಗರಸಭೆಯ ಪೌರಾಯುಕ್ತರು ಈ ಸಮಸ್ಯೆ ಬಗೆಹರಿಸಬೇಕಾಗಿದೆ. ಆದರೂ ಸಹ ತಾವು ನಗರಸಭೆಯ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.

ಶಿಡ್ಲಘಟ್ಟ ನಗರ ಪ್ರದೇಶದಲ್ಲಿ ಆಧಾರ್‌ ನೋಂದಣಿ ಕೇಂದ್ರ ಆರಂಭಿಸಲು ಮತ್ತು ವಾರ್ಡ್‌ ಮಟ್ಟದಲ್ಲಿ ಪಿಂಚಣಿ ಅದಾಲತ್‌ ನಡೆಸಬೇಕೆಂದು ಕರ್ನಾಟಕ ವಿಶ್ವನಿರ್ಮಾಣ ಸೇನೆಯ ಪದಾಧಿಕಾರಿ ಬಾಬುಹುಸೇನ್‌ ಮನವಿಗೆ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು, ತಾಲೂಕು ಕಚೇರಿಯಲ್ಲಿ ಆಧಾರ್‌ ನೋಂದಣಿ ಕೇಂದ್ರ ಆರಂಭಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ತಹಶೀಲ್ದಾರ್‌ ಗ್ರೇಡ್‌-2 ಹನುಮಂತರಾವ್‌, ಉಪ ತಹಶೀಲ್ದಾರ್‌ ಮಂಜುನಾಥ್‌, ಕಸಬಾ ರಾಜಸ್ವ ನಿರೀಕ್ಷಕ ವಿಶ್ವನಾಥ್‌, ಶಿರಸ್ತೇದಾರ ಮಂಜುನಾಥ್‌, ಗ್ರಾಮ ಲೆಕ್ಕಾಧಿಕಾರಿ ಪ್ರೀತಂ, ಆಹಾರ ನಿರೀಕ್ಷಕ ನಾರಾಯಣಸ್ವಾಮಿ, ಜಂಗಮಕೋಟೆ ಹೋಬಳಿ ರಾಜಸ್ವ ನಿರೀಕ್ಷಕ ಸುಪ್ರೀತ್‌, ಬಶೆಟ್ಟಿಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕ ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.