17 ಶಾಸಕರ ಹೈದ್ರಾಬಾದ ಕರ್ನಾಟಕಕ್ಕೆ ಸಿಕ್ಕಿದ್ದು ಒಂದೇ ಸ್ಥಾನ!
•41 ಕ್ಷೇತ್ರಗಳ ಪೈಕಿ ಪ್ರಭು ಚವ್ಹಾಣಗೆ ಮಾತ್ರ ಅದೃಷ್ಟ•ಕಾಂಗ್ರೆಸ್ ಭದ್ರಕೋಟೆ ಬೇಧಿಸಿದ ಕಮಲಕ್ಕೆ ಸಿಗಲಿಲ್ಲ ಹೈಕಮಾಂಡ್ ಆಸರೆ
Team Udayavani, Aug 21, 2019, 4:21 PM IST
ಕಲಬುರಗಿ: ಹೈದ್ರಾಬಾದ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಒಂದು ಸಚಿವ ಸ್ಥಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ಮಂಗಳವಾರ ಚೆಂಬಿನ ಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.
•ಹಣಮಂತರಾವ ಭೈರಾಮಡಗಿ
ಕಲಬುರಗಿ: ಹೈದ್ರಾಬಾದ ಕರ್ನಾಟಕ ಭಾಗದ ಆರು ಜಿಲ್ಲೆಗಳ 41 ಕ್ಷೇತ್ರಗಳ ಪೈಕಿ 17 ಬಿಜೆಪಿ ಶಾಸಕರಿದ್ದು, ಕೇವಲ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಅಸಮಾಧಾನ ಭುಗಿಲೇಳುವಂತೆ ಮಾಡಿದೆ.
ಸಿಎಂ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಬೀದರ್ ಜಿಲ್ಲೆ ಔರಾದ ಮೀಸಲು ಕ್ಷೇತ್ರದಿಂದ ಸತತ ಮೂರು ಸಲ ಗೆದ್ದಿರುವ ಬಂಜಾರಾ ಸಮುದಾಯದ ಪ್ರಭು ಚವ್ಹಾಣ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ದತ್ತಾತ್ರೇಯ ಪಾಟೀಲ ರೇವೂರ, ರಾಜುಗೌಡ, ಶಿವನಗೌಡ ನಾಯಕ, ಸುಭಾಷ ಗುತ್ತೇದಾರ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದ್ದರು.
ಹೈದ್ರಾಬಾದ ಕರ್ನಾಟಕದ ಬೀದರ 1, ಕಲಬುರಗಿ 5, ಯಾದಗಿರಿ 2, ರಾಯಚೂರು 2, ಕೊಪ್ಪಳ 3 ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ 4 ಸೇರಿ ಒಟ್ಟು 17 ಬಿಜೆಪಿ ಶಾಸಕರಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಹೊಂದಿತ್ತು. ಆದರೆ ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪನಳ್ಳಿ ಚುನಾವಣೆ ನಂತರ ಬಳ್ಳಾರಿಗೆ ಸೇರಿದ್ದರಿಂದ ಹಾಗೂ ಚಿಂಚೋಳಿಯಲ್ಲಿ ಬಿಜೆಪಿ ಗೆದ್ದಿದ್ದರಿಂದ 17 ಸ್ಥಾನಗಳಾಗಿವೆ.
ಕೊನೆ ಗಳಿಗೆಯಲ್ಲಿ ಕೈಬಿಟ್ಟರು: ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೆಸರು ಪಟ್ಟಿಯಲ್ಲಿತ್ತು. ಆದರೆ ಕೊನೆ ಗಳಿಗೆಯಲ್ಲಿ ಕೈ ಬಿಡಲಾಗಿದೆ. ವಿಭಾಗೀಯ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಗೆ ಹೊರಗಿನವರೇ ಜಿಲ್ಲಾ ಉಸ್ತುವಾರಿ ಸಚಿವರು ಎನ್ನುವುದು ಮತ್ತೆ ಮುಂದುವರಿದಿದೆ. ಎಚ್ಕೆಆರ್‌ಡಿಬಿಗೆ ಹೈ.ಕ ಭಾಗದ ಸಚಿವರೇ ಅಧ್ಯಕ್ಷರಾಗಬೇಕೆಂಬ ನಿಯಮವಿದೆ. ಈಗ ಪ್ರಭು ಚವ್ಹಾಣ ಅವರೊಬ್ಬರೇ ಸಚಿವರಾಗಿದ್ದಾರೆ. ಅವರೇ ಎಚ್ಕೆಆರ್‌ಡಿಬಿಗೆ ಅಧ್ಯಕ್ಷರಾದರೂ ಆಶ್ಚರ್ಯವಿಲ್ಲ. ಆದರೆ ಹೈಕ ಭಾಗದ ಉಸ್ತುವಾರಿ ಸಚಿವರೂ ಅಧ್ಯಕ್ಷರಾಗುವ ಅವಕಾಶವಿದೆ.
ಲಕ್ಷ್ಮಣ ಸವದಿ ಸೋತಿದ್ದರೂ ಸಚಿವ ಸ್ಥಾನ ಕಲ್ಪಿಸಲಾಗಿದೆ. ಇದರ ಬದಲು ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ, ಬಾಬುರಾವ್ ಚಿಂಚನಸೂರ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕಲ್ಪಿಸಬಹುದಿತ್ತು. ಜಿಲ್ಲೆಯಲ್ಲಿ ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ, ರಾಜಕುಮಾರ ಪಾಟೀಲ ಸೇರಿದಂತೆ ಐವರು ಬಿಜೆಪಿ ಶಾಸಕರಿದ್ದರೂ ಒಬ್ಬರಿಗೂ ಸಚಿವ ಸ್ಥಾನ ಸಿಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.