ಐಎಂಎ ಪ್ರಕರಣ: ಅನುಸೂಚನೆ ಹೊರಡಿಸಲು ಕೇಂದ್ರಕ್ಕೆ ಹೈ ನಿರ್ದೇಶನ
Team Udayavani, Aug 29, 2019, 3:00 AM IST
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಬಗ್ಗೆ ಶೀಘ್ರ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ. ಈ ಕುರಿತು ಸಲ್ಲಿಸಲಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾ.ಎ.ಎಸ್. ಓಕಾ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.
ಈ ವೇಳೆ, ಪ್ರಕರಣದ ತನಿಖೆ ಯನ್ನು ಸಿಬಿಐ ಆರಂಭಿಸಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಆಗ, ಸಿಬಿಐ ಪರ ವಕೀಲ ಪ್ರಸನ್ನಕುಮಾರ್, ಇಲ್ಲ, ಈವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಹಾಗಾಗಿ, ಸಿಬಿಐ ವಿಚಾರಣೆ ಆರಂಭಿಸಿಲ್ಲ ಎಂದು ತಿಳಿಸಿದರು. ಅದಕ್ಕೆ, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದಿರುವುದು ತನಿಖೆಯ ವಿಳಂಬಕ್ಕೆ ಕಾರಣ ಆಗುವುದು ಸಮಂಜಸವಲ್ಲ.
ಆದ್ದರಿಂದ ಆದಷ್ಟು ಶೀಘ್ರ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿತು. ದೇ ರೀತಿ ಎಸ್‌ಐಟಿ ವಶಪಡಿಸಿಕೊಂಡಿರುವ ಐಎಂಎ ಸಂಸ್ಥೆಗೆ ಸೇರಿದ ಚಿನ್ನದ್ದು ಎನ್ನಲಾಗುತ್ತಿರುವ ಬಿಸ್ಕತ್‌ಗಳ ಸಾಚಾತನದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.