ಗಂಭೀರ ಆರೋಪಗಳಿಗೆ ಅಧ್ಯಕ್ಷೆ ಭಾವುಕ

• ಗಣನೆಗೆ ತೆಗೆದುಕೊಂಡಿಲ್ಲ ಸದಸ್ಯರ ವಾಗ್ಧಾಳಿ • ಗೈರಾದ ಅಧಿಕಾರಿಗಳ ವಿರುದ್ಧ ಅಧ್ಯಕ್ಷೆ ವೀರಲಕ್ಷ್ಮೀ ಗರಂ

Team Udayavani, Aug 20, 2019, 4:41 PM IST

rc-tdy-2

ರಾಯಚೂರು: ನಗರದ ಜಿಪಂ ಸಭಾಂಗಣದಲ್ಲಿ ಮಾಸಿಕ ಸಾಮಾನ್ಯ ಸಭೆ ನಡೆಯಿತು.

ರಾಯಚೂರು: ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಅಧಿಕಾರಿಗಳು ನಿಯಂತ್ರಣದಲ್ಲಿಲ್ಲ, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬಿತ್ಯಾದಿ ಗಂಭೀರ ಆರೋಪಗಳ ಸುರಿಮಳೆಗೈದ ಸದಸ್ಯರ ನಡೆಗೆ ನೊಂದ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸಾಮಾನ್ಯ ಸಭೆಯಲ್ಲಿ ಭಾವುಕರಾದ ಪ್ರಸಂಗ ಸೋಮವಾರ ಸಂಜೆ ಜರುಗಿದೆ.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಪಂ 8ನೇ ಸಾಮಾನ್ಯ ಸಭೆ ಬೆಳಗ್ಗೆಯಿಂದ ಸಂಜೆ ಸುಮಾರು 8 ಗಂಟೆವರೆಗೂ ನಡೆಯಿತು. ಸದಸ್ಯರಾದ ಗಂಗಣ್ಣ ಸಾಹುಕಾರ, ಮಹಾಂತೇಶ ಪಾಟೀಲ ಅತ್ತನೂರು ಮಾತನಾಡಿ, ಅನುದಾನ ಹಂಚಿಕೆಯಲ್ಲಿ ಅಧ್ಯಕ್ಷರು ತಾರತಮ್ಯ ಎಸಗಿದ್ದು, ನಮ್ಮನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ವೀರಲಕ್ಷ್ಮೀ, ನಾನು ಯಾರಿಗೂ ಅನ್ಯಾಯ ಎಸಗಿಲ್ಲ. ಎಲ್ಲ ಸದಸ್ಯರನ್ನು ಒಂದೇ ರೀತಿ ನೋಡಿದ್ದೇನೆ ಎಂದು ಭಾವುಕರಾಗಿ ಮಾತನಾಡಿದ್ದು, ಕಣ್ಣಂಚಲಿ ನೀರು ತಂದುಕೊಂಡ ಪ್ರಸಂಗ ಜರುಗಿದೆ. ನನ್ನನ್ನು ಸದಸ್ಯರೇ ಅಧ್ಯಕ್ಷ ಸ್ಥಾನದಲ್ಲಿ ಕೂಡಿಸಿದ್ದೀರಿ. ನಾವು ಯಾರಿಗೂ ತಾರತಮ್ಯ ಮಾಡಿಲ್ಲ ಎನ್ನುವ ಮೂಲಕ ಆರೋಪ ತಳ್ಳಿ ಹಾಕಿದ್ದಾರೆ.

ಜಿಪಂ ಯೋಜನಾಧಿಕಾರಿ ಶರಣಬಸವ ಕೆಸಟ್ಟಿ ಸದಸ್ಯರಿಗೆ ತಾರವåತ್ಯ ನೀತಿ ಅನುಸರಿಸುತ್ತಿದ್ದಾರೆ. ಜಾತಿವಾದ ಮಾಡುತ್ತಿದ್ದು, ಎಸ್ಸಿ, ಎಸ್ಟಿ ಸದಸ್ಯರನ್ನು ನಿರ್ಲಕ್ಷಿಸುತ್ತಿದ್ದು, ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ಸಭೆಯಲ್ಲೇ ಹೊರಾಟ ಮಾಡುವುದಾಗಿ ಸದಸ್ಯ ಕ್ಷೀರಲಿಂಗಪ್ಪ ಎಚ್ಚರಿಸಿದರು. ಅಲ್ಲದೇ, ಈಗ ಮಾಡುತ್ತಿರುವ ಭ್ರಷ್ಟಾಚಾರ ಹಿಂದೆಂದೂ ಕಂಡಿಲ್ಲ ಎಂದು ಗಂಭೀರವಾಗಿ ದೂರಿದರು.

