ನಾಳೆ ವಿಪಕ್ಷ ನಾಯಕನ ಆಯ್ಕೆ?
Team Udayavani, Aug 25, 2019, 3:09 AM IST
ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚಿಸಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರು ಸೋಮವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ಸಾಕಷ್ಟು ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚಿಸಲು ಕೇಂದ್ರದ ಮಾಜಿ ಸಚಿವರೂ ಆಗಿರುವ ಗುಲಾಂ ನಬಿ ಆಜಾದ್ ಅವರು ಸೋಮವಾರ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೇ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿರುವ ಸಂಪ್ರದಾಯ ನಿರಂತರವಾಗಿ ಮುಂದುವರಿದು ಕೊಂಡು ಬಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಒಬ್ಬರಿಗೆ ಎರಡು ಹುದ್ದೆಗಳನ್ನು ನೀಡುವ ಬದಲು, ಇಬ್ಬರು ನಾಯಕರಿಗೆ ಹುದ್ದೆಗಳನ್ನು ನೀಡಿದರೆ, ಪಕ್ಷದಲ್ಲಿ ಏಕಚಕ್ರಾಧಿಪತ್ಯಕ್ಕೆ ಕಡಿವಾಣ ಹಾಕಲು ಸಾಧ್ಯ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದೆ.
ಹೀಗಾಗಿ, ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮುಂದುವರಿಸಿ, ಪ್ರತಿಪಕ್ಷ ನಾಯಕನ ಸ್ಥಾನವನ್ನು ಬೇರೆ ನಾಯಕರಿಗೆ ನೀಡಲು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಆರ್.ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ, ಡಾ.ಜಿ.ಪರಮೇಶ್ವರ್ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.
ಆದರೆ, ಸಿದ್ದರಾಮಯ್ಯ ಅವರೇ ಪ್ರತಿಪಕ್ಷ ನಾಯಕರಾಗಲಿ ಎಂದು ಒಂದು ಬಣ ಒತ್ತಡ ಹೇರುತ್ತಿದೆ. ಆದರೆ, ಎರಡೂ ಹುದ್ದೆಯಲ್ಲಿ ಅವರೊಬ್ಬರೇ ಮುಂದುವರಿದರೆ, ಪಕ್ಷವನ್ನು ಸಂಪೂರ್ಣ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಅವರ ವಿರೋಧಿ ಬಣದ ನಾಯಕರು ಹೈ ಕಮಾಂಡ್ ಮುಂದೆ ವಾದ ಮಂಡಿಸಿದ್ದಾರೆ ಎನ್ನಲಾಗುತ್ತಿದೆ.
ಅಲ್ಲದೆ, ಅವರ ಆಪ್ತರಾಗಿರುವ ದಿನೇಶ್ ಗುಂಡೂರಾವ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಎಲ್ಲವೂ ಸಿದ್ದರಾಮಯ್ಯ ಅವರ ಸೂಚನೆಯಂತೆಯೇ ನಡೆಯುತ್ತಿದೆ. ಅದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನೂ ಬದಲಾಯಿಸಬೇಕು ಎಂದು ಕೆಲವು ನಾಯಕರು ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಿದ್ದು ಆಪ್ತರಿಗೆ ಪ್ರತಿಪಕ್ಷ ಸ್ಥಾನ?: ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮುಂದುವರಿಸಿ, ಪ್ರತಿಪಕ್ಷ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಬೇಕೆಂಬ ಒತ್ತಡ ಜೋರಾದರೆ, ಸಿದ್ದರಾಮಯ್ಯನವರು ತಮ್ಮ ಆಪ್ತರಾಗಿರುವ ಮಾಜಿ ಸಚಿವ ಕೃಷ್ಣ ಬೈರೇಗೌಡ ಅಥವಾ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರ ಹೆಸರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಲು ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಹಾಗೂ ಆರ್.ವಿ.ದೇಶಪಾಂಡೆ ಅವರು ಉತ್ತರ ಕರ್ನಾಟಕ ಭಾಗಕ್ಕೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿಕೆಶಿ ಲಾಬಿ?:
ರಾಜ್ಯದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿ ಇರುವುದನ್ನು ಅರಿತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ತಮ್ಮ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿ, ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯ ಮಂತ್ರಿಯಾಗಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿ ದ್ದಾರೆ ಎನ್ನಲಾಗುತ್ತಿದೆ.
ಪ್ರತಿಪಕ್ಷ ನಾಯಕನ ಸ್ಥಾನ ತಮ್ಮ ಕೈ ತಪ್ಪಿದರೆ, ಒಂದು ವೇಳೆ ಒಕ್ಕಲಿಗ ನಾಯಕರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಪಕ್ಷ ಒಲವು ತೋರಿದರೆ, ಡಿ.ಕೆ.ಶಿವಕುಮಾರ್ ಬದಲಿಗೆ ಕೃಷ್ಣ ಬೈರೇಗೌಡ ಹೆಸರನ್ನು ಹೈಕಮಾಂಡ್ ಮುಂದಿಡಲು ಸಿದ್ದರಾಮಯ್ಯ ಆಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆಯೇ, ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾ ಯದ ಪ್ರಭಾವಿ ನಾಯಕರಾಗಿರುವ ಎಂ.ಬಿ.ಪಾಟೀಲ್ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಹೈ ಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.