ವಿದ್ಯಾಭ್ಯಾಸಕ್ಕೆ ಕ್ರೀಡೆ ಪೂರಕ

ಹೆಚ್ಚು ಕ್ರೀಡಾ ತರಬೇತಿ ಕೇಂದ್ರಗಳ ಸ್ಥಾಪನೆಯಾಗಲಿ: ಗಾಳಿಪುರ

Team Udayavani, Aug 28, 2019, 12:21 PM IST

28-Agust-19

ಸಾಗರ: ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರ ವ್ಯಾಪ್ತಿಯ ವಲಯ ಮಟ್ಟದ ಕ್ರೀಡಾಕೂಟವನ್ನು ಜಿಪಂ ಸದಸ್ಯ ರಾಜಶೇಖರ ಗಾಳಿಪುರ ಉದ್ಘಾಟಿಸಿದರು.

ಸಾಗರ: ಕ್ರೀಡೆ ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕೂಡ ಆತ್ಮವಿಶ್ವಾಸ ಹೆಚ್ಚಿಸಿ ಅವರ ಶೈಕ್ಷಣಿಕ ಪ್ರಗತಿಗೆ ಕಾರಣವಾದ ಹಲವಾರು ಉದಾಹರಣೆಗಳಿವೆ. ಆಟದಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವುದರ ಜೊತೆಗೆ ವಿದ್ಯಾಭ್ಯಾಸಕ್ಕೂ ಪೂರಕವಾಗುತ್ತದೆ ಎಂಬುದನ್ನು ಪೋಷಕರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಪಂ ಸದಸ್ಯ ರಾಜಶೇಖರ ಗಾಳಿಪುರ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಮ್ಮ ವನಶ್ರೀ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರ ವ್ಯಾಪ್ತಿಯ ವಲಯ ಮಟ್ಟದ ಕ್ರೀಡಾಕೂಟವನ್ನು ಅವರು ಜಾವಲಿನ್‌ ಥ್ರೋ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಟದ ಬಗ್ಗೆ ಇದ್ದ ಹಿಂಜರಿಕೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಇಂದು ಪೋಷಕರು ಮಕ್ಕಳಿಗೆ ವಿವಿಧ ವೃತ್ತಿಪರ ಆಟಗಳಲ್ಲಿ ಕಠಿಣ ತರಬೇತಿಗಳನ್ನು ಒದಗಿಸಿ ಸಜ್ಜುಗೊಳಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಸಾಗರದಂತಹ ಭಾಗದಲ್ಲಿ ಹೆಚ್ಚು ಹೆಚ್ಚು ಕ್ರೀಡಾ ತರಬೇತಿ ಕೇಂದ್ರಗಳ ಸ್ಥಾಪನೆಯಾದರೆ ಇನ್ನಷ್ಟು ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಪ್ರತಿಪಾದಿಸಿದರು. ಸಾಗರದಲ್ಲಿ ಉತ್ತಮವಾದ ಆ್ಯಥ್ಲೆಟಿಕ್‌ ಕ್ರೀಡಾಂಗಣದ ಕೊರತೆಯಿದೆ. ಮಳೆ ಸುರಿಯುತ್ತಿರುವ ಸಂದರ್ಭದಲ್ಲಿಯೂ ಕ್ರೀಡಾ ಚಟುವಟಿಕೆ ನಡೆಸುವಂತ ವ್ಯವಸ್ಥೆಯನ್ನು ನಾವು ಛಾವಣಿ ಹೊಂದಿರುವ ಕ್ರೀಡಾಂಗಣ ಸ್ಥಾಪಿಸಿದರೆ ಮಲೆನಾಡಿನ ಮಳೆಗಾಲದ ಕ್ರೀಡಾಕೂಟಗಳ ಸಮಸ್ಯೆ ಬಗೆಹರಿಯುತ್ತದೆ. ಈ ನಿಟ್ಟಿನಲ್ಲಿ ತಾಲೂಕಿನ ಆಡಳಿತ ಚಿಂತಿಸಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್‌, ಭಾರತಕ್ಕೆ ಉಜ್ವಲ ಭವಿಷ್ಯವಿದೆ. ಯುವಜನಾಂಗ ನಮ್ಮ ದೇಶದಲ್ಲಿ ಹೆಚ್ಚಿದ್ದು, ಅವರ ಮೇಲೆ ದೊಡ್ಡಮಟ್ಟದ ನಿರೀಕ್ಷೆಯನ್ನು ದೇಶವಾಸಿಗಳು ಇರಿಸಿಕೊಂಡಿದ್ದಾರೆ. ದೇಶವು ಭವಿಷ್ಯದಲ್ಲಿ ಒಲಿಂಪಿಕ್ಸ್‌ನಂತಹ ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡುವ ಎಲ್ಲ ಅವಕಾಶಗಳಿದ್ದು, ಇಂತಹ ಸ್ಥಳೀಯ ಕ್ರೀಡಾಕೂಟಗಳ ಮೂಲಕ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶನ ಮಾಡಿ ಉನ್ನತ ಮಟ್ಟಕ್ಕೆ ತಲುಪಲು ಅವಕಾಶ ಸಿಗುವ ಸಾಧ್ಯತೆಯೂ ಇರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಎಡಜಿಗಳೇಮನೆ ಗ್ರಾಪಂ ಅಧ್ಯಕ್ಷ ಎಂ.ಡಿ. ರಾಮಚಂದ್ರ, ನಗರಸಭೆ ಸದಸ್ಯರಾದ ಕೆ.ಆರ್‌. ಗಣೇಶಪ್ರಸಾದ್‌, ಡಿ. ತುಕಾರಾಮ, ದೈಹಿಕ ಶಿಕ್ಷಣ ಪರಿವೀಕ್ಷಕ ಉಮಾಪತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗುರುರಾಜ್‌, ಪರಮೇಶ್ವರ ಬರದವಳ್ಳಿ ಇದ್ದರು. ದುರ್ಗಾನಾಯಕ್‌ ಸ್ವಾಗತಿಸಿದರು. ಅಶೋಕ್‌ ವಂದಿಸಿದರು. ಮಂಜಪ್ಪ ನಿರೂಪಿಸಿದರು.

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.