ಪ್ರವಾಹ ಸಂತ್ರಸ್ತರಿಗೆ ಶೀಘ್ರ ಹೊಸ ಬದುಕು : ಸಚಿವ ಸವದಿ ಭರವಸೆ
ಬೆಳಗಾವಿ ಪ್ರವಾಹ ಪರಿಸ್ಥಿತಿ ಪರಾಮರ್ಶನಾ ಸಭೆಯಲ್ಲಿ ಸಚಿವ ಲಕ್ಷ್ಮಣ್ ಸವದಿ ಹೆಳಿಕೆ
Team Udayavani, Aug 21, 2019, 5:02 PM IST
ಬೆಳಗಾವಿ: ಪ್ರವಾಹ ಮತ್ತು ಮಳೆಯಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಕ್ಷಣ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡಬೇಕು ಎಂದು ನೂತನ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ನಿರ್ವಹಣೆ ಮತ್ತು ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಅಧಿಕಾರಿಗಳಿಗೆ ಈ ಸೂಚನೆಯನ್ನು ನೀಡಿದರು.
ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಲಭ್ಯವಿರುವ ಕಡೆ ಅಥವಾ ಇಲ್ಲದಿದ್ದರೆ ಬಾಡಿಗೆ ಜಮೀನು ಪಡೆದುಕೊಂಡು ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಬೇಕು. ಇನ್ನು ಸಂತ್ರಸ್ತರು ಸ್ವಂತ ಶೆಡ್ ನಿರ್ಮಾಣಕ್ಕೆ ಮುಂದಾದರೆ ಸರ್ಕಾರದಿಂದ ತಕ್ಷಣ 50 ಸಾವಿರ ನೀಡಬಹುದು ಎಂದು ಸಚಿವರು ಹೇಳಿದರು.
ಶೀಘ್ರವಾಗಿ ತಾತ್ಕಾಲಿಕ ಶೆಡ್ ಗಳನ್ನು ಕಟ್ಟಿಕೊಡುವುದರಿಂದ ಇದೀಗ ಸಂತ್ರಸ್ತ ಪರಿಹಾರ ಕೇಂದ್ರಗಳಾಗಿ ಬದಲಾಗಿರುವ ಶಾಲೆಗಳನ್ನು ಪುನರಾರಂಭಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಸರಕಾರ ಈಗಾಗಲೇ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ತಕ್ಷಣವೇ ಸಂತ್ರಸ್ತರಿಗೆ ತಲುಪಿಸಬೇಕು ಎಂದು ಸಚಿವ ಲಕ್ಷ್ಮಣ ಸವದಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆಹಾನಿ ಆಗಿರುವುದರಿಂದ ಕೂಡಲೇ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ಬಿತ್ತನೆ ಮತ್ತು ಬೆಳೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಮೀಕ್ಷೆ ನಡೆಸಬೇಕು. ಇಲ್ಲಿಯೂ ಕೂಡ ಯಾವುದೇ ರೀತಿಯ ತಾರತಮ್ಯಗಳಾಗದಂತೆ ಅಧಿಕಾರಿಗಳು ಸೂಕ್ಷ್ಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕುಎಂದು ಸೂಚನೆ ನೀಡಿದರು.
ಸಂತ್ರಸ್ತರ ಪುನರ್ವಸತಿ ಈಗ ನಮ್ಮ ಆದ್ಯತೆಯಾಗಿದೆ. ಮುಳುಗಡೆಯಾಗಿರುವ ಗ್ರಾಮಗಳಲ್ಲಿ ಜನರು ಸಂಪೂರ್ಣ ಸ್ಥಳಾಂತರಗೊಳ್ಳಲು ಇನ್ನೂ ಸಮಯ ಬೇಕಿದೆ. ಪುನರ್ವಸತಿ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲು. ಆದ್ದರಿಂದ ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕಿದೆ. ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಯಾವುದೇ ರೋಗರುಜಿನಗಳು ಬಾರದಂತೆ ಕ್ರಮಕೈಗೊಳ್ಳಬೇಕು. ಸಂತ್ರಸ್ತರು ಮತ್ತು ರೈತರ ಜತೆ ಸರ್ಕಾರ ಇದೆ ಎಂಬ ಭರವಸೆಯನ್ನು ನಾವು ಮೂಡಿಸಬೇಕಿದೆ ಎಂದರು.
