ವಾರ್ಡನ್ ಮೇಲೆ ಗುತ್ತಿಗೆದಾರನಿಂದ ಹಲ್ಲೆ-ಪ್ರತಿಭಟನೆ
Team Udayavani, Aug 27, 2019, 10:51 AM IST
ಕಲಬುರಗಿ: ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯದ ವಾರ್ಡನ್ ಮೇಲೆ ಹಲ್ಲೆ ನಡೆಸಿದ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಾರ್ಡನ್‌ಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿರುವ ಮಲ್ಲಿಕಾರ್ಜುನ ಹುಲೇಕರ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಜಿಲ್ಲಾ ವಸತಿ ನಿಲಯ ಮೇಲ್ವಿಚಾರಕರ ಸಂಘದ ನೇತೃತ್ವದಲ್ಲಿ ವಾರ್ಡನ್‌ಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಆ.23ರಂದು ಮಧ್ಯಾಹ್ನ ವಾರ್ಡನ್ ಮಲ್ಲಿಕಾರ್ಜುನ ಹುಲೇಕರ ಎನ್ನುವರ ಮೇಲೆ ಗುತ್ತಿಗೆದಾರ ರಾಜಕುಮಾರ ಜನಕೇರಿ ಎನ್ನುವಾತ ಹಲ್ಲೆ ಮಾಡಿದ್ದಾನೆ. ಎಂಟು ತಿಂಗಳ ಹಿಂದಿನ ಅಸಮಂಜಸ ಬಿಲ್ ತಂದು ಸಹಿ ಮಾಡುವಂತೆ ಒತ್ತಾಯಿಸಿದ್ದ. ಇದಕ್ಕೆ ಒಪ್ಪದೇ ಇದ್ದಾಗ ವಾರ್ಡನ್ ಮೇಲೆ ಇಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಇದರಿಂದ ವಾರ್ಡನ್ ಹುಲೇಕರ ತಲೆ, ಭುಜ, ಕಾಲಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆರೋಪಿಯಿಂದ ವಾರ್ಡನ್‌ಗೆ ಜೀವ ಬೆದರಿಕೆ ಇದೆ ಎಂದು ಪ್ರತಿಭಟನಾಕಾರರು ದೂರಿದರು.
ವಾರ್ಡನ್‌ಗಳು ನಿರ್ಭೀತಿಯಿಂದ ಸರ್ಕಾರಿ ಸೇವೆ ಸಲ್ಲಿಸಲು ರಕ್ಷಣೆ ನೀಡಬೇಕು. ಹಲ್ಲೆ ಆರೋಪಿ ರಾಜಕುಮಾರ ಜನಕೇರಿಯನ್ನು ಬಂಧಿಸಿ ಶಿಕ್ಷೆ ನೀಡಬೇಕು. ಆರೋಪಿ ಒಡೆತನದ ಲಕ್ಷ್ಮಿ ಟೆಂಡರ್ ಕಪ್ಪು ಪಟ್ಟಿಗೆ ಸೇರಿಸಬೇಕು. ಲಕ್ಷ್ಮಿ ಟೆಂಡರ್ನ ಬಾಕಿ ಉಳಿದಿರುವ ಯಾವುದೇ ಬಿಲ್ಗಳನ್ನು ಮಂಜೂರು ಮಾಡದೇ ರದ್ದು ಪಡಿಸಬೇಕೆಂದು ಪ್ರತಿಭಟನಾ ನಿರತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಬೂಬ್ ಸಾಬ ಕಾರಟಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.