ವಸ್ತುಗಳಿಗೆ ಹೆಚ್ಚು ಗೌರವಿಸಬೇಡಿ, ಮಾನವತೆ ತತ್ವವಿರಲಿ


Team Udayavani, Aug 29, 2019, 3:00 AM IST

vastugalige

ಮೈಸೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿವೆ. ವಸ್ತುಗಳಿಗೆ ಹೆಚ್ಚು ಗೌರವ ಕೊಡಬೇಡಿ, ಮಾನವತೆಯ ತತ್ವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ ಎಂದು ಉಪಪ್ರಾಂಶುಪಾಲ ಡಾ.ಜಿ.ಪ್ರಸಾದಮೂರ್ತಿ ಸಲಹೆ ನೀಡಿದರು. ನಗರದ ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2019-20ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜನಪದ ಗಾಯಕ ಅಮ್ಮರಾಮಚಂದ್ರ ಮಾತನಾಡಿ, ಇಂದು ಮೂಲ ಜನಪದ ದಾಟಿಯಲ್ಲಿ ಹಾಡುಗಳನ್ನು ಹಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ನಮ್ಮ ಮೂಲ ಜನಪದವನ್ನು ಬಿಡಬಾರದು. ಇತ್ತೀಚೆಗೆ ಮೂಲ ಜನಪದ ದಾಟಿಯಲ್ಲಿ ಹಾಡುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೂಲ ಜನಪದ ದಾಟಿಯನ್ನು ಅರಿತು ಆ ದಾಟಿಯಲ್ಲಿಯೇ ಹಾಡುಗಳನ್ನು ಹಾಡಬೇಕು. ಇದರಿಂದ ಜನಪದವು ಮತ್ತಷ್ಟು ಶ್ರೀಮಂತವಾಗುವುದು ಎಂದರು.

ವಿದ್ಯಾರ್ಥಿಗಳು ತಮಗೆ ದೊರೆತ ವೇದಿಕೆಗಳನ್ನು ಸದುಪಯೋಗಪಡಿಸಿಕೊಂಡು ಪ್ರತಿಭೆಯನ್ನು ಹೊರಹಾಕುವ ಮೂಲಕ ಗುರುತಿಸಿಕೊಳ್ಳಬೇಕು. ದೊರೆತ ವೇದಿಕೆಗಳನ್ನು ಸದುಪಯೋಗಪಡಿಸಿಕೊಂಡಿದ್ದಕ್ಕೆ ನಾನು ಈ ಮಟ್ಟಕ್ಕೆ ಏರಲು ಸಾಧ್ಯವಾಯಿತು. ನನ್ನ ಬಡತನವನ್ನು ನಿವಾರಿಸುವುದಕ್ಕೆ ಕಲಿತ ವಿದ್ಯೆಯೇ ಈ ಹಾಡುಗಾರಿಕೆ. ಇದು ಗುಡಿಸಲಿನಿಂದ ಅರಮನೆಯ ಕಡೆಗೆ ಕರೆದೂಯ್ಯುವಂತೆ ಮಾಡಿದೆ ಎಂದು ಹೇಳಿದರು.

ಹಟ, ಛಲ, ಮನಸ್ಸು ಇದ್ದರೆ ಏನನ್ನಾದರೂ ಸಾಧಿಸಬಹುದು. ವಿದ್ಯಾರ್ಥಿಗಳು ಉತ್ತಮ ಮಾರ್ಗದಲ್ಲಿ ಶ್ರಮಿಸಿದರೆ ಬದುಕಿನಲ್ಲಿ ಜಯ ಸಾಧಿಸಬಹುದು. ಕೇವಲ ಗುರಿ ಇದ್ದರೆ ಸಾಲದು ಗುರಿ ಸಾಧಿಸುವ ಛಲ ಇರಬೇಕು. ನಮ್ಮಲ್ಲಿರುವ ಕಲೆ ವಿಶ್ವಮಟ್ಟದಲ್ಲಿ ನಮ್ಮನ್ನು ಬೆಳಸಬಹುದು. ಅದಕ್ಕೆ ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ನಟರಾಜ ಪ್ರತಿಷ್ಠಾನ ವಿಶೇಷಾಧಿಕಾರಿ ಪ್ರೊ.ಕೆ.ಸತ್ಯನಾರಾಯಣ, ಕಾಲೇಜು ಪ್ರಾಂಶುಪಾಲ ವಿ.ಪ್ರದೀಪ್‌, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಬಿ.ರಾಧಾ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.