ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ
Team Udayavani, Aug 28, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತೆ ಮುಂದೂಡಿದೆ. ಆ.27ರಿಂದ ನಡೆಯಬೇಕಿದ್ದ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಾಂತ್ರಿಕ ಕಾರಣಗಳಿಗಾಗಿ ಆ.29ರಿಂದ ನಡೆಸಲು ಸೂಚಿಸಿರುವ ಇಲಾಖೆ, ಇತರೆ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಸ್ತೃತವಾದ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದೂ ತಿಳಿಸಿದೆ. ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕಳೆದ ಮೂರೂವರೆ ವರ್ಷದಿಂದ ಒಂದಲ್ಲ ಒಂದು ಕಾರಣಕ್ಕೆ ಮುಂದೂ ಡುತ್ತಲೇ ಬಂದಿದೆ. ಚುನಾವಣಾ ನೀತಿ ಸಂಹಿತೆ, ನಿಯಮ ತಿದ್ದುಪಡಿ, ತಾಂತ್ರಿಕ ಕಾರಣ ಹೀಗೆ ಹತ್ತಾರು ಕಾರಣಗಳಿಗಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದರು. ಇದಾದ ನಾಲ್ಕೇ ದಿನಕ್ಕೆ ತಾಂತ್ರಿಕ ಕಾರಣದ ನೆಪವೊಡ್ಡಿ ಮತ್ತೆ ವರ್ಗಾವಣೆ ಪ್ರಕ್ರಿಯೆ ಯನ್ನು ಇಲಾಖೆ ಮುಂದೂಡಿದೆ.
ವರ್ಗಾವಣೆ ಪ್ರಕ್ರಿಯೆಯ ಅನುಕೂಲ ಕ್ಕಾಗಿ ನಗರ ಪ್ರದೇಶವನ್ನು ಎ ವಲಯ, ಪಟ್ಟಣ ಪ್ರದೇಶವನ್ನು ಬಿ ವಲಯ ಹಾಗೂ ಗ್ರಾಮೀಣ ಪ್ರದೇಶವನ್ನು ಸಿ ವಲಯ ಎಂದು ಗುರುತಿಸಲಾಗಿದೆ. ಎ ವಲಯದಲ್ಲಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಬಿ ಅಥವಾ ಸಿ ವಲಯಕ್ಕೆ ಕಡ್ಡಾಯ ವರ್ಗಾವಣೆ ಮಾಡುವ ಬಗ್ಗೆ ವರ್ಗಾವಣೆ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿತ್ತು. ಇದು ನಗರ ಪ್ರದೇಶದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ನುಂಗಲಾರದ ತುತ್ತಾಗಿದೆ.
ಕಡ್ಡಾಯ ವರ್ಗಾವಣೆ ಬೇಡ ಎಂದು ಹಲವು ಶಿಕ್ಷಕರು, ಸಂಘದ ಮೂಲಕ ಸರ್ಕಾರದ ಗಮನಕ್ಕೆ ತಂದಿದ್ದರು. ಗ್ರಾಮೀಣ ಪ್ರದೇಶದ ಶಿಕ್ಷಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಡ್ಡಾಯ ವರ್ಗಾವಣೆ ಅಗತ್ಯ ಎಂದು ಇಲಾಖೆ ಹೇಳಿಕೊಂಡು ಬರುತ್ತಿದೆ. ಹೊಸ ಸರ್ಕಾರದ ರಚನೆಯಾಗಿರುವುದರಿಂದ ವರ್ಗಾವಣೆ ನಿಯಮದಲ್ಲಿ ಕೆಲವೊಂದು ಬದಲಾವಣೆ ಬರುವ ಸಾಧ್ಯತೆಯೂ ಇದೆ. ಹೀಗಾಗಿ ಶಿಕ್ಷಕರ ಲಾಬಿಗೆ ಮಣಿದ ಇಲಾಖೆ, ತಾಂತ್ರಿಕ ಕಾರಣ ನೀಡಿ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಿದೆ ಎಂದು ಗ್ರಾಮೀಣ ಭಾಗದ ಹಲವು ಶಿಕ್ಷಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.