ಮಣಿಪಾಲ: ಹೆದ್ದಾರಿ ಬದಿ ಮಣ್ಣು ಕುಸಿತ; ಆತಂಕ
Team Udayavani, Aug 22, 2019, 5:30 AM IST
ಸಿಂಡಿಕೇಟ್ ಸರ್ಕಲ್‌ನಿಂದ ಕೆಳಕ್ಕೆ ಬರುವಲ್ಲಿ ಗುಡ್ಡದ ಮಣ್ಣು ಕುಸಿದಿರುವುದು.
ಉಡುಪಿ: ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎಯ ಮಣಿಪಾಲ ಲಕ್ಷ್ಮೀಂದ್ರನಗರದ ಚಿತ್ರಮಂದಿರ ಎದುರಿನ ಭಾಗದಲ್ಲಿ ಸಿಂಡಿಕೇಟ್ ಸರ್ಕಲ್‌ನಿಂದ ಕೆಳಕ್ಕೆ ಬರುವಲ್ಲಿ ಗುಡ್ಡದ ಮಣ್ಣು ಕುಸಿದು ವಾಹನ ಚಾಲಕರಲ್ಲಿ ಆತಂಕ ಮೂಡಿದೆ.
ಬುಧವಾರ ಸಂಜೆ ವೇಳೆ ಮಣ್ಣು ಕುಸಿದು ಚರಂಡಿಗೆ ಬಿದ್ದಿದೆ. ಈ ಗುಡ್ಡದಲ್ಲಿ ಮರಗಳು ಕೂಡ ಇವೆ. ಸ್ವಲ್ಪ ದೂರದಲ್ಲೇ ಕಟ್ಟಡಗಳೂ ಇವೆ. ರಸ್ತೆಗೆ ಹೊಂದಿಕೊಂಡಂತೆ ಇರುವ ಈ ಪ್ರದೇಶ ಅಪಾಯಕಾರಿಯಾಗಿದೆ. ಮಣ್ಣು ಮರ ಸಮೇತ ವಾಹನಗಳ ಮೇಲೆ ಬೀಳುವ ಅಪಾಯವಿದೆ. ಅಲ್ಲದೆ ಮಳೆನೀರು ಚರಂಡಿ ಬ್ಲಾಕ್ ಆಗಿ ಮಳೆ ನೀರು ರಸ್ತೆ ಮೇಲೆ ಪ್ರವಹಿಸುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.
“ವಿಸ್ತಾರಗೊಳ್ಳಲಿದೆ’
“ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು ಈ ಭಾಗದಲ್ಲಿ ಇನ್ನೂ ಕೂಡ ಎರಡು ಬದಿಗೆ ರಸ್ತೆ ವಿಸ್ತಾರಗೊಳ್ಳಲಿದೆ. ಗುಡ್ಡ ಇರುವ ಭಾಗದಲ್ಲಿ ಸುಮಾರು 6 ಮೀಟರ್‌ನಷ್ಟು ಅಗಲಕ್ಕೆ ವಿಸ್ತಾರಗೊಳ್ಳಲಿದೆ. ಭೂ ಸ್ವಾಧೀನ ನಡೆಸಿ ವಿಸ್ತರಿಸಲಾಗುವುದು. ಮಣ್ಣು ಕುಸಿದ ಪ್ರದೇಶವನ್ನು ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.