ಗಣ್ಯರಿಂದ ಜೇಟ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ; ಭಾನುವಾರ ಸಂಜೆ 5ಗಂಟೆಗೆ ಅಂತ್ಯಕ್ರಿಯೆ
Team Udayavani, Aug 24, 2019, 4:20 PM IST
ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಶನಿವಾರ ವಿಧಿವಶರಾಗಿದ್ದು, ಪಾರ್ಥಿವ ಶರೀರರವನ್ನು ಏಮ್ಸ್ ಆಸ್ಪತ್ರೆಯಿಂದ ದಿಲ್ಲಿಯ ನಿವಾಸಕ್ಕೆ ರವಾನಿಸಲಾಗಿದೆ. ಗಣ್ಯಾತೀಗಣ್ಯರು ಆಗಮಿಸಿ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ನಾಳೆ ಸಂಜೆ 5ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾಳೆ ಬೆಳಗ್ಗೆ 10ಗಂಟೆವರೆಗೆ ಜೇಟ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಸಂಜೆ ಮೆರವಣಿಗೆ ಮೂಲಕ ಪಾರ್ಥಿವ ಶರೀರ ತಂದು, 5ಗಂಟೆ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಯುಎಇ ಪ್ರವಾಸದಲ್ಲಿದ್ದು, ತಮ್ಮ ಸಚಿವ ಸಂಪುಟದ ಸಹೋದ್ಯೋಗಿ, ಬಿಜೆಪಿ ಹಿರಿಯ ಮುಖಂಡ ಜೇಟ್ಲಿ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಏತನ್ಮಧ್ಯೆ ದೂರವಾಣಿ ಕರೆ ಮಾಡಿ ಜೇಟ್ಲಿ ಅವರ ಪತ್ನಿ ಹಾಗೂ ಮಕ್ಕಳ ಜೊತೆ ಮಾತುಕತೆ ನಡೆಸಿ ಸಂತಾಪ ವ್ಯಕ್ತಪಡಿಸಿರುವುದಾಗಿ ಎಎನ್ ಐ ವರದಿ ತಿಳಿಸಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಜೇಟ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.