ಕೆರೆ ಏರಿ ಒಡೆದು ಬೆಳೆ ಸಂಪೂರ್ಣ ನಾಶ

Team Udayavani, Aug 23, 2019, 5:41 PM IST

rn-tdy-2

ಕುದೂರಿನ ವೀರಸಾಗರ ಹೂಸಕೆರೆ ಏರಿ ಒಡೆದು ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಕುದೂರು: ಬಾರಿ ಮಳೆಯಿಂದ ಕೆರೆಯ ಏರಿ ಒಡೆದು ಸುಮಾರು 80 ಎಕರೆಯಲ್ಲಿ ರೈತರು ಬೆಳೆದ ರಾಗಿ, ಭತ್ತ, ಅಡಕೆ, ತೆಂಗು, ಬಾಳೆ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿರುವ ಘಟನೆ ಕುದೂರು ಹೋಬಳಿಯ ವೀರಸಾಗರದಲ್ಲಿ ನಡೆದಿದೆ.

ವೀರಸಾಗರದ ಹೊಸಕೆರೆ ಸುಮಾರು 25 ಎಕರೆ ಇದ್ದು, ಬಾರಿ ಮಳೆಯಿಂದ ಕೆರೆಯ ಏರಿ ಒಡೆದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. 1935ರಲ್ಲಿ ಕೆರೆಯನ್ನು ಪೂರ್ವಿಕರು ನಿರ್ಮಾಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೆರೆಯು ಸುಮಾರು 25 ಎಕರೆಯಷ್ಟು ವಿಸ್ತಿರ್ಣ ಹೊಂದಿದ್ದು, ಕೆರೆ ಏರಿ ಒಡೆದಿರುವುದನ್ನು ನೋಡುವುದಕ್ಕೆ ಜನಸಾಗರವೇ ಸೇರಿತ್ತು.

ಕೆರೆಯ ಏರಿ ಶಿಥಿಲ: ಕೆರೆ ಏರಿ ಒಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಎ.ಮಂಜುನಾಥ್‌ ಮಾತನಾಡಿ, ವೀರಸಾಗರ ಹೊಸಕೆರೆ ಏರಿ ಶಿಥಿಲವಾಗಿರುವುದರಿಂದ ಕೆರೆ ಏರಿ ಒಡೆದಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಜಿಪಂ ಅಧ್ಯಕ್ಷರು, ತಾಪಂ ಸದಸ್ಯರು, ಕಾರ್ಯದರ್ಶಿಗಳು ಕ್ರಮ ಕೈಗೊಳುವಂತೆ ಸೂಚಿಸಿದ್ದೇವೆ. ಜಿಪಂ ವ್ಯಾಪ್ತಿಗೆ ಸೇರಿದ ಕೆರೆ ಏರಿ ಒಡೆದು ಹೋಗಿರುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕೆರೆ ಉಳಿಸುವುದು ನಮ್ಮ ಕರ್ತವ್ಯ: ಕೆರೆಯನ್ನು ಸುಮಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ನಿರ್ಮಾಣ ಮಾಡಿದ್ದಾರೆ. ಈ ಕೆರೆಯನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ. ಇಂದು ಅತಿಯಾದ ನೀರು ಬಂದಿದ್ದರಿಂದ ಕೆರೆಯ ಏರಿ ಒಡೆದು ಹೋಗಿದೆ. ಒಡೆದಿರುವ ಕೆರೆ ಏರಿಯನ್ನು ಡೀಸಿ ಅನುದಾನ ಅಥವಾ ನರೇಗಾ ಯೋಜನೆ, ಜಿಪಂ ಅನುದಾನ ಬಳಸಿಕೊಂಡು ದುರಸ್ತಿ ಮಾಡಬಹುದು ಎಂಬ ವಿಚಾರವನ್ನು ಜಿಪಂ ಸದಸ್ಯರು, ತಾಪಂ ಸದಸ್ಯರು. ಗ್ರಾಪಂ ಸದಸ್ಯರೊಂದಿಗೆ ಚರ್ಚಿಸಿ, ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇವೆ ಎಂದು ಹೇಳಿದರು.

ಬಿಸ್ಕೂರು ಕೆರೆ ಏರಿ ದುರಸ್ತಿಪಡಿಸಿ: ತಾಲೂಕಿನಲ್ಲಿ ಅನೇಕ ಕೆರೆಗಳು ಶಿಥಿಲವಾಗಿವೆ. ಬಿಸ್ಕೂರು ಕೆರೆಯ ಏರಿಯನ್ನು ಕೊಡಲೇ ದುರಸ್ತಿಪಡಿಸಬೇಕು. ಜಿಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ರಾಮನಗರ ಜಿ.ಪಂ.ಅಧ್ಯಕ್ಷ ನಾಗರಾಜು ಮಾತನಾಡಿ, ಕೆರೆಯ ಏರಿ ಶಿಥಿಲವಾಗಿ ಒಡೆದು ಹೋಗಿದೆ. ಕೆರೆಯನ್ನು ಉಳಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ತಹಶೀಲ್ದಾರ್‌ ರಮೇಶ್‌, ಸೋಮಶೇಖರ್‌, ಉಪ ತಹಶೀಲ್ದಾರ್‌ ರೆಹಮಾನ್‌, ತಾಪಂ ಸದಸ್ಯ ಎಂ.ಜಿ.ನರಸಿಂಹಮೂರ್ತಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-by-Poll

By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್‌.ಡಿ.ಕುಮಾರಸ್ವಾಮಿ

DK-Shivakuamar

By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ

HDK-election

By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Nikhil—Somanna

By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

CPY-1

By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.