ಚಿಕ್ಕೋಡಿ-ಬಾದಾಮಿ ನೆರೆ ಸಂತ್ರಸ್ತರಿಗೆ ನೆರವು
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ಪರಿಹಾರ ಸಾಮಗ್ರಿ ವಿತರಣೆ- ಆರ್ಥಿಕ ಸಹಾಯ
Team Udayavani, Aug 19, 2019, 3:47 PM IST
ಚಳ್ಳಕೆರೆ: ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದ ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಿಸಲಾಯಿತು.
ಚಳ್ಳಕೆರೆ: ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ತಾಲೂಕಿನಾದ್ಯಂತ ಸಂಗ್ರಹಿಸಿದ 75 ಲಕ್ಷ ರೂ. ಮೌಲ್ಯದ ಆಹಾರ ಪದಾರ್ಥ, ವಸ್ತುಗಳು ಹಾಗೂ ಹಣವನ್ನು ಏಳು ಲಾರಿಗಳ ಮೂಲಕ ಬಾದಾಮಿ ಹಾಗೂ ಚಿಕ್ಕೋಡಿ ವಿಧಾನಸಭಾ ಕ್ಷೇತ್ರಗಳ ನೆರೆಪೀಡಿತ ಗ್ರಾಮಗಳಿಗೆ ತಲುಪಿಸಲಾಗಿದೆ. ನೆರೆ ಸಂತ್ರಸ್ತರಿಗೆ ಸಹಾಯಹಸ್ತ ನೀಡಲಾಯಿತು.
ಈ ಬಗ್ಗೆ ಮಾಹಿತಿ ನೀಡಿದ ನಗರಸಭಾ ಸದಸ್ಯ ಬಿ.ಟಿ. ರಮೇಶ್ ಗೌಡ, ಶನಿವಾರ ರಾತ್ರಿ ಚಳ್ಳಕೆರೆ ನಗರದಿಂದ ಹೊರಟು ಭಾನುವಾರ ಬೆಳಿಗ್ಗೆ ಚಿಕ್ಕೋಡಿಗೆ ತೆರಳಿದ್ದೇವೆ. ಅಲ್ಲಿನ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದೇವೆ. ಯಾವ ಪ್ರದೇಶದ ಜನರಿಗೆ ಸೌಲಭ್ಯಗಳು ದೊರೆಯದೆ ಪರಿತಪಿಸುತ್ತಿದ್ದರೋ ಅಂತಹ ಪ್ರದೇಶಗಳಿಗೆ ತೆರಳಿ ಚಳ್ಳಕೆರೆಯಿಂದ ತರಲಾದ ಆಹಾರ ಪದಾರ್ಥ ಹಾಗೂ ವಸ್ತುಗಳನ್ನು ವಿತರಣೆ ಮಾಡಲಾಯಿತು ಎಂದರು.
ನೆರೆ ಸಂತ್ರಸ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ, ರಾಜ್ಯದಲ್ಲಿ ಮಳೆಯಾಗದೆ ಬರಕ್ಕೆ ತುತ್ತಾಗಿರುವ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರು ನಿಮ್ಮ ಸಂಕಷ್ಟಗಳಿಗೆ ನಿರೀಕ್ಷೆಗೂ ಮೀರಿ ನೆರವಾಗಿದ್ದಾರೆ. ತಮ್ಮ ಕಷ್ಟದ ನಡುವೆಯೂ ನಿಮ್ಮ ಜೀವನ ಉತ್ತಮಗೊಳ್ಳಲಿ ಎಂದು ಹಾರೈಸಿ ತಮ್ಮಲ್ಲಿನ ಆಹಾರ ಪದಾರ್ಥ, ವಸ್ತುಗಳು ಹಾಗೂ ಹಣವನ್ನು ದಾನವಾಗಿ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ನೀವೆಲ್ಲರೂ ಹೊಸ ಬದುಕು ಕಟ್ಟಿಕೊಳ್ಳಬೇಕೆಂಬ ಅಭಿಲಾಷೆ ನಮ್ಮದು. ಮೂರು ದಿನಗಳ ಕಾಲ ವಿವಿಧ ಪ್ರದೇಶಗಳಿಗೆ ತೆರಳಿ ವಸ್ತುಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಕೆ. ವೀರಭದ್ರಪ್ಪ, ವೈ. ಪ್ರಕಾಶ್, ಟಿ. ಮಲ್ಲಿಕಾರ್ಜುನ, ತಾಪಂ ಸದಸ್ಯ ಜಿ. ವೀರೇಶ್, ಆರ್. ಪ್ರಸನ್ನಕುಮಾರ್, ಜಿಪಂ ಮಾಜಿ ಸದಸ್ಯರಾದ ಬಾಬು ರೆಡ್ಡಿ, ಎನ್. ರವಿಕುಮಾರ್, ಮುಖಂಡರಾದ ಕೃಷ್ಣ, ಆರ್. ಭರಮಣ್ಣ, ಪಿ. ತಿಪ್ಪೇಸ್ವಾಮಿ, ಕೆ. ಸೈಫುಲ್ಲಾ, ಶೇಖರಪ್ಪ, ತಿಪ್ಪೇಶ್ ಮತ್ತಿತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.