ಎತ್ತರದ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ

•5 ಅಡಿ ಗರಿಷ್ಠ ಎತ್ತರ: ಡಿಸಿ •ಪಿಒಪಿ ಗಣಪಗಿಲ್ಲ ಅವಕಾಶ•ಪರಿಸರ ಸ್ನೇಹಿ ಹಬ್ಬ ಆಚರಿಸಿ

Team Udayavani, Aug 28, 2019, 10:00 AM IST

28-Agust-3

ದಾವಣಗೆರೆ: ಪರಿಸರಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ.ಬೀಳಗಿ, ಇತರರು ಭಾಗವಹಿಸಿದ್ದರು.

ದಾವಣಗೆರೆ: ಸಾರ್ವಜನಿಕವಾಗಿ ಗರಿಷ್ಠ ಐದು ಅಡಿಗಿಂತ ಎತ್ತರದ ಗಣಪತಿ ಪ್ರತಿಷ್ಠಾಪಿಸಲು ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ ತಿಳಿಸಿದ್ದಾರೆ.

ಮಂಗಳವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಸರ್ಕಾರದ ಆದೇಶದ ಪ್ರಕಾರ 5 ಅಡಿಗಿಂತ ಎತ್ತರದ ಗಣಪತಿ ಪ್ರತಿಷ್ಠಾಪಿಸುವಂತಿಲ್ಲ. ಹಾಗಾಗಿ ನಗರದಲ್ಲಿಯೂ ಸಹ ಐದು ಅಡಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸಲು ಯಾವುದೇ ಅನುಮತಿ ನೀಡಲಾಗುವುದಿಲ್ಲ ಎಂದರು.

ಅಲ್ಲದೆ, ಯಾವುದೇ ಕಾರಣಕ್ಕೂ ಪಿಓಪಿ ಗಣಪತಿ ಅಥವಾ ಪ್ಲಾಸ್ಟಿಕ್‌ ಗಣೇಶ ಮೂರ್ತಿಗಳನ್ನು ಹಬ್ಬಗಳಲ್ಲಿ ಬಳಸುವಂತಿಲ್ಲ. ಪರಿಸರಕ್ಕೆ ಹಾನಿಯಾಗದಂತೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆ ಹಾಗೂ ಅನ್ಯ ಜಿಲ್ಲೆ, ರಾಜ್ಯಗಳಿಂದ ಪಿಓಪಿ ಗಣಪತಿ ಮೂರ್ತಿಗಳನ್ನು ತಂದು ಮಾರಾಟ ಮಾಡುವಂತಿಲ್ಲ. ಹಾಗೇನಾದರೂ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಾರ್ವಜನಿಕರಿಗೆ ಪಿಓಪಿ ಗಣಪಗಳ ತಯಾರಿ ಮತ್ತು ಮಾರಾಟ ಕಂಡುಬಂದಲ್ಲಿ ಪಾಲಿಕೆಗೆ ಮಾಹಿತಿ ನೀಡಲು ಮನವಿ ಮಾಡಿದರು.

ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿಓಪಿಯಿಂದ ಸಿದ್ದಪಡಿಸಿದ ಗಣಪತಿಗಳನ್ನು ಬಳಸುವಂತಿಲ್ಲ. ಅಂತಹ ಮೂರ್ತಿಗಳನ್ನು ವಶಪಡಿಸಿಕೊಂಡು ಧಾರ್ಮಿಕ ವಿಧಿ-ವಿಧಾನಗಳಿಗೆ ಭಂಗವಾಗದಂತೆ ವಿಲೇವಾರಿ ಮಾಡಲಾಗುವುದು. ಪಿಓಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗಣೇಶ ಮೂರ್ತಿಗಳನ್ನು ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂ-ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಸಮೇತ ಮೂರ್ತಿಗಳನ್ನು ವಿಸರ್ಜಿಸದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ನಿಂದ ತಯಾರಿಸಿದ ಮೂರ್ತಿಗಳು, ಬಣ್ಣ ಲೇಪಿತ ವಿಗ್ರಹಗಳು ಪರಿಸರ ಹಾಗೂ ಜಲ ಮೂಲಗಳಿಗೆ ಹಾನಿಕಾರಕವಾಗಿದ್ದು, ಇದನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಿಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ವಾರ್ಡ್‌ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿಗಳನ್ನು ರಚಿಸಿಕೊಂಡು ಗಣೇಶ ಮೂರ್ತಿಗಳನ್ನು ಸೂಕ್ತ ವಿಲೇವಾರಿಗೆ ಕ್ರಮ ವಹಿಸಬೇಕು. ಸಾರ್ವಜನಿಕ ಗಣಪತಿಗಳನ್ನು ವಿಸರ್ಜಿಸಲು ನಿರ್ದಿಷ್ಟ ಜಲ ಮೂಲಗಳನ್ನು ನಿಗದಿಪಡಿಸಿ ಈ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಬೇಕು. ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರಸ್ನೇಹಿ ಹಬ್ಬ ಆಚರಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಹಾನಗರಪಾಲಿಕೆ ಆಯುಕ್ತ ಮಂಜುನಾಥ್‌ ಬಳ್ಳಾರಿ ಮಾತನಾಡಿ, ಈಗಾಗಲೇ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಮತ್ತು ಪಾಲಿಕೆಯಿಂದ ಬೇರೆ ಬೇರೆ ತಂಡಗಳನ್ನು ರಚಿಸಿ ಪಿಓಪಿ ವಿಗ್ರಹಗಳ ತಯಾರಿಕೆ ಮತ್ತು ಮಾರಾಟವಾಗದಂತೆ ಕ್ರಮವಹಿಸಲಾಗಿದೆ. ಮೂರ್ತಿಗಳ ವಿಸರ್ಜನೆ ವೇಳೆ ಹಸಿಕಸವನ್ನು ಹಾಕಲು ಪ್ರತ್ಯೇಕ ಟ್ರ್ಯಾಕ್ಟರ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾತನಾಡಿ, ಜಿಲ್ಲೆ ಹಾಗೂ ತಾಲೂಕು ಮಟ್ಟಗಳಲ್ಲಿ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಈಗಾಗಲೇ ಸಮಿತಿ ರಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಬಾತಿ ಹಾಗೂ ಶಿರಮಗೊಂಡನಹಳ್ಳಿ ಹತ್ತಿರ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿಪಡಿಸಲಾಗಿದೆ. ನಗರದಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ ವಿವಿಧೆಡೆ 30 ಮೊಬೈಲ್ ಟ್ರ್ಯಾಕ್ಟರ್‌ (ನೀರಿರುವ)ಗಳ ವ್ಯವಸ್ಥೆ ಮಾಡಲಾಗುವುದು. ಜಗಳೂರು, ಮಲೆಬೇನ್ನೂರು, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿಯಲ್ಲಿ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿಪಡಿಸಲಾಗಿದೆ. ಹಬ್ಬದ ಮುಂಜಾಗ್ರತಾ ಕ್ರಮಗಳಾಗಿ ಮಣ್ಣಿನ ಗಣೇಶ ಮೂರ್ತಿ ಪೂಜಿಸಲು, ವಿಷಕಾರಿ ರಾಸಾಯನಿಕ, ಲೋಹ, ಪ್ಲಾಸ್ಟಿಕ್‌ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಸೂಚಿಸಲಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಸಾರ್ವಜನಿಕರ ಬಾವಿ, ಕೆರೆ, ಹೊಳೆ ಜಲಮೂಲಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸದೇ ಬಕೆಟ್, ಸಂಚಾರಿ ವಿಸರ್ಜನಾ ವಾಹನ ಅಥವಾ ಸೂಚಿತ ನೀರಿನ ಕಟ್ಟೆಗಳಲ್ಲಿ ಮಾತ್ರ ವಿಸರ್ಜಿಸಬೇಕು. ಹಾಗೂ ಧ್ವನಿವರ್ಧಕಗಳನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಮಾತ್ರ ಬಳಸುವಂತೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ರಾಜೀವ್‌, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಕೊಟ್ರೇಶ್‌, ತಹಶೀಲ್ದಾರ್‌ ಸಂತೋಷಕುಮಾರ್‌, ಇತರೆ ಇಲಾಖೆಗಳ ಅಧಿಕಾರಿಗಳಿದ್ದರು.

ನಿಯಮ ಮೀರಿದಲ್ಲಿ ಡಿಜೆಗಳ ವಶ, ಕ್ರಮ
ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ, ಆರೋಗ್ಯ ಹಾಗೂ ಪರಿಸರ ಮಾಲಿನ್ಯ ತಡೆಯುವ ದೃಷ್ಟಿಯಿಂದ ಜಿಲ್ಲಾದ್ಯಂತ ಹೆಚ್ಚಿನ ಶಬ್ದ ಹೊರಸೂಸುವ ಎಲ್ಲಾ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ಡಿಜೆಗಳನ್ನು ಜಪ್ತಿ ಮಾಡಿ ಮಾಲೀಕರು ಹಾಗೂ ಸಂಘ ಸಂಸ್ಥೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು.
ಮಹಾಂತೇಶ ಜಿ.ಬೀಳಗಿ,
 ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.