ಪೋಹಣಕರ್‌ಗೆ ರಾಜಗುರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Team Udayavani, Aug 25, 2019, 9:17 AM IST
ಧಾರವಾಡ: ನಗರದ ಸೃಜನಾ ರಂಗಮಂದಿರದಲ್ಲಿ ಪಂ| ಅಜಯ ಪೋಹಣಕರ್, ಸಾವನಿ ಶೇಂಡೆ, ಕೇಶವ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಧಾರವಾಡ: ಪಂ| ಬಸವರಾಜ ರಾಜಗುರು ಜನ್ಮದಿನಾಚರಣೆ ಅಂಗವಾಗಿ ಸ್ವರಸಾಮ್ರಾಟ್ ಪಂ| ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನಗರದ ಸೃಜನಾ ರಂಗಮಂದಿರದಲ್ಲಿ 2019ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ಸಂಗೀತೋತ್ಸವ ಶನಿವಾರ ಜರುಗಿತು.
ಪೊಲೀಸ್ ಆಯುಕ್ತ ಆರ್. ದಿಲೀಪ ಅವರು 1 ಲಕ್ಷ ನಗದು ಒಳಗೊಂಡ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಶಸ್ತಿಯನ್ನು ಮುಂಬೈಯ ಪಂ| ಅಜಯ್ ಪೋಹಣಕರ್ ಅವರಿಗೆ ಪ್ರದಾನ ಮಾಡಿದರು. ತಲಾ 25 ಸಾವಿರ ನಗದು ಒಳಗೊಂಡ ಯುವ ಪ್ರಶಸ್ತಿಯನ್ನು ಪುಣೆಯ ಸಾವನಿ ಶೇಂಡೆ ಹಾಗೂ ಬಾಗಲಕೋಟೆಯ ಕೇಶವ ಜೋಶಿ ಅವರಿಗೆ ನೀಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಪಂ| ಅಜಯ್ ಪೋಹಣಕರ್ ಮಾತನಾಡಿ, ಮಹಾನ್ ಗಾಯಕರ ಹೆಸರಿನಲ್ಲಿ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಪ್ರಶಸ್ತಿ ನೀಡಿದ ಟ್ರಸ್ಟ್ ಹಾಗೂ ಸರ್ಕಾರಕ್ಕೆ ಅಭಿನಂದನೆ. ಸಂಗೀತ ಕ್ಷೇತ್ರದಲ್ಲಿ ದಿಗ್ಗಜರಾಗಿದ್ದ ಪಂ| ರಾಜಗುರು ಅವರನ್ನು 1960ರಲ್ಲಿ ಭೇಟಿ ಮಾಡಿದ್ದೆ ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮಾತನಾಡಿ, ಪಂ| ರಾಜಗುರು ಅವರ 100ನೇ ಜನ್ಮದಿನವನ್ನು ರಾಜ್ಯದ ಎಲ್ಲ ಕಡೆಗಳಲ್ಲಿ ಆಚರಿಸಲು ಚಿಂತಿಸಲಾಗಿದೆ. ಯುವ ಕಲಾವಿದರು ಈ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು ಎಂದರು.
ಟ್ರಸ್ಟ್ ಸದಸ್ಯರಾದ ಭಾರತಿದೇವಿ ರಾಜಗುರು, ಡಾ| ಮುದ್ದುಮೋನ, ಡಾ| ಉದಯಕುಮಾರ ದೇಸಾಯಿ, ಡಾ| ಜಿ.ಎಂ. ಹೆಗಡೆ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸ್ವಾಗತಿಸಿದರು. ನಿಜಗುಣ ರಾಜಗುರು ಪ್ರಾಸ್ತಾವಿಕ ಮಾತನಾಡಿದರು. ರವಿ ಕುಲಕರ್ಣಿ ನಿರೂಪಿಸಿದರು.
ಪ್ರಶಸ್ತಿ ಪ್ರದಾನದ ನಂತರ ಪ್ರಶಸ್ತಿ ಪುರಸ್ಕೃತರಾದ ಪಂ| ಅಜಯ್ ಪೋಹಣಕರ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಹಾಗೂ ಯುವ ಪ್ರಶಸ್ತಿ ವಿಜೇತ ಕಲಾವಿದರಾದ ಸಾವಣಿ ಶೇಂಡೆ ಪುಣೆ ಮತ್ತು ಕೇಶವ ಜೋಶಿ ಗಾಯನ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.