ಜೈವಿಕ ಇಂಧನ ಪರಿಸರ ಸ್ನೇಹಿ

ಗ್ರಾಪಂ ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮ ಏರ್ಪಡಿಸಲು ಸೂಚನೆ

Team Udayavani, Aug 22, 2019, 10:24 AM IST

22-Agust-5

ಬೀದರ: ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮನ್ನು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಉದ್ಘಾಟಿಸಿದರು.

ಬೀದರ: ಜೈವಿಕ ಇಂಧನ ಪರಿಸರ ಸ್ನೇಹಿಯಾಗಿದೆ. ನವೀಕರಿಸಬಹುದಾದ ಇಂಧನ ಮತ್ತು ಬಳಕೆಯಲ್ಲಿರುವ ಸಾಂಪ್ರದಾಯಿಕ ಇಂಧನಕ್ಕೆ ಪರ್ಯಾಯವಾಗಿದೆ. ರೈತರು ಜೈವಿಕ ಇಂಧನಕ್ಕೆ ಅನುಕೂಲವಾಗುವ ಕೃಷಿಯತ್ತ ಒಲವು ತೋರಿಸಬೇಕು ಎಂದು ಜಿಪಂ ಅಧ್ಯಕ್ಷೆ ಗೀತಾ ಪಂಡಿರತಾವ್‌ ಚಿದ್ರಿ ಹೇಳಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಪಂ, ಸಾಮಾಜಿಕ ಅರಣ್ಯ ವಿಭಾಗ ಮತ್ತು ಬೀದರ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೈವಿಕ ಇಂಧನ ನೀಡುವ ಪ್ರಭೇದಗಳಾದ ಬೇವು, ಹೊಂಗೆ, ಹಿಪ್ಪೆ, ಸೀಮಾರೂಬಾ, ಕಾಡು ಔಡಲ ಸಸಿಗಳನ್ನು ರೈತರು ತಮ್ಮ ಜಮೀನುಗಳ ಬದುಗಳ ಮೇಲೆ, ಮಿಶ್ರಬೆಳೆಯಾಗಿ ಹೆಚ್ಚೆಚ್ಚು ಸಂಖ್ಯೆಯಲ್ಲಿ ನೆಟ್ಟು ಬೆಳೆಸಿ ಬೀಜಗಳನ್ನು ಮಾರಾಟ ಮಾಡುವ ಮೂಲಕ ಹೆಚ್ಚುವರಿ ಆದಾಯ ಪಡೆಯಬಹುದು. ಈ ಪ್ರಭೇದಗಳ ಬೀಜದಿಂದ ಜೈವಿಕ ಇಂಧನ ತಯಾರಿಸಲಾಗುತ್ತ್ತದೆ. ಹೆಚ್ಚು ಜೈವಿಕ ಇಂಧನ ಬಳಸುವುದರಿಂದ ದೇಶದ ಆರ್ಥಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗುತ್ತದೆ. ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಪಂ ಮಟ್ಟದಲ್ಲಿಯೂ ಏರ್ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ. ಗಾಮನಗಟ್ಟಿ ಮಾತನಾಡಿ, ಜೈವಿಕ ಇಂಧನ ದಿನಾಚರಣೆ ಮಹತ್ವ, ಉದ್ದೇಶಗಳ ಕುರಿತು ವಿವರಣೆ ನೀಡಿದರು. ಅರಣ್ಯ ಇಲಾಖೆ ಬೆಳೆಸಿರುವ ಹೊಂಗೆ, ಹಿಪ್ಪೆ, ಸೀಮಾರೂಬಾ ಝಟ್ರೂಫಾ ನೆಡುತೋಪುಗಳು ಮತ್ತು ಸಸ್ಯಕ್ಷೇತ್ರ ಚಟುವಟಿಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಬರಡುಭೂಮಿಯಲ್ಲಿ ಜೈವಿಕ ಇಂಧನ ಗಿಡಗಳನ್ನು ಬೆಳೆಸುವ ಬರಡು ಬಂಗಾರ ಮತ್ತು ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಜೈವಿಕ ಇಂಧನ ಗಿಡಗಳನ್ನು ಬೆಳೆಸುವ ಹಸಿರು ಹೂನ್ನು ಕಾರ್ಯಕ್ರಮಗಳನ್ನು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ಜಾರಿಗೂಳಿಸಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಕೋರಿದರು.

ಬೀದರ ಕೃಷಿ-ವಿಜ್ಞಾನ ಕೇಂದ್ರದ ವೈಜ್ಞಾನಿಕ ಸಹಾಯಕ ರೋಹಿತ ಬಿರಾದಾರ ಮಾತನಾಡಿದರು. ಜಿಪಂ ಉಪ ಕಾರ್ಯದರ್ಶಿ ಎಸ್‌. ಸೂರ್ಯಕಾಂತ, ಜಿಪಂ ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ, ಸಹಾಯಕ ಯೋಜನಾಧಿಕಾರಿ ಬಸವರಾಜ ಬಬಚೇಡಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ರವಿ ದೇಶಮುಖ, ಮಕರಂದ ಕುಲಕರ್ಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಡಿ. ರಾಜೇಂದ್ರ, ಸಾಮಾಜಿಕ ಅರಣ್ಯ ವಿಭಾಗದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.