ಮರಾಟಿ ಸಮಾಜ ಸೇವಾ ಸಂಘ ಭೇಟಿ : ಸಂತ್ರಸ್ತರಿಗೆ ಸಾಂತ್ವನ
Team Udayavani, Aug 20, 2019, 5:40 AM IST
ಮಡಿಕೇರಿ: ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘ ಹಾಗೂ ಕೊಡಗು ಜಿಲ್ಲಾ ಅಂಬಾಭವಾನಿ, ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಪದಾಧಿಕಾರಿಗಳು ಕಾವೇರಿ ಪ್ರವಾ ಹದ ಸಂದರ್ಭದಲ್ಲಿ ಹಾನಿ ಗೀಡಾದ ಪ್ರದೇಶಕ್ಕೆ ಭೇಟಿ ನೀಡಿ, ಕುಟುಂಬಸ್ತರಿಗೆ ಸಾಂತ್ವನ ಹೇಳಿದರು.
ಜಿಲ್ಲೆಯಲ್ಲಿ ಆಗಷ್ಟ್ ತಿಂಗಳಲ್ಲಿ ಉಂಟಾದ ಕಾವೇರಿ ಪ್ರವಾಹದಿಂದ ಸಾಕಷ್ಟು ಮನೆಗಳು, ಆಸ್ತಿ-ಪಾಸ್ತಿಗಳು ಹಾನಿಯಾಗಿತ್ತು. ಈ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪ ಕಟ್ಟೆಮಾಡು ಪರಂಬು ಪೈಸಾರಿಯಲ್ಲಿ ಜನಾಂಗ ಬಾಂಧವರಾದ ಉದಯ, ವೆಂಕಟೇಶ್, ಮುರಳಿಧರ್, ಮೋಹನ್, ಶಿವಪ್ಪರವರ ಮನೆಗಳು ಸಂಪೂರ್ಣ ಹಾನಿಯಾಗಿತ್ತು. ಅಲ್ಲದೆ ವಾಲ್ನೂರು ಹಾಗೂ ಸಿದ್ದಾಪುರದ ಕಡಿಗೋಡು, ನೆಲ್ಲಿಹುದಿಕೇರಿಗೆ ಭೇಟಿ ನೀಡಿದ ಪದಾಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ್, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಪ್ರಕೃತಿ ವಿಕೋಪದಿಂದ ಸಾಕಷ್ಟು ಹಾನಿಯಾಗಿತ್ತು. ಇದರಲ್ಲಿ ನಮ್ಮ ಸಮುದಾಯ ಬಾಂಧವರು ಮನೆ ಕಳೆದುಕೊಂಡಿದ್ದರು. ಸರ್ಕಾರದ ಪರಿಹಾರದ ಜತೆಗೆ ಸಂಘದ ವತಿಯಿಂದ ಸಹಕಾರ ನೀಡಲಾಗುವುದು ಂದು ತಿಳಿಸಿದರು.
ಈ ಸಂದರ್ಭ ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಖಜಾಂಚಿ ಸಂಪತ್‌ಕುಮಾರ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್.ಯೋಗೇಂದ್ರ, ಪ್ರಮುಖರಾದ ಎಂ.ಟಿ.ದೇವಪ್ಪ, ಎಂ.ಟಿ.ಗುರುವಪ್ಪ, ರಾಮಣ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.