ಕಡಿಮೆ ಖರ್ಚಿನಲ್ಲಿ ಶೀಘ್ರ ವ್ಯಾಜ್ಯ ಇತ್ಯರ್ಥಕ್ಕೆ ಅವಕಾಶ


Team Udayavani, Aug 27, 2019, 2:27 PM IST

bdar-tdy-2

ಬೀದರ: ರಾಷ್ಟ್ರೀಯ ಲೋಕ ಅದಾಲತ್‌ ಕುರಿತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶೆ ಪ್ರೇಮಾವತಿ ಮನಗೂಳಿ ಮಾಹಿತಿ ನೀಡಿದರು.

ಬೀದರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸೆಪ್ಟೆಂಬರ್‌ 14ರಂದು ರಾಷ್ಟ್ರೀಯ ಲೋಕ ಅದಾಲತ್‌ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಲೋಕ ಅದಾಲತ್‌ನ ಲಾಭ ಪಡೆಯಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಹೇಳಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಲೋಕ ಅದಾಲತ್‌ನಲ್ಲಿ ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರ ಮತ್ತು ಅಂತಿಮವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದು. ಇಲ್ಲಿ ಯಾವುದೇ ಕೋರ್ಟ್‌ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಅಲ್ಲದೇ ಕಕ್ಷಿದಾರರೇ ನೇರವಾಗಿ ಭಾಗವಹಿಸಲು ಅವಕಾಶವಿರುತ್ತದೆ ಎಂದು ಹೇಳಿದರು.

2019ರ ಜುಲೈನಲ್ಲಿ ನಡೆಸಲಾದ ಲೋಕ ಅದಾಲತ್‌ನಲ್ಲಿ 3,603 ಪ್ರಕರಣಗಳನ್ನು ಗುರುತಿಸಲಾಗಿತ್ತು. ಆ ಪೈಕಿ 1,870 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಇದೀಗ ಸೆ.14ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲು 2,057 ಪ್ರಕರಣಗಳನ್ನು ಗುರುತಿಸಲಾಗಿದೆ. ಇನ್ನೂ ಸಮಯಾವಕಾಶವಿದ್ದು, ಹೆಚ್ಚು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಇದರ ಲಾಭ ಪಡೆಯಬೇಕು ಎಂದು ಹೇಳಿದರು.

ಸಂಧಾನಕಾರರು ಸೂಚಿಸುವ ಪರಿಹಾರ ತೃಪ್ತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದಾಗಿದೆ. ಯಾವುದೇ ರೀತಿಯ ಒತ್ತಡ ಇರುವುದಿಲ್ಲ. ಸಿವಿಲ್ ಪ್ರಕರಣ ಇತ್ಯರ್ಥಗೊಂಡರೆ ಅವಾರ್ಡ್‌ ಮಾಡಲಾಗುವುದು. ಅದು ಸಾಮಾನ್ಯ ಡಿಕ್ರಿಯಷ್ಟೆ ಮಹತ್ವ ಪಡೆದುಕೊಂಡಿರುತ್ತದೆ. ಪ್ರಕರಣ ರಾಜಿ ಮಾಡಿಕೊಂಡಲ್ಲಿ ಶೇ.75ರಷ್ಟು ನ್ಯಾಯಾಲಯದ ಶುಲ್ಕವನ್ನು ವಾಪಸ್‌ ನೀಡಲಾಗುತ್ತದೆ. ಅಲ್ಲದೇ ಲೋಕ ಅದಾಲತ್‌ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಸಾರ್ವಜನಿಕರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ವಿವರಿಸಿದರು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್‌ ಬೌನ್ಸ್‌ ಪ್ರಕರಣಗಳು, ಬ್ಯಾಂಕ್‌ ವಸೂಲಾತಿ, ಕಾರ್ಮಿಕ ವಿವಾದಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಗಳ ಪ್ರಕರಣಗಳು (ರಾಜಿ ಮಾಡಿಕೊಳ್ಳಲು ಬರಲಾರದ ಪ್ರಕರಣಗಳನ್ನು ಹೊರತುಪಡಿಸಿ), ಇತರೆ ಪ್ರಕರಣಗಳು (ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, ವೈವಾಹಿಕ ಮತ್ತು ಇತರೆ ಸಿವಿಲ್ ವ್ಯಾಜ್ಯಗಳು) ಮತ್ತು ಈಗಾಗಲೇ ನ್ಯಾಯಾಲಯಗಳಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳಾದ ಕ್ರಿಮಿನಲ್ ರಾಜಿಯಾಗಬಹುದಾದ ಪ್ರಕರಣಗಳು, ಚೆಕ್‌ ಬೌನ್ಸ್‌, ಬ್ಯಾಂಕ್‌ ವಸೂಲಾತಿ ಪ್ರಕರಣ, ಕಾರ್ಮಿಕ ವಿವಾದ ಪ್ರಕರಣಗಳು, ಮೋಟಾರ್‌ ವಾಹನ ಅಪಘಾತಗಳಲ್ಲಿ ಗಾಯಗೊಂಡವರು, ಅಥವಾ ಮೃತಪಟ್ಟವರ ವಾರಸುದಾರರು ಅಥವಾ ಅವಲಂಬಿತರು ಪರಿಹಾರಧನ ಕೋರಿ ಸಲ್ಲಿಸಲಾದ ಪ್ರಕರಣಗಳು (ಎಂವಿಸಿ ಕೇಸೆಸ್‌), ವಿದ್ಯುತ್‌ ಹಾಗೂ ನೀರಿನ ಶುಲ್ಕಗಳ ಪ್ರಕರಣಗಳು (ರಾಜಿ ಮಾಡಿಕೊಳ್ಳಲು ಬರಲಾರದ ಪ್ರಕರಣಗಳನ್ನು ಹೊರತುಪಡಿಸಿ), ವೈವಾಹಿಕ ವಿವಾದಗಳು ಮತ್ತು ಜೀವನಾಂಶದ ಪ್ರಕರಣಗಳು, ಭೂ ಸ್ವಾಧೀನ ಸಂಬಂಧ ಸರ್ಕಾರದಿಂದ ಪರಿಹಾರಧನ ಕೋರಿ ಸಲ್ಲಿಸಲಾದ ಪ್ರಕರಣಗಳು, ಪಾವತಿ, ಭತ್ಯೆಗೆ ಸಂಬಂಧಿಸಿದ ಮತ್ತು ನಿವೃತ್ತಿ ಸೌಲಭ್ಯಗಳು, ಕಂದಾಯ ಪ್ರಕರಣಗಳು (ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳು), ಇತರೆ ಸಿವಿಲ್ ಪ್ರಕರಣಗಳು (ಬಾಡಿಗೆ, ಇಜಮೆಂಟರಿ ರೈಟ್ಸ್‌, ನಿರ್ಬಂಧಕಾಜ್ಞೆ ದಾವೆಗಳು, ಸ್ಪೆಸಿಪಿಕ್‌ ಪರಫಾರಮನ್ಸ್‌ ದಾವೆಗಳು, ಆಸ್ತಿ ವಿಭಾಗದ ದಾವೆಗಳು, ಮಕ್ಕಳ ಕಸ್ಟಡಿ ಪ್ರಕರಣಗಳು) ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳನ್ನು (ಡಿ.ವಿ. ಆಕ್ಟ್ ಪ್ರಕರಣಗಳು, ಜೀವನಾಂಶ ಪ್ರಕರಣಗಳು) ಲೋಕ್‌ ಅದಲಾತ್‌ನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ಸಮಗ್ರ ಮಾಹಿತಿ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.