ಜಮ್ಮು ಕಾಶ್ಮೀರದಲ್ಲಿ ಹಿಂಸೆಗೆ ಪಾಕಿಸ್ಥಾನದ ಪ್ರಚೋದನೆ, ಬೆಂಬಲ: ರಾಹುಲ್ ಗಾಂಧಿ
Team Udayavani, Aug 28, 2019, 9:37 AM IST
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ಧತಿ ಬಳಿಕ ಕಣಿವೆ ರಾಜ್ಯದ ಜನಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಮತ್ತು ಅಲ್ಲಿ ಕಾನೂನಿನ ಬಲಪ್ರಯೋಗ ನಡೆಯುತ್ತಿದೆ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಅವರು ಇಂದು ಕಾಶ್ಮೀರ ಹಿಂಸೆಯ ವಿಚಾರದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬುಧವಾರ ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸೆ ತಲೆದೋರಿದೆ. ಈ ಹಿಂಸೆಗೆ ಪಾಕಿಸ್ಥಾನದ ಪ್ರಚೋದನೆ ಮತ್ತು ನೇರ ಬೆಂಬಲವೇ ಕಾರಣ. ಪಾಕಿಸ್ಥಾನ ಭಯೋತ್ಪಾದನೆಯ ಮೂಲ ಪೋಷಕ ರಾಷ್ಟ್ರ ಎಂದು ಜಗತ್ತಿಗೇ ತಿಳಿದಿದೆ’ ಎಂದು ರಾಗಾ ತಮ್ಮ ಟ್ವೀಟ್ ನಲ್ಲಿ ಹೆಳಿಕೊಂಡಿದ್ದಾರೆ.
There is violence in Jammu & Kashmir. There is violence because it is instigated and supported by Pakistan which is known to be the prime supporter of terrorism across the world.
— Rahul Gandhi (@RahulGandhi) August 28, 2019
‘ನಾನು, ಕೇಂದ್ರ ಸರಕಾರದ ಹಲವು ನಿಲುವುಗಳನ್ನು ಒಪ್ಪುವುದಿಲ್ಲ ಆದರೆ ಕಾಶ್ಮೀರ ವಿಚಾರಕ್ಕೆ ಬಂದಾಗ, ಇದು ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರ ಮತ್ತು ಇದರಲ್ಲಿ ತಲೆ ಹಾಕಲು ಪಾಕಿಸ್ಥಾನಕ್ಕಾಗಲೀ ಅಥವಾ ವಿಶ್ವದ ಇನ್ಯಾವುದೇ ರಾಷ್ಟ್ರಕ್ಕಾಗಲಿ ಅವಕಾಶವೇ ಇಲ್ಲ ಎಂಬುದನ್ನು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ’ ಎಂದು ರಾಹುಲ್ ಗಾಂಧಿ ಅವರು ಇನ್ನೊಂದು ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.
I disagree with this Govt. on many issues. But, let me make this absolutely clear: Kashmir is India’s internal issue & there is no room for Pakistan or any other foreign country to interfere in it.
— Rahul Gandhi (@RahulGandhi) August 28, 2019
ಜಮ್ಮು ಕಾಶ್ಮೀರದಲ್ಲಿ ಭಾರೀ ಸೇನಾ ಪಡೆಗಳ ಜಮಾವಣೆ ಅಲ್ಲಿನ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಮತ್ತು 370ನೇ ವಿಧಿ ರದ್ಧತಿಯ ಬಳಿಕ ಕಣಿವೆ ರಾಜ್ಯದಲ್ಲಿ ಕಾನೂನ್ ರಾಜ್ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಅವರು ಕೇಂದ್ರ ಸರಕಾರದ ಮೇಲೆ ಹರಿಹಾಯ್ದಿದ್ದರು. ಮತ್ತು ಅವರ ನೇತೃತ್ವದಲ್ಲಿ ಕಾಶ್ಮೀರ ಪರಿಸ್ಥಿತಿಯನ್ನು ಅವಲೋಕಿಸಲು ತೆರಳಿದ್ದ ವಿಪಕ್ಷ ನಾಯಕರ ನಿಯೋಗವನ್ನು ಇತ್ತೀಚೆಗಷ್ಟೇ ಶ್ರೀನಗರ ವಿಮಾನ ನಿಲ್ದಾಣದಲ್ಲೇ ತಡೆಹಿಡಿಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.