ಸಮಸ್ಯೆ ಎದುರಾದರೆ ಸಂಪರ್ಕಿಸಿ: ಶಾಸಕ
Team Udayavani, Aug 20, 2019, 3:00 AM IST
ತಿ.ನರಸೀಪುರ: ಕೃಷಿ ಪರಿಕರ, ಗೊಬ್ಬರ, ಬಿತ್ತನೆ ಬೀಜ ಮತ್ತಿತರ ಸಮಸ್ಯೆಗಳು ಎದುರಾದರೆ ರೈತರು ನೇರವಾಗಿ ತಮ್ಮನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಸದರ ಆದರ್ಶ ಗ್ರಾಮ ಹಾಗು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಮಗ್ರ ಅಭಿವೃದ್ಧಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅಗತ್ಯ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕೊಟ್ಟ ಮಾತಿನಂತೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ದುಡಿಯುತ್ತಿದ್ದು ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು.
ನಾಲೆಗಳಿಗೆ ನೀರು: ಈಗಾಗಲೇ ತಾಲೂಕಿನ ಎಲ್ಲಾ ನಾಲೆಗಳಿಗೂ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದ್ದು, ರೈತರು ಯಾವುದೇ ಆತಂಕಕ್ಕೆ ಒಳಗಾಗದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ. ಕೃಷಿ ಸಂಬಂಧ ಸಮಸ್ಯೆಗಳಿದ್ದರೆ ತಮ್ಮನ್ನು ಖುದ್ದಾಗಿ ಭೇಟಿ ನೀಡಿ, ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಿದರು. ಗ್ರಾಮ ವಿಕಾಸ ಯೋಜನೆಯಡಿ ಗ್ರಾಮಗಳ ಮೂಲಭೂತ ಸೌಕರ್ಯಕ್ಕಾಗಿ ಸರ್ಕಾರ ಅನುದಾನವನ್ನು ಕಂತಿನ ಮೂಲಕ ಬಿಡುಗಡೆ ಮಾಡುತ್ತಿದ್ದು, ಗ್ರಾಮಸ್ಥರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.
ಶಾಶ್ವತ ಪರಿಹಾರ: ಇದೇ ಸಂದರ್ಭದಲ್ಲಿ ಕೆಲವು ನದಿ ತೀರದ ಗ್ರಾಮಸ್ಥರು ಪ್ರವಾಹ ಬಂದಾಗ ಗ್ರಾಮಗಳು ಸಂಪೂರ್ಣ ಜಲಾವೃತವಾಗುತ್ತಿದ್ದು ಇದನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸುವಂತೆ ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಈ ಸಂಬಂಧ ಅಗತ್ಯ ಕ್ರಮಕ್ಕೆ ಮುಂದಾಗುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಕೈಯಂಬಳ್ಳಿ ನಟರಾಜು, ಜಿಪಂ ಸದಸ್ಯರಾದ ಟಿ.ಎಚ್.ಮಂಜುನಾಥನ್, ಜೈಪಾಲ್ ಭರಣಿ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಚಿನ್ನಸ್ವಾಮಿ, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಪ್ರಕಾಶ್, ಗುರುಮೂರ್ತಿ, ಕುಮಾರ ಶಂಭುದೇವನಪುರ ರಮೇಶ್, ಹೆಮ್ಮಿಗೆ ಹೊನ್ನನಾಯಕ, ಸೋಮಣ್ಣ, ದೀಪು ದರ್ಶನ್, ಗುತ್ತಿಗೆದಾರ ಮಹದೇವಸ್ವಾಮಿ, ಸಿಡಿಪಿಒ ಬಸವರಾಜು, ಅಧಿಕಾರಿಗಳಾದ ವಿಕಾಸ್, ನವೀನ್, ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ: ತಾಲೂಕಿನಲ್ಲಿ ಮೂರು ಕೋಟಿ ರೂ. ವೆಚ್ಚದ ಅನುದಾನದಡಿ ಹಿರಿಯೂರು, ಮಾದಾಪುರ, ಹೆಮ್ಮಿಗೆ, ಮರಡೀಪುರ, ಶಂಭುದೇವನಪುರ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಅನಿಲ್ ಕುಮಾರ್ ಭೂಮಿ ಪೂಜೆ ನೆರೆವೇರಿಸಿದರು. ಗೆಡ್ಡೆಹುಂಡಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ, ಶಂಭುದೇವನಪುರ ಹಾಗು ದೊಡ್ಡನಹುಂಡಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.