ನೆರೆ ಪೀಡಿತ ಗ್ರಾಮಗಳಿಗೆ ಜೆಸ್ಕಾಂ ತಂಡ ಭೇಟಿ-ಪರಿಶೀಲನೆ

ಜೆಸ್ಕಾಂಗೆ 4 ಕೋಟಿಗೂ ಅಧಿಕ ನಷ್ಟ: ರಾಘಪ್ರಿಯ

Team Udayavani, Aug 26, 2019, 11:46 AM IST

26-Agust-13

ಸುರಪುರ: ನೆರೆ ಹಾವಳಿ ಗ್ರಾಮಗಳಿಗೆ ಜೆಸ್ಕಾಂ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾಘಪ್ರಿಯ ಹಾಗೂ ಇತರೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.

ಸುರಪುರ: ಈಚೆಗೆ ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಧಿಕ ನೀರು ಹರಿಸಿದ್ದರಿಂದ ನೆರೆ ಹಾವಳಿ ಸೃಷ್ಟಿಯಾಗಿ ತಾಲೂಕಿನಾದ್ಯಂತ ಜೆಸ್ಕಾಂ ಇಲಾಖೆಗೆ 4 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ವಿದ್ಯುತ್‌ ಸರಬರಾಜು ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾಘಪ್ರಿಯ ತಿಳಿಸಿದರು.

ಈ ಕುರಿತು ರವಿವಾರ ನೆರೆ ಹಾವಳಿಗೆ ತುತ್ತಾದ ತಾಲೂಕಿನ ನದಿ ತಟದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ಕುರಿತು ಪರೀಶಿಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಗೆ ತಾಲೂಕಿನಲ್ಲಿ ಇದುವರೆಗೂ ಕಂಡು ಕೇಳರಿಯದಷ್ಟು ನಷ್ಟವಾಗಿದೆ. ಕಳೆದ 10 ವರ್ಷಗಳ ಹಿಂದೆ ಪ್ರವಾಹ ಬಂದಾಗ ಇಷ್ಟೊಂದು ಹಾನಿಯಾಗಿರಲಿಲ್ಲ ಎಂದರು.

ಇಲಾಖೆ ನೀಡಿದ್ದ ಮಾಹಿತಿ ಮೇರೆಗೆ ತಾಲೂಕಿನ ನದಿ ಪಾತ್ರದ ವಿವಿಧ ಗ್ರಾಮಗಳಿಗೆ ಖುದ್ದು ಭೇಟಿ ನೀಡಿದ್ದೇನೆ. ಎಲ್ಲಡೆ ಬಾರಿ ಪ್ರಮಾಣದಲ್ಲಿ ನಷ್ಟವಾಗಿರುವುದು ಕಂಡು ಬಂದಿದೆ. 80 ಕಿ.ಮೀಟರ್‌ ಹೆಚ್ಚು ವಿದ್ಯುತ್‌ ತಂತಿ ಹರಿದು ಹೋಗಿವೆ, 383 ವಿದ್ಯುತ್‌ ಪರಿವರ್ತಕಗಳು (ಟಿಸಿ) ಸುಟ್ಟು ಹೋಗಿವೆ. 876ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ಇದರಲ್ಲಿ 14 ಟಿಸಿ ಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಎಂದು ತಿಳಿಸಿದರು.

ಚಂದ್ಲಾಪುರ, ಚೌಡೇಶ್ವರಿಹಾಳ, ಹೆಮ್ಮಡಗಿ, ಅಡ್ಡಡೊಗಿ, ಸೂಗೂರು, ಹೆಮನೂರ ಸೇರಿ 136 ಟಿ ಸಿ, 260 ಕಂಬಗಳು ಹಾಣಿಗೆ ಒಳಗಾಗಿವೆ. ಟಿಸಿ, ವಿದ್ಯುತ್‌ ಕಂಬ, ಹಾಳಾದ ವಿದ್ಯುತ್‌ ತಂತಿ ಸೇರಿ ಒಟ್ಟು 4 ಕೋಟಿಗೂ ಅಧಿಕ ಹಾನಿಯಾಗಿದೆ ಎಂದು ವಿವರಿಸಿದರು.

ಡಿಟಿಒ ಜಯಕುಮಾರ ಮಾತನಾಡಿ, ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಈಗಾಗಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಲಾಖೆ 10 ಜನ ಅಧಿಕಾರಿಗಳು, 180 ಜನ ಕಾರ್ಮಿಕರು, 18 ಜನ ಗುತ್ತಿಗೆದಾರರು ಮತ್ತು ಸಿಬ್ಬಂದಿಗಳು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕಳೆದ ನಾಲ್ಕಾರು ದಿನಗಳಲ್ಲಿ 180 ಟಿಸಿಗಳನ್ನು ಅಳವಡಿಸಲಾಗಿದೆ. 4 ನೂರಕ್ಕೂ ಮೇಲ್ಪಟ್ಟು ಕಂಬಗಳನ್ನು ಹಾಕಲಾಗಿದ್ದು, ಕಾಮಗಾರಿ ಮುಗಿದಿರುವ ಕಡೆ ವಿದ್ಯುತ್‌ ಸರಬರಾಜು ನೀಡಲಾಗಿದೆ ಎಂದು ವಿವರಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಭಿಯಂತ ಆರ್‌,ಡಿ. ಚಂದ್ರಶೇಖರ ಮಾತನಾಡಿ, ನದಿ ಮತ್ತು ಹಳ್ಳಗಳ ದಂಡೆಗಳ ಕೆಲ ಕಡೆ ನೀರು ನಿಂತಿರುವ ಪ್ರದೇಶಗಳಲ್ಲಿ ಕೆಲಸಕ್ಕೆ ಅಡಚಣೆಯಾಗುತ್ತಿದೆ. ಭೂಮಿ ಒಣಗಿರುವ ಪ್ರದೇಶಗಳಲ್ಲಿ ಕೆಲಸ ಮಾಡಲಾಗುತ್ತಿದೆ. ಹಂತ ಹಂತವಾಗಿ ಕೆಲಸ ಮಾಡಿ ಸಮರ್ಪಕ ವಿದ್ಯುತ್‌ ಒದಗಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ. ರೈತರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು. ಜೆಸ್ಕಾಂ ಇಲಾಖೆ ಅಧೀಕ್ಷಕ ಮೋಹನಕುಮಾರ, ವಿಭಾಗೀಯ ಇಇ ರಾಘವೇಂದ್ರ ಇದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.