ಸಮರ್ಪಕ ವಿದ್ಯುತ್‌ ಒದಗಿಸಿ

ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರ ಎದುರು ರೈತರ ಧರಣಿ

Team Udayavani, Aug 25, 2019, 1:29 PM IST

25-Agust-26

ಮುದಗಲ್ಲ: ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮುದಗಲ್ಲ: ಪದೇಪದೇ ವಿದ್ಯುತ್‌ ಕಡಿತದಿಂದ ರೋಸಿ ಹೋದ ನಾಗಲಾಪುರ ಗ್ರಾಮಸ್ಥರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಗ್ರಾಮದಲ್ಲಿನ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರಿಗೆ ಶನಿವಾರ ಪ್ರತಿಭಟನೆ ನಡೆಸಿದರು.

ಕಳೆದ ಒಂದು ವರ್ಷದಿಂದ ವಿದ್ಯುತ್‌ ಕಣ್ಣಾಮುಚ್ಚಾಲೆ ಆಟ ನಿಂತಿಲ್ಲ, ಜೆಸ್ಕಾಂ ಅಧಿಕಾರಿಗಳಿಗೆ ಕೇಳಿದರು ಲೈನ್‌ ಟ್ರಿಪ್‌, ಲೈನ್‌ ಫಾಲ್ಟ್ , ಜಂಪ್‌ ಕಟ್ ಆಗಿದೆ, ಲೈನ್‌ ಕಟ್ಟಾಗಿದೆ ಎಂಬ ಉತ್ತರ ನೀಡುತ್ತಾರೆ. ನಾಗಲಾಪುರ ಪ್ರಸರಣ ಕೇಂದ್ರದಿಂದ ಸಿಂಧನೂರು, ಮಸ್ಕಿ ತಾಲೂಕಿನ ಹಳ್ಳಿಗಳಲ್ಲದೇ ಕೊಪ್ಪಳ ಜಿಲ್ಲೆಯ ಹಳ್ಳಿಗಳಿಗೂ ವಿದ್ಯುತ್‌ ಒದಗಿಸಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಪದೇಪದೆ ವಿದ್ಯುತ್‌ ಕೈಕೊಡುತ್ತಿದೆ. ಆಯಾ ತಾಲೂಕಿನ ಹಳ್ಳಿಗಳಿಗೆ ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಹಿಂದೆ ಎರಡ್ಮೂರು ಬಾರಿ ಪ್ರತಿಭಟನೆಗೆ ಮುಂದಾದಾಗ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿಸಿಲ್ಲ, ಈಗ ಒಂದು ವಾರದಿಂದ ನಿರಂತರ ಜ್ಯೋತಿ ಲೈನ್‌ ಹಾಗೂ ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಇಲ್ಲದೇ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಅಧಿಕಾರಿಗಳು ಬರುವರೆಗೆ ಪ್ರತಿಭಟನೆ ಹಿಂಪಡೆಯುವದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಮೆದಕಿನಾಳ ಸೆಕ್ಷನ್‌ ವಿಭಾಗವನ್ನು ನಾಗಲಾಪುರ ಸೆಕ್ಷನ್‌ನಿಂದ ಬೇರ್ಪಡಿಸಬೇಕು ಎಂದು ಗ್ರಾಪಂ ಸದಸ್ಯ ಲಕ್ಷ್ಮಣ ರಾಠೊಡ ಆಗ್ರಹಿಸಿದರು.

ಲಿಂಗಸುಗೂರ ಜಿಸ್ಕಾಂ ಎಇಇ ಬನ್ನಪ್ಪ ಕರಿಬಂಟನಾಳ ಸ್ಥಳಕ್ಕೆ ಆಗಮಿಸಿ ಕನ್ನಾಳ ಲೈನ್‌ ತೆರವುಗೊಳಿಸಿ ವಿದ್ಯುತ್‌ ಸಂಪರ್ಕ ನೀಡಿದ ಬಳಿಕ ಮತ್ತು ಧರಣಿ ನಿರತರೊಂದಿಗೆ ಮಾತನಾಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಗ್ರಾಪಂ ಸದಸ್ಯರಾದ ಲಕ್ಷ್ಮಣ ರಾಠೊಡ, ಛತ್ರಪ್ಪ ಪೂಜಾರಿ, ಶಿವನಗೌಡ ಪೊಲೀಸ್‌ ಪಾಟೀಲ, ತಾಪಂ ಮಾಜಿ ಸದಸ್ಯ ಶರಣಪ್ಪ ಮಸ್ಕಿ, ಪ್ರಾಂತ ರೈತ ಸಂಘದ ಮುಖಂಡ ಆಂಜನೇಯ, ರಾಮಣ್ಣ ಗೌಂಡಿ, ಯಂಕಪ್ಪ ಒಡ್ಡರ್‌, ಬಸವರಾಜ, ಬಸವರಾಜ ಗೌಂಡಿ, ಯಮನೂರ, ಪ್ರಕಾಶ, ಬಾಲನಗೌಡ, ವೀರೇಶ, ಶ್ರೀಕಾಂತಗೌಡ ಗುತ್ತೆದಾರ, ದ್ಯಾಮಣ್ಣ ಗೌಂಡಿ, ಮುತ್ತಣ್ಣ, ಗ್ಯಾನನಗೌಡ, ಜಗನ್ನಾಥ, ಶಿವು ಸೇರಿದಂತೆ ಅನೇಕರು ಇದ್ದರು.

ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದಿಂದ ಮಸ್ಕಿ ತಾಲೂಕಿನ ಹಳ್ಳಿಗಳಿಗೆ ವಿದ್ಯುತ್‌ ಪೂರೈಸಲಾಗಿದೆ. ಅಲ್ಲಿನ ಲೈನ್‌ಮನ್‌ಗಳು ಸಮಸ್ಯೆಗಳನ್ನು ಬೇಗ ಪರಿಹರಸದ್ದರಿಂದ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ.
ಬನ್ನೆಪ್ಪ ಕರಿಬಂಟನಾಳ,
ಜೆಸ್ಕಾಂ ಕಾರ್ಯಪಾಲನಾ ಅಭಿಯಂತರ,
ಲಿಂಗಸುಗೂರ ಉಪವಿಭಾಗ.

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.