ಮೈಷುಗರ್ ಕಬ್ಬು ಗದ್ದೆಯಲ್ಲೇ ಅನಾಥ
Team Udayavani, Aug 25, 2019, 12:47 PM IST
ಮಂಡ್ಯ: ಮೈಸೂರು ಸಕ್ಕರೆ ಕಂಪನಿ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆ ಕಬ್ಬು ಗದ್ದೆಯಲ್ಲೇ ಅನಾಥವಾಗಿ ಉಳಿದಿದ್ದು, ಬೆಳೆದು ನಿಂತಿರುವ ಕಬ್ಬನ್ನು ಆದಷ್ಟು ಬೇಗ ಬೇರೆ ಕಾರ್ಖಾನೆಗಳಿಗೆ ಸಾಗಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವಂತೆ ರೈತ ಮುಖಂಡರು ಹಾಗೂ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಒತ್ತಾಯಿಸಲಾಯಿತು.
ಶನಿವಾರ ನಗರದ ಪ್ರವಾಸಿಮಂದಿರದಲ್ಲಿ ನಡೆದ ರೈತಮುಖಂಡರು, ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರ ಸಭೆಯಲ್ಲಿ ಮೈಷುಗರ್ ಮತ್ತು ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಬೆಳೆದು ನಿಂತ ಕಬ್ಬನ್ನು ತಕ್ಷಣವೇ ನೆರೆ ಜಿಲ್ಲೆ ಅಥವಾ ನೆರೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಬೇಕು. ಎರಡೂ ಕಾರ್ಖಾನೆಗಳನ್ನು ಸಮಗ್ರವಾಗಿ ಪುನಶ್ಚೇತನಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಮೈಷುಗರ್‌ಗೆ ಕಳೆದ ಬಜೆಟ್‌ನಲ್ಲಿ 100 ಕೋಟಿ ಅನುದಾನ ನೀಡಿದ್ದು, ಸದ್ಯ 17 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಉಳಿದ 83 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲು ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.
ಕಾವೇರಿ ಹೋರಾಟಕ್ಕೇ ಸೀಮಿತ ಬೇಡ: ರೈತ ಹಿತರಕ್ಷಣಾ ಸಮಿತಿ ಕೇವಲ ಕಾವೇರಿ ನೀರಿಗಾಗಿ ಮಾತ್ರ ಹೋರಾಟ ಮಾಡುವ ವೇದಿಕೆಯಾಗಿ ರೂಪುಗೊಂಡಿದೆ. ಇದು ಸರಿಯಲ್ಲ, ರೈತರ ಪ್ರತಿಯೊಂದು ಸಮಸ್ಯೆ, ವಿಚಾರದಲ್ಲೂ ರೈತ ಹಿತರಕ್ಷಣಾ ಸಮಿತಿ ನಿರ್ಧಾರ ಕೈಗೊಳ್ಳಬೇಕು. ಮಾಜಿ ಸಂಸದ ಜಿ. ಮಾದೇಗೌಡರ ಅಧ್ಯಕ್ಷತೆಯಲ್ಲಿರುವ ಸಮಿತಿಯನ್ನು ಅವರ ಅಧ್ಯಕ್ಷತೆಯಲ್ಲೇ ಪುನಾರಚನೆ ಮಾಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಪ್ರತಿ ತಿಂಗಳ ಎರಡನೇ ಶನಿವಾರ ಸಭೆ: ರೈತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತೀ ತಿಂಗಳ ಎರಡನೇ ಶನಿವಾರ ಸರ್ವಪಕ್ಷಗಳ ಮುಖಂಡರ ಸಭೆ ನಡೆಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಾಲ ಕಾಲಕ್ಕೆ ಚರ್ಚೆ, ಅಧ್ಯಯನ ನಡೆಸಬೇಕು. ಆ ಮೂಲಕ ರೈತರ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗಸೂಚಿ ಕಂಡುಕೊಳ್ಳಬೇಕು. ಪಕ್ಷಾತೀತವಾಗಿ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಯಿತು.
ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, ಮೈಷುರ್ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡಲು ಇರುವಂತಹ ಅನುಕೂಲ ಮತ್ತು ಅನಾಕೂಲಗಳ ಕುರಿತಂತೆ ಚರ್ಚೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದರು.
ಈ ಹಿಂದೆ ಮುಖ್ಯಮಂತ್ರಿಗಳೊಟ್ಟಿಗೆ ನಡೆದ ಸಭೆಯಲ್ಲಿ ಮೈಷುಗರ್ ತಕ್ಷಣ 69 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ಬಿಡುಗಡೆ ಮಾಡಲಿಲ್ಲ. ಜೊತೆಗೆ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣ ಮಾತನಾಡಿ, ಮೈಷುಗರ್ ಹಾಗೂ ಪಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಜೊತೆಗೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದು ಅಗತ್ಯ ಎಂದರು.
ಮೈಷುಗರ್ ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ ಮಾತನಾಡಿ, ಕಾರ್ಖಾನೆ ಪ್ರಾರಂಭವಾಗುವರೆವಿಗೂ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬನ್ನು ಬೇರೆ ಕಾರ್ಖಾನೆಗಳಿಗೆ ಸಾಗಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿದರು.
ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಮಾತನಾಡಿ, ಈಗಾಗಲೇ ತಡ ಆಗಿದೆ. ಮತ್ತೆ ತಡ ಮಾಡುವುದು ಬೇಡ, ರೈತರ ಹಿತ ಕಾಯಬೇಕಾದದ್ದು ಸರ್ಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯ ಆಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಬೇರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ಮನವಿ ಮಾಡಬೇಕು ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ರೈತ ಮುಖಂಡರಾದ ಚಂದ್ರಶೇಖರ್, ಸುಧೀರ್, ದೇಶಹಳ್ಳಿ ಮೋಹನ್‌ಕುಮಾರ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಇತರರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.