ಜೀತ ಕಾರ್ಮಿಕ ಪದ್ಧತಿ ಇನ್ನೂ ಜೀವಂತ
Team Udayavani, Aug 26, 2019, 3:33 PM IST
ರಾಮನಗರದಲ್ಲಿ ನಡೆದ ಜೀತ ಕಾರ್ಮಿಕರು ಮತ್ತು ಮಾನವ ಕಳ್ಳ ಸಾಗಾಣಿಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಜಿ.ಉಮಾ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ನ್ಯಾಯಧೀಶರಾದ ಮರುಳ ಸಿದ್ದಾರಾಧ್ಯ, ಸಿದ್ದಲಿಂಗ ಪ್ರಭು ಉಪಸ್ಥಿತರಿದ್ದರು.
ರಾಮನಗರ: ಜೀತ ಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಕೆಲವು ಅಧ್ಯಯನಗಳು ತಿಳಿಸಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಜಿ.ಉಮಾ ಕಳವಳ ವ್ಯಕ್ತಪಡಿಸಿದರು.
ಪ್ಯಾನಲ್ ವಕೀಲರು, ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗಾಗಿ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಇಂಟರ್ ನ್ಯಾಷನಲ್ ಜಸ್ಟೀಸ್ ಮಿಷನ್ (ಐ.ಜೆ.ಎಂ) ಮತ್ತು ಜಿಲ್ಲಾ ವಕೀಲರ ಸಂಘದಿಂದ ನಡೆದ ಜೀತ ಕಾರ್ಮಿಕರು ಮತ್ತು ಮಾನವ ಕಳ್ಳ ಸಾಗಾಣಿಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಜೀತ ಕಾರ್ಮಿಕ ಪದ್ಧತಿಯ ಬಗ್ಗೆ ಸಮಾಜ ನಿರ್ಲಕ್ಷ್ಯ ಹೊಂದಿರುವುದರಿಂದಲೇ ಈ ಪದ್ಧತಿ ಇನ್ನೂ ಜೀವಂತ ವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾನೂನಿದ್ದರೂ ಅನಿಷ್ಟ ಪದ್ಧತಿ ಇದೆ: 1975-76ರಲ್ಲಿ ಜೀತ ಕಾರ್ಮಿಕ ಪದ್ಧತಿ ನಿಷೇಧ ಕಾನೂನು ಜಾರಿಯಾದ ನಂತರ ಈ ಅನಿಷ್ಟ ಪದ್ಧತಿಯಿಂದ ಸಮಾಜ ಮುಕ್ತಿಯಾಗಿದೆ ಎಂಬ ಭಾವನೆ ನಾಗರಿಕರಲ್ಲಿದೆ. ಆದರೆ, ಈ ಘೋರ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಹಲವು ಅಧ್ಯಯನಗಳು ತಿಳಿಸಿವೆ. ಸಂವಿಧಾನದ 123ನೇ ವಿಧಿಯಲ್ಲಿ ಬಲವಂತ ದುಡಿಮೆ ಮತ್ತು ಬಿಕ್ಷಾಟನೆಯನ್ನು ನಿಷೇಧಿಸಿದೆ. ಸಂವಿಧಾನದ ಆಶಯಗಳನ್ನು ಈಡೇರಿಸುವ ಉದ್ದೇಶದಿಂದಲೇ ಜೀತ ಕಾರ್ಮಿಕ ಪದ್ಧತಿಯನ್ನು ನಿಷೇಧಿಸಿ ಕಾನೂನು ಜಾರಿಯಾಗಿದೆ. ಕಾನೂನು ಜಾರಿಯಾಗಿ ಇಷ್ಟು ವರ್ಷಗಳು ಕಳೆದರು ಈ ಅನಿಷ್ಟ ಪದ್ಧತಿಯ ಘೋರ ಮುಖ ಇನ್ನು ಇದೆ ಎಂದರು.
