“ಎಂಆರ್‌ಪಿ’ ಚಿತ್ರಕ್ಕೆ ಜಗ್ಗೇಶ್ ಸಾಥ್
Team Udayavani, Aug 28, 2019, 3:01 AM IST
ಮಾರುಕಟ್ಟೆಯಲ್ಲಿ ಅಂಗಡಿ-ಮುಂಗಟ್ಟುಗಳ ಮುಂದೆ “ಎಂಆರ್‌ಪಿ’ ಎಂಬ ಬೋರ್ಡ್‌ಗಳನ್ನು ನೇತು ಹಾಕಿರುವುದನ್ನು ನೀವು ನೋಡಿರುತ್ತೀರಿ. ಈಗ ಇದೇ “ಎಂಆರ್‌ಪಿ’ ಎನ್ನುವ ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರುತ್ತಿದೆ. ಅಂದಹಾಗೆ, ಈ ಹಿಂದೆ “ನನ್ ಮಗಳೇ ಹೀರೋಯಿನ್’ ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕ ಬಾಹುಬಲಿ “ಎಂಆರ್‌ಪಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇನ್ನು ಚಿತ್ರದಲ್ಲಿ “ಎಂಆರ್‌ಪಿ’ ಅಂದರೆ, “ಮೋಸ್ಟ್ ರೆಸ್ಪಾಂಸಿಬಲ್ ಪರ್ಸನ್’ ಅಂಥ ಅರ್ಥವಂತೆ.
ಇಲ್ಲಿಯವರೆಗೆ ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ ಹರಿ ಈ ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಾಫ್ಟ್ವೇರ್ ಇಂಜಿನಿಯರ್ ಆಗಿ ವಾಸ್ತವಕ್ಕೆ ಕನ್ನಡಿ ಹಿಡಿಯುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ “ಎಂಆರ್‌ಪಿ’ ಚಿತ್ರದ ಆರಂಭದಲ್ಲಿ ಮತ್ತು ಅಂತ್ಯದಲ್ಲಿ ನಟ ಜಗ್ಗೇಶ್ ಧ್ವನಿಯನ್ನು ನೀಡಿದ್ದಾರೆ. ಅದನ್ನು ಚಿತ್ರದಲ್ಲಿ ಒಂದೊಳ್ಳೆ ಸಂದೇಶದ ಜೊತೆ ಪ್ರೇಕ್ಷಕರಿಗೆ ಕೇಳಿಸಲಾಗುವುದು ಎನ್ನುತ್ತದೆ ಚಿತ್ರತಂಡ.
ಇನ್ನು “ಎಂಆರ್‌ಪಿ’ ಚಿತ್ರವನ್ನು ನಿರ್ದೇಶಕ ಎಂ.ಡಿ ಶ್ರೀಧರ್, ಛಾಯಾಗ್ರಾಹಕ ಕೃಷ್ಣ ಕುಮಾರ್, ಮೋಹನ್ ಕುಮಾರ್ ಹಾಗೂ ರಂಗಸ್ವಾಮಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿ ಹಾಸ್ಯಕ್ಕೆ ಹೆಚ್ಚು ಒಟ್ಟು ಕೊಡಲಾಗಿದೆ. ಚಿತ್ರದ ಹಾಡುಗಳಿಗೆ ಹರ್ಷವರ್ಧನ ಸಂಗೀತ ಸಂಯೋಜಿಸುತ್ತಿದ್ದು, ಎಂ. ಎಂ ಸೂರಿ (ಗುಂಡ್ಲುಪೇಟೆ ಸುರೇಶ್) ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ.
ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ “ಎಂಆರ್‌ಪಿ’ ಚಿತ್ರದಲ್ಲಿ ಹರಿ ಅವರೊಂದಿಗೆ, ವಿಜಯ್ ಚೆಂಡೂರ್, ಬಾಲ ರಜವಾಡಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಭರದಿಂದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿರುವ “ಎಂಆರ್‌ಪಿ’ ಚಿತ್ರ ಮುಂದಿನ ಅಕ್ಟೋಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.