ಹೊಸ ಡಿಸಿ ಅಧಿಕಾರ ಸ್ವೀಕಾರ
Team Udayavani, Aug 21, 2019, 10:28 AM IST
ದಾವಣಗೆರೆ: ನೂತನ ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಬೆಳಿಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ಈ ಹಿಂದೆ ದಾವಣಗೆರೆ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರು ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಜಿಲ್ಲಾಧಿಕಾರಿಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್ ಸಹ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಹೊಸ ಡಿಸಿ ಪರಿಚಯ: ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ 1974ರ ಮಾರ್ಚ್ 27ರಂದು ಜನಿಸಿರುವ ಮಹಾಂತೇಶ್ ಬೀಳಗಿ, ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೂ ಅಲ್ಲಿಯೇ ವ್ಯಾಸಂಗ ಮಾಡಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ನಾಲ್ಕು ವರ್ಷಗಳ ಕಾಲ ಹುಬ್ಬಳ್ಳಿ, ಧಾರವಾಡದಲ್ಲಿನ ವಿವಿಧ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1998ರಲ್ಲಿ ಖಜಾನೆ ಅಧಿಕಾರಿಯಾಗಿ ಸರ್ಕಾರಿ ಸೇವೆಗೆ ಸೇರಿದ ಅವರು, 1998ರಲ್ಲಿ ಮತ್ತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್ ಪಡೆದ ಸಹಾಯಕ ಆಯುಕ್ತರಾಗಿ ಆಯ್ಕೆಯಾದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಕೆಲಸ ಆರಂಭಿಸಿ, ಧಾರವಾಡ ಸಹಾಯಕ ಆಯುಕ್ತರಾಗಿ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ನಂತರ ಸಿಡಿಬಿನಲ್ಲಿ ಒಂದು ವರ್ಷ ಸೇವೆ ಸಲ್ಲಿಸಿ, ದಾವಣಗೆರೆ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದರು. ಕೆಯುಐಡಿಎಫ್‌ಸಿನಲ್ಲಿ ಉಪಯೋಜನಾ ನಿರ್ದೇಶಕರಾಗಿ, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಹಾಗೂ ಬೀದರ್ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯನಿರ್ವಹಿಸಿರುವ ಮಹಾಂತೇಶ್ ಬೀಳಗಿ ಈಗ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.