ಅಧ್ಯಯನದಲ್ಲಿ ಭಯಾನಕ ಅಂಶ ಬಯಲು: ರಾಮನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಈ ಅನಿಷ್ಟ ಪದ್ಧತಿ ಇನ್ನು ಜೀವಂತವಾಗಿದೆ ಎಂದು ಐಜೆಎಂ ಅಧ್ಯಯನ ತಿಳಿಸಿದೆ. ಇದು ಕಳವಳಕಾರಿ ಅಂಶ. ಸಮಾಜದಲ್ಲಿ ಇನ್ನು ಶೇ.40ರಷ್ಟು ಮಂದಿ ಜೀತ ಪದ್ಧತಿಯಲ್ಲೇ ದುಡಿಯುತ್ತಿದ್ದಾರೆ. ಈ ಪೈಕಿ ಶೇ.92ರಷ್ಟು ಮಂದಿ ಜೀತ ಕಾರ್ಮಿಕರು ಪ.ಜಾತಿ ಮತ್ತು ಪ.ಪಂಗಡಗಳ ಸಮುದಾಯದವರಿದ್ದಾರೆ ಎಂಬ ಭಯಾನಕ ಅಂಶವನ್ನು ಅಧ್ಯಯನಗಳು ಬರಂಗ ಪಡಿಸಿವೆ. ಶೇ.44ರಷ್ಟು ಮಂದಿ ಹೊರರಾಜ್ಯಗಳ ಕಾರ್ಮಿಕರಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಸಹಕಾರದಿಂದ ಈ ಪದ್ಧತಿ ನಿರ್ಮೂಲನೆ: ವಿಶೇಷವಾಗಿ ಇಟ್ಟಿಗೆ ಗೂಡು, ಕಲ್ಲುಗಣಿ, ಕೃಷಿ ಮತ್ತು ಮೆನೆಗೆಲಸ ದುಡಿಮೆಯಲ್ಲಿ ಈ ಪದ್ಧತಿ ಹೆಚ್ಚಾಗಿದೆ ಎನ್ನಲಾಗಿದೆ. ನಾಗರಿಕರ ಸಹಕಾರವಿದ್ದರೆ ಈ ಪದ್ಧತಿಯನ್ನು ನಿರ್ಮೂಲನೆ ಮಾಡಬಹದು. ವಕೀಲರು ಮತ್ತು ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೂ ಈ ಪದ್ಧತಿಯ ಬಗ್ಗೆ ಸಂವೇಧನೆಯ ಒಂದು ಸಭೆ ಅಗತ್ಯವಿತ್ತು. ಅದು ಇಂದು ನೆರವೇರಿದೆ ಎಂದರು.
ಜೀತ ಪದ್ಧತಿ ಮುಖ ಬದಲು: ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಮಾತನಾಡಿ, ಜೀತ ಪದ್ಧತಿಯ ಮುಖಗಳು ಇಂದು ಬದಲಾಗಿದೆ. ಹೊಸ ರೂಪಗಳಲ್ಲಿ ಈ ಪದ್ಧತಿ ಇನ್ನು ಜೀವಂತವಾಗಿದೆ. ಇದನ್ನು ಪತ್ತೆ ಹಚ್ಚಿ ಅವರನ್ನು ಬಿಡುಗಡೆಗೊಳಿಸಬೇಕಾಗಿದೆ. ಈ ಪದ್ಧತಿಯ ನಿರ್ಮೂಲನೆಗೆ ಕಂದಾಯ ಇಲಾಖೆಯ ಹೊಣೆಯು ಇದ್ದು, ಇಲಾಖೆಯ ಅಧಿಕಾರಿಗಳಿಗೂ ಇಂತಹ ಸಂವೇಧನಾ ಕಾರ್ಯಗಾರದ ಅಗತ್ಯವಿದೆ ಎಂದು ಹೇಳಿದರು.
ಈ ವೇಳೆ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮರುಳ ಸಿದ್ದಾರಾಧ್ಯ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಲ್ಕಣಿ, 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ, ಐಜೆಎಂ ನಿರ್ದೇಶಕ ಇಂದ್ರಜಿತ್ ಪವಾರ್, ಪ್ರಧಾನ ಹಿರಿಯ ಸಿಲ್ ನ್ಯಾಯಾಧೀಶ ಎನ್.ಎಸ್.ಕುಲಕರ್ಣಿ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಹಾಜರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ (ಬೆಂಗಳೂರು) ಎಸ್.ಆರ್.ಸೋಮ ಶೇಖರ್ ಮತ್ತು ಐಜೆಎಂನ ಅಸೋಸಿಯೇಟ್ ಡೈರಕ್ಟರ್ ಲಿಯಂ ಕ್ರಿಷ್ಟೋಪರ್ ಭಾಗವಹಿಸಿದ್ದರು. ಅಪರ ಹಿರಿಯ ಸಿಲ್ ನ್ಯಾಯಾಧೀಶರಾದ ಅನುಪಮ ಲಕ್ಷ್ಮೀ ಸ್ವಾಗತಿಸಿದರು. ಪ್ರಧಾನ ಸಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಮಿಲನ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.