ನೆರೆ ಹಾನಿ ಪರಿಹಾರ ವಿತರಣೆಗೆ ಒತ್ತಾಯಿಸಿ ಪ್ರತಿಭಟನೆ
ಭಾರೀ ಮಳೆಯಿಂದ ಹಳೇಹುಬ್ಬಳ್ಳಿ ಮೇದಾರ ಓಣಿ ಜನರ ಬಾಳು ಗೋಳು ಸಂಕಷ್ಟ ಕೇಳಲು ಯಾರು ಬಂದೇ ಇಲ್ಲ ಎಂಬ ಅಳಲು
Team Udayavani, Aug 23, 2019, 10:00 AM IST
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಮೇದಾರ ಓಣಿಯಲ್ಲಿ ಮಳೆಯಿಂದ ಹಾನಿಯಾಗಿರುವ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಮೇದಾರ ಓಣಿಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಜಲಾವೃತಗೊಂಡಿದ್ದ ಪ್ರದೇಶದ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮೇದಾರ ಓಣಿ ನಾಗರಿಕರ ಹೋರಾಟ ಸಮಿತಿ ಹಾಗೂ ಎಸ್‌ಯುಸಿಐ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಮಳೆಗೆ ಹಳೇಹುಬ್ಬಳ್ಳಿ ಮೇದಾರ ಓಣಿಯ ಪಕ್ಕದಲ್ಲಿರುವ ದೊಡ್ಡ ನಾಲಾ ತುಂಬಿ ಹರಿದು ಅಕ್ಕಪಕ್ಕದಲ್ಲಿದ್ದ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಆದರೆ ಇದುವರೆಗೂ ಯಾರೊಬ್ಬರು ತಮ್ಮ ನೋವು ಕೇಳಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮೇದಾರ ಓಣಿಯಲ್ಲಿ ಬಡಜನರು ವಾಸಿಸುತ್ತಿದ್ದು, ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಾ ತಮ್ಮ ಜೀವನ ನಡೆಸುತ್ತಿದ್ದಾರೆ. ಮಳೆಯಿಂದ ಅಪಾರ ಹಾನಿ ಸಂಭವಿಸಿದ್ದು, ಕೂಡಲೇ ನಾಲಾದ ತಡೆಗೋಡೆ ಎತ್ತರಿಸಿ ನೀರು ಬರದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಹಾನಿಯಾದ ಮನೆ-ಅಂಗಡಿಗಳಿಗೆ ಪರಿಹಾರ ಧನ ವಿತರಣೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಾಸಕ ಪ್ರಸಾದ ಅಬ್ಬಯ್ಯ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಹಾಗೂ ತಹಶೀಲ್ದಾರ್ ಶಶಿಧರ ಮಾಡ್ಯಾಳಗೆ ಮನವಿ ಸಲ್ಲಿಸಿದರು. ಗಂಗಾಧರ ಬಡಿಗೇರ, ನೂರಅಹ್ಮದ್, ಪಾರ್ವತಿ, ಹುಸೇನಬಿ, ಫೈರೋಜ ಮದ್ದೀನ್, ಹುಸೇನಸಾಬ್ ಮೊಮಿನ್, ಅಬ್ದುಲ್ರೆಹಮಾನ್ ಸೌದಾಗರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.