ಜೇಟ್ಲಿ ಸಹಕಾರ ಮರೆಯಲ್ಲ: ಖರ್ಗೆ
371ನೇ (ಜೆ) ಕಲಂ ಜಾರಿಗೆ ಮುಕ್ತ ಮನಸ್ಸಿನಿಂದ ಬೆಂಬಲಿಸಿದ್ದರು
Team Udayavani, Aug 25, 2019, 3:46 PM IST
ವಾಡಿ: ಅಗಲಿದ ನಾಯಕ ಅರುಣ ಜೇಟ್ಲಿ ಅವರಿಗೆ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಶಾಸಕ ವಾಲ್ಮೀಕಿ ನಾಯಕ ಇದ್ದರು
ಕಲಬುರಗಿ: ಅನಾರೋಗ್ಯದಿಂದ ಶನಿವಾರ ನಿಧನರಾದ ಬಿಜೆಪಿ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ ಜೇಟ್ಲಿ ಅವರಿಗೆ ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅರುಣ ಜೇಟ್ಲಿ ಸಂಭಾವಿತ ವ್ಯಕ್ತಿ ಮತ್ತು ನಿಪುಣ ವಕೀಲರಾಗಿದ್ದರು. ಸದನದ ಹೊರಗೆ ಮತ್ತು ಒಳಗೆ ವಾದ ಮಂಡಿಸಿದರೂ, ಅದನ್ನು ತಮ್ಮದೇ ದಾಟಿಯಲ್ಲಿ ಪ್ರತಿಪಾದಿಸುವ ಛಾತಿ ಮೈಗೂಡಿಸಿಕೊಂಡಿದ್ದರು. ಯಾರ ಮೇಲೂ ಸೇಡು, ದ್ವೇಷದ ಭಾವನೆ ಹೊಂದಿರಲಿಲ್ಲ. ಹೈದ್ರಾಬಾದ ಕರ್ನಾಟಕ ಭಾಗಕ್ಕೆ 371ನೇ (ಜೆ) ಕಲಂ ಜಾರಿ ಮಾಡುವಾಗ ರಾಜ್ಯಸಭೆಯಲ್ಲಿ ಜೇಟ್ಲಿ ಅವರ ಸಹಕಾರ ಕೇಳಿದಾಗ, ಅವರು ತಕ್ಷಣವೇ ಎಲ್ಲರೂ ಒಪ್ಪಿಕೊಂಡಿದ್ದರೆ ನನ್ನ ಅಭ್ಯಂತರವೇನಿಲ್ಲ ಎಂದು ಮಸೂದೆಗೆ ಮುಕ್ತ ಮನಸ್ಸಿನಿಂದ ಬೆಂಬಲ ಸೂಚಿಸಿದ್ದರು. ಈ ಘಟನೆ ನನ್ನ ಜೀವನದಲ್ಲಿ ಮರೆಯಲಾಗದ್ದು ಎಂದು ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಡಾ| ಮಲ್ಲಿಕಾರ್ಜುನ ಖರ್ಗೆ ಸ್ಮರಿಸಿದ್ದಾರೆ.
ಜೇಟ್ಲಿ ಅವರನ್ನು ಕಳೆದುಕೊಂಡಿದ್ದು ನನಗೂ ಅಗಾಧ ನೋವುಂಟು ಮಾಡಿದೆ. ಅವರ ಅಗಲಿಕೆ ದುಖಃವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ದೇವರು ನೀಡಲಿ ಎಂದು ಖರ್ಗೆ ತಮ್ಮ ಸಂತಾಪ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.