ಕ್ರೀಡಾಂಗಣ ತಡೆಗೋಡೆ, ಸಜ್ಜಾ ಕುಸಿದು ಇಬ್ಬರ ಸಾವು
Team Udayavani, Aug 24, 2019, 3:00 AM IST
ಸಿರುಗುಪ್ಪ: ಬಳ್ಳಾರಿ ಜಿಲ್ಲೆ ಸಿರುಗುಪ್ಪದಲ್ಲಿ ಶುಕ್ರವಾರ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ವೀಕ್ಷಣಾ ಗ್ಯಾಲರಿಯ ತಡೆಗೋಡೆ ಹಾಗೂ ಸಜ್ಜಾ ಕುಸಿದು ಇಬ್ಬರು ಮೃತ ಪಟ್ಟಿದ್ದಾರೆ. 28ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಚ್ಚೊಳ್ಳಿ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ನಗರದ ನಿವಾಸಿ ಶಿವಕುಮಾರ್ (35) ಸ್ಥಳೀಯ ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಕೆ.ಬೆಳಗಲ್ಲು ಗ್ರಾಮದ ರಾಮು (18) ಮೃತಪಟ್ಟವರು. ಕ್ರೀಡಾಕೂಟದ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿದ್ದಾಗ ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕ ಮಕಿ ಆರಂಭಗೊಂಡಿತು. ಆಗ ನೂರಾರು ವಿದ್ಯಾರ್ಥಿ ಗಳು ಸ್ಟೇಡಿಯಂನ ವೀಕ್ಷಣಾ ಗ್ಯಾಲರಿಯ ಮೇಲ್ಭಾಗದಲ್ಲಿ ಜಮಾಯಿಸಿ, ಪರಸ್ಪರ ವಾಗ್ವಾದದಲ್ಲಿ ತೊಡಗಿದರು.
ಭಾರ ಹೆಚ್ಚಿದ್ದರಿಂದ ತಡೆಗೋಡೆ ಮತ್ತು ಸಜ್ಜಾ ಕುಸಿದು ಬಿದ್ದು, ವಿದ್ಯಾರ್ಥಿಗಳು ಕೆಳಗೆ ಬಿದ್ದರು. ಸ್ಟೇಡಿಯಂನ ಹಿಂದುಗಡೆ ದ್ವಿಚಕ್ರ ವಾಹನದಲ್ಲಿ ಕುಳಿ ತಿದ್ದ ಶಿವಕುಮಾರ್ ಮೇಲೆಯೇ ಸಜ್ಜಾ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟರು. ತಲೆಗೆ ಪೆಟ್ಟು ಬಿದ್ದಿದ್ದ ವಿದ್ಯಾರ್ಥಿ ರಾಮುವನ್ನು ಬಳ್ಳಾರಿ ವಿಮ್ಸ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ತೀವ್ರವಾಗಿ ಗಾಯಗೊಂಡ 16 ವಿದ್ಯಾರ್ಥಿಗಳನ್ನು ಬಳ್ಳಾರಿ ವಿಮ್ಸ್‌ಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.