ಇಂದಿನಿಂದ ಗಿರಿಗಿಟ್ ಆರಂಭ
ರೂಪೇಶ್ ಶೆಟ್ಟಿ ಹೊಸ ಭರವಸೆ
Team Udayavani, Aug 23, 2019, 5:04 AM IST
ತುಳು ಚಿತ್ರರಂಗದಲ್ಲಿ ಈ ವರ್ಷ ಇಲ್ಲಿವರೆಗೆ ಒಂದಷ್ಟು ಸಿನಿಮಾಗಳು ಬಿಡುಗಡೆಯಾಗಿವೆ. ಕೆಲವು ಸಿನಿಮಾಗಳು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದರೆ, ಇನ್ನು ಕೆಲವು ಸಿನಿಮಾಗಳು ಬೇಸರಕ್ಕೆ ಕಾರಣವಾಗಿವೆ. ಇದು ಯಾವುದೇ ಭಾಷೆಯ ಚಿತ್ರರಂಗದಲ್ಲಿ ಸಹಜ ಕೂಡಾ. ಈಗ ಚಿತ್ರತಂಡವೊಂದು ಸಿಕ್ಕಾಪಟ್ಟೆ ವಿಶ್ವಾಸದೊಂದಿಗೆ ಎದುರು ನೋಡುತ್ತಿದೆ. ಅದಕ್ಕೆ ಕಾರಣ ‘ಗಿರಿಗಿಟ್’. ಇಂದು (ಆ.23) ತೆರೆಕಾಣುತ್ತಿರುವ ತುಳು ಸಿನಿಮಾವಿದು. ಈಗಾಗಲೇ ಕನ್ನಡ, ತುಳು ಚಿತ್ರಗಳಲ್ಲಿ ನಟಿಸಿರುವ ರೂಪೇಶ್ ಶೆಟ್ಟಿ ಈ ಚಿತ್ರದ ನಾಯಕ. ಕೇವಲ ನಾಯಕರಾಗಿಯಷ್ಟೇ ಇವರು ಈ ಚಿತ್ರದಲ್ಲಿ ತೊಡಗಿಸಿಕೊಂಡಿಲ್ಲ. ನಿರ್ದೇಶನದಲ್ಲೂ ಭಾಗಿಯಾಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಕದ್ರಿ ಜೊತೆಯಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರ ವಿದೇಶಗಳಲ್ಲೂ ತೆರೆಕಾಣುತ್ತಿದೆ.
ಚಿತ್ರದ ಬಗ್ಗೆ ಮಾತನಾಡುವ ರೂಪೇಶ್ ಶೆಟ್ಟಿ, ‘ಇದು ಇವತ್ತಿನ ಟ್ರೆಂಡ್‌ಗೆ ತಕ್ಕಂತಹ ಸಿನಿಮಾ. ನಮ್ಮ ಜೀವನದ ಸುತ್ತಮುತ್ತ ಈ ಕಥೆ ನಡೆಯುತ್ತದೆ., ಕಾಮಿಡಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎನ್ನುತ್ತಾರೆ. ಇನ್ನು, ತುಳು ಚಿತ್ರರಂಗದಲ್ಲಿ ಹೊಸ ಬಗೆಯ ಸಿನಿಮಾವಾಗಿ ಈ ಚಿತ್ರ ಹಿಟ್ ಆಗುವ ವಿಶ್ವಾಸ ಕೂಡಾ ರೂಪೇಶ್ ಅವರಿಗಿದೆ. ಅದಕ್ಕೆ ಪೂರಕವಾಗಿ ಈಗಾಗಲೇ ಬಿಡುಗಡೆಯಾಗಿರುವ ಟೀಸರ್, ಟ್ರೇಲರ್‌ಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ರೂಪೇಶ್‌ಗೆ ಜೋಡಿಯಾಗಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ. ಜೊತೆಗೆ ತುಳು ಚಿತ್ರರಂಗದ ಹಾಸ್ಯ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಅರವಿಂದ್ ಬೋಳಾರ್, ನವೀನ್ ಡಿ. ಪಡೀಲ್ , ಭೋಜರಾಜ್ ವಾಮಂಜೂರು , ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು , ಸಂದೀಪ್ ಶೆಟ್ಟಿ ಮಾಣಿಬೆಟ್ಟು ಮುಂತಾದ ಹಾಸ್ಯ ಕಲಾವಿದರು ನಟಿಸಿದ್ದಾರೆ. ಮಂಜುನಾಥ ಅತ್ತಾವರ್ ಹಾಗೂ ಶೂಲಿನ್ ಫಿಲಂಸ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖಳನಾಯಕನಾಗಿ ರೋಶನ್ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಇನ್ನು ಚಿತ್ರಕ್ಕೆ ಡೇರಿಲ್ ಮಸ್ಕರೇನಸ್ ಹಾಗೂ ಜೋಯೆಲ್ ರೆಬೆಲ್ಲೋ ಸಂಗೀತ, ‘ಬಲೆ ತೆಲಿಪಾಲೆ’ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಚಿತ್ರಕ್ಕಿದೆ. ಇಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸದೊಂದಿಗೆ ಚಿತ್ರತಂಡ ಎದುರು ನೋಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.