ಜಿಪಂ ಸದಸ್ಯ ಗಂಗಣ್ಣ ಸಾಹುಕಾರ ಮಾತನಾಡಿ, ಕಳೆದ ವರ್ಷ ನಿರ್ಮಿಸಿದ ಚೆಕ್‌ ಡ್ಯಾಮ್‌ಗಳಿಗೆ ಇನ್ನೂ ಅನುಮೋದನೆ ಸಿಕ್ಕಿಲ್ಲ. ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಆಕ್ರೋಶ ಹೊರಹಾಕಿದರು. ಹೀಗೆ ಎಲ್ಲರೂ ಆರೋಪಗಳ ಮೇಲೆ ಆರೋಪ ಮಾಡುತ್ತಲೇ ಅಧ್ಯಕ್ಷರ ಆಡಳಿತ ವೈಫಲ್ಯವನ್ನು ಪರೋಕ್ಷವಾಗಿ ಟೀಕಿಸಿದರು.

ಜಿಪಂ ಸದಸ್ಯ ಶರಬಣ್ಣ ಸಾಹುಕಾರ ಮಾತನಾಡಿ, ಈ ಸಭೆಗೆ ಯೋಜನಾ ನಿರ್ದೇಶಕ ಶರಣಬಸವ ಅವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಉದ್ಯೋಗ ಖಾತಿಯಡಿ ಪ್ರತಿ ಗ್ರಾಪಂಗೆ 5 ಸಾವಿರ ಸಸಿ ಹಾಕಲು ಅವಕಾಶವಿದೆ. ಜಿಲ್ಲೆಯ 183 ಗ್ರಾಪಂಗಳಲ್ಲಿ 11 ಸಾವಿರ ಮಾತ್ರ ಹಾಕಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು 1.30 ಕೋಟಿ ಹಣವನ್ನು ತಮ್ಮ ಮಗನ ಖಾತೆಗೆ ಹಾಕಿ ಅಕ್ರಮ ಎಸಗಿದ್ದಾರೆ. ಆದರೆ, ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ. ಅವರು ಹಣ ಲೂಟಿ ಮಾಡಿರುವುದು ರಾಯಚೂರು ಜಿಲ್ಲಾ ಪಂಚಾಯಿತಿ ಅನುದಾನವಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಈ ಹಿಂದೆ ಒಬ್ಬ ಶಿಕ್ಷಕರು ಅವ್ಯವಹಾರ ಮಾಡಿದ್ದಾರೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಡಿಡಿಪಿಐ ಬಿ.ಕೆ.ನಂದನೂರು ಅವರಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ದೂರಿದರು.

ಇಷ್ಟೆಲ್ಲ ನಡೆದರೂ ಜಿಪಂ ಅಧ್ಯಕ್ಷರು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಯಾವೊಬ್ಬ ಸದಸ್ಯರ ಕ್ಷೇತ್ರಗಳ ಸಮಸ್ಯೆ ಬಗೆಹರಿಸಿಲ್ಲ ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಜಿಪಂ ಸಿಇಒ ಲಕ್ಷ್ಮೀಕಾಂತರಡ್ಡಿ ಮಾತನಾಡಿ, ಈ ಸಾಮಾನ್ಯ ಸಭೆಯಲ್ಲಿ ಮಹಿಳಾ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಲಾಗುವುದು. ತಮ್ಮ ಸಮಸ್ಯೆಗಳ ಕುರಿತು ಚರ್ಚೆ ನಡೆಸಬಹುದು ಎಂದು ಸಮಾಧಾನ ಮಾಡಲು ಮುಂದಾದರು.

ಕೊಪ್ಪರ ಕ್ಷೇತ್ರದ ಸದಸ್ಯೆ ಬಸಮ್ಮ ಲಿಂಗಣ್ಣ ದೊಡ್ಡಮನಿ ಮಾತನಾಡಿ, ಜಿಲ್ಲೆಯಲ್ಲಿ ಕೃಷ್ಣ ಹಾಗೂ ತುಂಗಭದ್ರಾ ನದಿ ಪ್ರವಾಹದಿಂದ ನದಿ ಪಾತ್ರದ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಹೊಲಗಳಲ್ಲಿನ ವಿದ್ಯುತ್‌ ಪರಿವರ್ತಕಗಳು, ಪಂಪ್‌ಸೆಟ್‌ಗಳು ಹಾಳಾಗಿವೆ. ದೇವದುರ್ಗ ತಾಲೂಕು ಒಂದರಲ್ಲೇ 550 ವಿದ್ಯುತ್‌ ಪರಿವರ್ತಕಗಳು ಹಾನಿಗೀಡಾಗಿವೆ. ಅವುಗಳನ್ನು ಕೂಡಲೇ ದುರಸ್ತಿ ಪಡಿಸಿ ಮತ್ತೆ ಅಳವಡಿಸಬೇಕು ಎಂದು ಆಗ್ರಹಿಸಿದರು. ಜೆಸ್ಕಾಂ ಅಧಿಕಾರಿ ಪ್ರತಿಕ್ರಿಯಿಸಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲೆಯಿಂದ ಸರ್ವೇ ಮಾಡಿ ವಿದ್ಯುತ್‌ ಪರಿವರ್ತಕಗಳನ್ನು ಹಾಕಲಾಗುವುದು ಎಂದು ತಿಳಿಸಿದರು. ಇದಕ್ಕೆ ಎಲ್ಲ ಸದಸ್ಯರು ಬೆಂಬಲ ಸೂಚಿಸುವ ಮೂಲಕ ಒಕ್ಕೊರಲ ಒತ್ತಾಯ ಮಾಡಿದರು.

