ಐಎಂಎ ಪ್ರಕರಣ ಸಿಬಿಐಗೆ
Team Udayavani, Aug 21, 2019, 5:28 AM IST
ಬೆಂಗಳೂರು: ದೂರವಾಣಿ ಕರೆ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ರಾಜ್ಯ ಸರಕಾರ ಅದರ ಬೆನ್ನಲ್ಲೇ ಬಹುಕೋಟಿ ವಂಚನೆಯ ಐಎಂಎ ಪ್ರಕರಣವನ್ನೂ ಕೇಂದ್ರ ತನಿಖಾ ದಳಕ್ಕೆ ವಹಿಸಿದೆ.
ಕಾಂಗ್ರೆಸ್ನ ಇಬ್ಬರು ಮಾಜಿ ಸಚಿವರು ಭಾಗಿಯಾಗಿದ್ದಾರೆ ಎನ್ನಲಾದ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ದ ಐಎಂಎ ಪ್ರಕರಣ ವನ್ನು ಸಿಬಿಐಗೆ ವಹಿಸಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅನೇಕ ಮುಸ್ಲಿಂ ಮುಖಂಡರು. ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದವರು ಹಾಗೂ ಅನೇಕ ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿತ್ತು. ಹಿಂದಿನ ಮೈತ್ರಿ ಸರಕಾರ ಈ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿತ್ತು.
ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ನೀಡುವುದಾಗಿ ಭರವಸೆಯಿತ್ತು ವಂತಿಗೆ ಸಂಗ್ರಹಿಸಿ ಸಾವಿರಾರು ಜನರಿಗೆ ಮೋಸ ಮಾಡಿ ವಿದೇಶಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ವಿರುದ್ಧ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಕಂದಾಯ ಇಲಾಖೆಯೂ ಕೂಡ ಹಣ ವಂಚನೆ, ಆರ್ಥಿಕ ಅವ್ಯವ ಹಾರ, ಕಾನೂನುಬಾಹಿರವಾಗಿ ಹಣ ವರ್ಗಾವಣೆ, ಜನರ ಹಣ ದುರುಪ ಯೋಗದ ಹಿನ್ನೆಲೆಯಲ್ಲಿ ಐಎಂಎ ಸಂಸ್ಥೆಗೆ ಸೇರಿದ ಹಲವು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ದೂರಿನಲ್ಲಿ ಸೇರಿಸಲಾಗಿತ್ತು.
ಐಎಂಎ ಸಂಸ್ಥೆಯಲ್ಲಿ ಹೊರ ರಾಜ್ಯ, ಹೊರ ದೇಶಗಳಲ್ಲಿ ವಾಸ ವಾಗಿರುವವರೂ ಹಣ ಹೂಡಿಕೆ ಮಾಡಿದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.