ದಿನಗೂಲಿ, ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಪಾವತಿಸಲು ಸುತ್ತೋಲೆ
Team Udayavani, Aug 23, 2019, 5:23 AM IST
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿಗಳಲ್ಲಿ ಕೆಲಸ ಮಾಡುವ ದಿನಗೂಲಿ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಗೊಂಡ ದಿನಗೂಲಿಯ ನೌಕರರು ಆಯಾ ಹುದ್ದೆಗಳಲ್ಲಿ ನಿರ್ವಹಿಸುತ್ತಿರುವ ಕೆಲಸಗಳು/ಕಾರ್ಯಭಾರಗಳು, ಕನಿಷ್ಠ ವೇತನ ಕಾಯ್ದೆಯಡಿಯಲ್ಲಿ ಬರುವ ಉದ್ಯೋಗಗಳಲ್ಲಿನ ಆಯಾ ಹುದ್ದೆಗಳಿಗೆ ಸರಿ ಸಮಾನವಾದ ಪಕ್ಷದಲ್ಲಿ, ದಿನಗೂಲಿ ನೌಕರರಿಗೂ ಕನಿಷ್ಠ ವೇತನಕ್ಕಿಂತ ಕಡಿಮೆ ಇಲ್ಲದ ವೇತನವನ್ನು ನೀಡಬೇಕು.
ಕನಿಷ್ಠ ವೇತನದ ಕಾಯ್ದೆಯಡಿ ಬರುವ ಉದ್ಯೋಗಗಳಿಗೆ ಕಾಲಕಾಲಕ್ಕೆ ಕಾರ್ಮಿಕ ಇಲಾಖೆಯಿಂದ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಧಿಸೂಚನೆಗಳನ್ನು ಹೊರಡಿಸಲಾಗುತ್ತಿದೆ. ಕನಿಷ್ಠ ವೇತನದ ಅಧಿಸೂಚನೆಗಳಲ್ಲಿ ದಿನಗೂಲಿಯನ್ನು ನಿಗದಿಪಡಿಸದೇ ಇರುವ ಕೆಲವು ಹುದ್ದೆಗಳಿಗೆ ಅಂದರೆ ಶೀಘ್ರ ಲಿಪಿಗಾರರು/ಬೆರಳಚ್ಚುಗಾರರು/ದ್ವಿತೀಯ ದರ್ಜೆ ಸಹಾಯಕರುಗಳಿಗೆ ಸಿನಿಮಾ ಉದ್ದಿಮೆಗಳಿಗೆ ನಿಗದಿಪಡಿಸಿದ ಕನಿಷ್ಠ ವೇತನ ದರಗಳನ್ನು ಹಾಗೂ ಗ್ರೂಪ್ ಡಿ ಹುದ್ದೆಗಳ ನೌಕರರಿಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಉದ್ದಿಮೆಗಳಿಗೆ ನಿಗದಿಪಡಿಸಿದ ಕನಿಷ್ಠ ದರಗಳನ್ನು ಅನ್ವಯಿಸಿಕೊಂಡು ದಿನಗೂಲಿ ವೇತನವನ್ನು ಮತ್ತು ಜೀವನ ನಿರ್ವಹಣೆಯ ಭತ್ಯೆಯನ್ನು ನೀಡಬೇಕು.
ಪ್ರಸ್ತುತ ಸರ್ಕಾರದ ವಿವಿಧ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ನಿಗಮಗಳು, ಮಂಡಳಿಗಳು, ವಿಶ್ವವಿದ್ಯಾಲಯಗಳು, ಮಹಾವಿದ್ಯಾಲಯಗಳು, ಶಾಲೆಗಳು, ಸ್ಥಳೀಯ ಸಂಸ್ಥೆಗಳು, ಸೊಸೈಟಿಗಳು, ಪರಿಷತ್ತುಗಳು, ಯಾವುದೇ ರೀತಿಯ ರಾಜ್ಯ ಸರ್ಕಾರದ ಅಧೀನ/ಸ್ವಾಯತ್ತ ಸಮಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಪಾವತಿಸಬೇಕಾದ ಕನಿಷ್ಠ ವೇತನ, ದುಡಿಯಮೆಯ ಗಂಟೆಗಳು, ರಜಾ ದಿನಗಳು, ಇಎಸ್‌ಐ/ಪಿಎಫ್ ಕಟಾವಣೆ ಬಗ್ಗೆ ಹಾಗೂ ಮಾನವ ಸಂಪನ್ಮೂಲ ಪೂರೈಸುವ ಗುತ್ತಿಗೆದಾರರರು ನಿರ್ವಹಿಸುವ ಅಂಶಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ಪಾಲಿಸಬೇಕು.
ಇಷ್ಟಾದರೂ ಕೆಲವು ಇಲಾಖೆಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸೂಚನೆ ಪಾಲಿಸದಿರುವುದು, ನೌಕರರ ವೇತನದಿಂದ ಕಟಾಯಿಸಿದ ಪಿಎಫ್ ಹಾಗೂ ಇಎಸ್‌ಐ ಬಾಬ್ತು ಖಾತೆಗೆ ಪಾವತಿಸದಿರುವುದು ಕಂಡು ಬಂದಿದೆ. ಅಂತಹ ಇಲಾಖೆ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.