ಸದಸ್ಯ ಕೇಶವರೆಡ್ಡಿ ಮಾತನಾಡಿ, ಒಂದೆಡೆ ಪ್ರವಾಹ ಮತ್ತೂಂದೆಡೆ ಬರದಿಂದ ಬೆಳೆಗಳೆಲ್ಲ ಹಾಳಾಗುತ್ತಿವೆ. ನದಿ ಪಾತ್ರದಲ್ಲಿರುವ ಜನರಿಗೆ ಸರಿಯಾಗಿ ನೀರು ಸರಬರಾಜು ಮಾಡುತ್ತಿಲ್ಲ ಎಂದಾಗ ಮಧ್ಯ ಪ್ರವೇಶಿಸಿದ ಸಿಇಒ ಲಕ್ಷ್ಮೀಕಾಂತ ರೆಡ್ಡಿ ಅವರು ಜನರಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು. ಅಗತ್ಯವಿರುವ ಕಡೆ ಈಗಾಗಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿಯಾದರೂ ಸಮಸ್ಯೆ ಇದ್ದಲ್ಲಿ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಸದಸ್ಯೆ ಶಿವಜ್ಯೋತಿ ಮಾತನಾಡಿ, ಮರ್ಚೆಡ್‌ ಶಾಲೆಗೆ ಕಂಪ್ಯೂಟರ್‌ ವ್ಯವಸ್ಥೆ ಹಾಗೂ ಕ್ಷೇತ್ರದ ಅನೇಕ ಗ್ರಾಮಗಳ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಗೃಹ ಸಮಸ್ಯೆಯಿದೆ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ನಿವಾರಿಸುವಂತೆ ಸೂಚಿಸಿದರು.

ಸದಸ್ಯ ಶರವಣ್ಣ ಸಾಹುಕಾರ ಮಾತನಾಡಿ, ಚೆಕ್‌ ಡ್ಯಾಂ ನಿರ್ಮಾಣದ ಮಾಹಿತಿಗಾಗಿ ಕಳೆದ ಆರು ತಿಂಗಳಿಂದ ಕೇಳುತ್ತಿದ್ದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು ಮಾತನಾಡಿ, ಸದಸ್ಯರಾದ ಮೇಲೆ ನಮಗಿದ್ದ ಗೌರವ ಕೂಡ ಇಲ್ಲದಾಗುತ್ತಿದೆ. ಅಧ್ಯಕ್ಷರು ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳಬೇಕು. ಜಿಪಂ ಅಸ್ತಿತ್ವಕ್ಕೆ ಬಂದು ಮೂರು ವರ್ಷವಾದರೂ ಕೇವಲ 8 ಸಭೆ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸದಸ್ಯೆ ಕೆ.ಪದ್ಮಾವತಿ ಮಾತನಾಡಿ ಮಟಮಾರಿ, ಗಾಣಾಧಾಳ ಸೇರಿ ಸುಮಾರು ಐದು ಹಳ್ಳಿಗಳಲ್ಲಿ ನೀರಿನ ಟ್ಯಾಂಕ್‌ ನಿರ್ಮಿಸಿ ನೀರಿನ ಸಮಸ್ಯೆ ನಿವಾರಿಸಬೇಕು. ನಿರ್ಮಿತಿ ಕೇಂದ್ರದಿಂದ 20 ಗ್ರಂಥಾಲಯ ನಿರ್ಮಿಸಲು ಅನುದಾನ ನೀಡಿ ಎರಡು ವರ್ಷವಾದರೂ ಕಾಮಗಾರಿ ಮುಗಿಸಿಲ್ಲ ಎಂದು ದೂರಿದರು. ನಿರ್ಮಿತಿ ಕೇಂದ್ರದ ಅಧಿಕಾರಿ ಮಾತನಾಡಿ, ಶಾಸಕರು ಅದರ ಉದ್ಘಾಟನೆಗೆ ಸಮಯ ನೀಡಿದ್ದು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಸನಗೌಡ ಕಂಬಳಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಆಧ್ಯಕ್ಷ ಕಾಸಿಂ ನಾಯಕ, ಯೋಜನಾಧಿಕಾರಿ ಡಾ| ಟಿ.ರೋಣಿ, ಉಪ ಕಾರ್ಯದರ್ಶಿ ಮಹ್ಮದ್‌ ಯೂಸುಫ್‌, ಸಹಾಯಕ ಕಾರ್ಯದರ್ಶಿ ಜಯಲಕ್ಷ್ಮೀ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.