ಡಿಐಜಿ ರಮೇಶ್ ನಿಧನ
Team Udayavani, Aug 27, 2019, 3:02 AM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್. ರಮೇಶ್ (54) ಸೋಮವಾರ ನಿಧನ ಹೊಂದಿ ದ್ದಾರೆ. ಅನಾರೋಗ್ಯದಿಂದ ಬಳಲು ತ್ತಿದ್ದ ಡಿಐಜಿ ರಮೇಶ್ ಅವರು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ 7.45ರ ಸುಮಾರಿಗೆ ಮೃತ ಪಟ್ಟಿ ದ್ದಾರೆಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಾಮಾಣಿಕತೆ ಹಾಗೂ ಸರಳ ವ್ಯಕ್ತಿತ್ವ ಹೊಂದಿದ್ದ ಅಧಿಕಾರಿ ಎಂದೇ ಇಲಾಖೆಯಲ್ಲಿ ಗುರುತಿಸಿ ಕೊಂಡಿದ್ದ ರಮೇಶ್ ಅವರ ಅಕಾಲಿಕ ನಿಧನಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಂತಾಪ ಸೂಚಿ ಸಿದ್ದು, ಕಂಬನಿ ಮಿಡಿದಿದ್ದಾರೆ. ದಾಬಸ್ ಪೇಟೆಯ ಸಮೀ ಪದ ಮೈಲನ ಹಳ್ಳಿಯಲ್ಲಿ ರಮೇಶ್ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಸರ್ಕಾರಿ ಗೌರವ ಗಳೊಂದಿಗೆ ನೆರವೇರಿತು.
ಸರಳ ವ್ಯಕ್ತಿತ್ವದ ಅಧಿಕಾರಿ: 1990ರ ಬ್ಯಾಚ್ನ ಕೆಎಸ್ಪಿಎಸ್ ಅಧಿಕಾರಿ ರಮೇಶ್ ಅವರು ಆರಂಭದಲ್ಲಿ ಕಾರ್ಕಳ ಉಪವಿಭಾಗದ ಡಿಎಸ್ಪಿ ಆಗಿ ಸೇವೆ ಸಲ್ಲಿಸಿದ್ದರು. 2005ರಲ್ಲಿ ಐಪಿಎಸ್ಗೆ ಮುಂಬಡ್ತಿ ಪಡೆದ ಅವರು ರಾಜ್ಯ ಗುಪ್ತಚರ ದಳ, ಮಂಗಳೂರು ಡಿಸಿಪಿ, ಉತ್ತರ ಕನ್ನಡ ಎಸ್ಪಿ, ಬೆಂಗ ಳೂರು ಅಪರಾಧ ವಿಭಾಗದ ಡಿಸಿಪಿ ಸೇರಿ ಹಲವೆಡೆ ಗಮನಾರ್ಹ ಕಾರ್ಯ ನಿರ್ವಹಿಸಿದ್ದರು. 2016ರಲ್ಲಿ ಡಿಐಜಿ ಹುದ್ದೆಗೆ ಮುಂಬಡ್ತಿ ಪಡೆದ ಅವರು ಸದ್ಯ ಪೊಲೀಸ್ ಪ್ರಧಾನ ಕಚೇರಿಯ ಯೋಜನೆ ಮತ್ತು ಆಧು ನಿಕರಣ ವಿಭಾಗದ ಡಿಐಜಿ ಆಗಿ ಸೇವೆ ಸಲ್ಲಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.