“ಕೆಜಿಎಫ್’ ಸಂಭಾಷಣೆಕಾರ ಈಗ ನಿರ್ದೇಶಕ
ದಿಲ್‌ಮಾರ್‌ಗೆ ಮುಹೂರ್ತ ಸಂಭ್ರಮ
Team Udayavani, Aug 20, 2019, 3:01 AM IST
ಯಶ್ ನಾಯಕರಾಗಿರುವ “ಕೆ.ಜಿ.ಎಫ್’ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಎಂ.ಚಂದ್ರಮೌಳಿ ಈ ಚಿತ್ರದ ನಿರ್ದೇಶಕರಾಗಿದ್ದಾರೆ. ಈ ಹಿಂದೆ “ರಥಾವರ” ಚಿತ್ರಕ್ಕೆ ಗೀತರಚನೆ ಮಾಡಿದ್ದ ಚಂದ್ರಮೌಳಿ ಅವರು ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿಯೂ ಅನುಭವ ಪಡೆದಿದ್ದಾರೆ. ಈಗ ಚಂದ್ರಮೌಳಿ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅದು “ದಿಲ್‌ಮಾರ್’ ಸಿನಿಮಾ ಮೂಲಕ.
ಇತ್ತೀಚೆಗೆ ಅವರ ಹೊಸ ಚಿತ್ರದ ಮುಹೂರ್ತ ನಡೆಯಿತು. ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದು, ನಂತರ ಮೈಸೂರು ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಚಂದ್ರಮೌಳಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ತೆಲುಗಿನ “ಅರ್ಜುನ್ ರೆಡ್ಡಿ’ ಚಿತ್ರಕ್ಕೆ ಸಂಗೀತ ನೀಡಿದ್ದ ರದನ್ ಸಂಗೀತ ನೀಡುತ್ತಿದ್ದಾರೆ.
ವಿ.ನಾಗೇಂದ್ರಪ್ರಸಾದ್ ಹಾಗೂ “ಬಹದ್ದೂರ್’ ಚೇತನ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಗಿರೀಶ್ ಗೌಡ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ವಿಕ್ರಂ ಮೋರ್ ಸಾಹಸ ಹಾಗೂ ಜಿ.ಮೂರ್ತಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಾಮ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ಆಂಧ್ರ ಮೂಲದ ಡಿಂಪಲ್ ಹಯಾತಿ ಈ ಚಿತ್ರದ ನಾಯಕಿ.
ಸಾಯಿಕುಮಾರ್ ಖಳನಾಯಕನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ. ನಾಗರಾಜ್ ಭದ್ರಾವತಿ ಅವರು ನಿರ್ಮಿಸುತ್ತಿರುವ “ದಿಲ್‌ಮಾರ್’ ಚಿತ್ರಕ್ಕೆ ಲಹರಿ ಸಂಸ್ಥೆಯ ವೇಲು ಅವರು ಆರಂಭ ಫಲಕ ತೋರಿದರು. ಸಂಜೀವ್ ಕ್ಯಾಮೆರಾ ಚಾಲನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.