ರಸ್ತೆ ಸಂಪರ್ಕ ಕಡಿತಗೊಂಡಿರುವ ಗ್ರಾಮಗಳು ಮತ್ತು ಸೇತುವೆಗಳ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ರಸ್ತೆ, ಸೇತುವೆಗಳ ಹಾನಿಯ ಸಮೀಕ್ಷೆ ನಡೆಸಿ ದುರಸ್ತಿಗೆ ಅಂದಾಜುಪಟ್ಟಿಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವ ಸವದಿ ತಿಳಿಸಿದರು. ಅದೇ ರೀತಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಗ್ರಾಮಗಳಿಗೆ ತಕ್ಷಣವೇ ಸಂಪರ್ಕ ಒದಗಿಸುವಂತೆ ನಿರ್ದೇಶನ ನೀಡಿದರು.
ಆರೋಗ್ಯ ರಕ್ಷಣೆಗೆ ಸೂಚನೆ:
ಈ ಸಂದರ್ಭದಲ್ಲಿ ಮಾತನಾಡಿದ ಚಿಕ್ಕೋಡಿ ಉಪ ವಿಭಾಗದ ಪ್ರವಾಹ ಉಸ್ತುವಾರಿ ವಹಿಸಿಕೊಂಡಿರುವ ನೂತನ ಸಚಿವೆ ಶಶಿಕಲಾ ಜೊಲ್ಲೆ ಪ್ರವಾಹ ಬಾಧಿತ ಗ್ರಾಮಗಳಲ್ಲಿ ಜನರ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಹೊಸ ಬದುಕು ಕಟ್ಟಿಕೊಡಲು ನಾವು ಎಲ್ಲರೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸೋಣ ಎಂದರು.
14 ಕೋಟಿ ರೂ. ಪರಿಹಾರ ವಿತರಣೆ:
ಆಗಸ್ಟ್ ನಲ್ಲಿ ವಾಡಿಕೆಗಿಂತ ಶೇ.490 ರಷ್ಟು ಅಧಿಕ ಮಳೆ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ಉದ್ಭವಿಸಿತು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.
ಜಿಲ್ಲೆಯ 377 ಗ್ರಾಮಗಳು ಪ್ರವಾಹದಿಂದ ಬಾಧಿತಗೊಂಡಿದ್ದ 4.15 ಲಕ್ಷ ಜನರನ್ನು ಹಾಗೂ 1.10 ಲಕ್ಷ ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. 493 ಪರಿಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ 1.72 ಲಕ್ಷ ಜನರಿಗೆ ಪರಿಹಾರಗಳಲ್ಲಿ ಆಶ್ರಯ ನೀಡಲಾಗಿದೆ.
ಸದ್ಯಕ್ಕೆ ಜಿಲ್ಲೆಯಲ್ಲಿ 126 ಪರಿಹಾರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲೆಯಲ್ಲಿ 2.34 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಜಲಾವೃತಗೊಂಡಿರುತ್ತದೆ. ಪ್ರವಾಹ ಮತ್ತು ಮಳೆಯಿಂದಾಗಿ 24 ಜನರು ಸಾವನ್ನಪ್ಪಿದ್ದು, ಎರಡು ಪ್ರಕರಣ ಹೊರತುಪಡಿಸಿ ಮೃತರ ವಾರಸುದಾರರಿಗೆ ಪರಿಹಾರ ನೀಡಲಾಗಿದೆ. ಇಬ್ಬರು ನಾಪತ್ತೆಯಾಗಿದ್ದಾರೆ. ಇದುವರೆಗೆ 14 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ ನೀಡಿದರು.
ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.