ಮದ್ಯದಂಗಡಿ ತೆರವಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Aug 27, 2019, 3:45 PM IST
ಎನ್.ಆರ್.ಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯ ಮದ್ಯದಂಗಡಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ನಾಗರಾಜ್ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
ಎನ್.ಆರ್.ಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪ ಮದ್ಯದಂಗಡಿ ತೆರೆದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು, ಅಧ್ಯಾಪಕರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಾಲೂಕು ಕಚೇರಿವರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕಾಲೇಜಿನ ಕಾಂಪೌಂಡ್‌ನಿಂದ ಕೇವಲ 30 ಮೀಟರ್ ಅಂತರದಲ್ಲಿ ಮದ್ಯಂಗಡಿ ಪ್ರಾರಂಭಿಸಲಾಗಿದೆ. ಇದರಿಂದ ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಈ ಜಾಗದ ವ್ಯಾಪ್ತಿಯು ಮೆಣಸೂರು ಗ್ರಾಮ ಪಂಚಾಯ್ತಿಗೆ ಸೇರಲಿದೆ. ಈಗಾಗಲೇ ಗ್ರಾಮ ಪಂಚಾಯ್ತಿಗೆ, ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಹತ್ತಿರದಲ್ಲೇ ಅಂಗನವಾಡಿ, ವಾಸದ ಮನೆಗಳಿವೆ. ಆದ್ದರಿಂದ ತಕ್ಷಣ ಮದ್ಯದಂಗಡಿಯನ್ನು ತೆರುವುಗೊಳಿಸಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಜ್ವಲ್ ಹಾಗೂ ಸಂಘದ ಇತರ ಪದಾಧಿಕಾರಿಗಳು ತಹಶೀಲ್ದಾರ್ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕಾರ ಮಾಡಿದ ತಹಶೀಲ್ದಾರ್ ನಾಗರಾಜ್ ಮಾತನಾಡಿ, ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮದ್ಯದಂಗಡಿ ತೆರವುಗೊಳಿಸಲು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಕಾಲೇಜಿನ ಎನ್ನೆಸ್ಸೆಸ್ ವಿಭಾಗದ ಮುಖ್ಯಸ್ಥ ಡಾ| ಅಣ್ಣಪ್ಪ ಎನ್ ಮಳಿಮs್, ಸಮಾಜ ಕಾರ್ಯವಿಭಾಗದ ಮುಖ್ಯಸ್ಥ ಡಾ| ಉಮೇಶ್, ಗ್ರಂಥಪಾಲಕ ಕೃಷ್ಣನಾಯಕ್, ಸಮಾಜ ಕಾರ್ಯ ವಿಭಾಗದ ಅಧ್ಯಾಪಕ ದಿನಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.