ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಚಿವಾಲಯದ ಕರೆಂಟ್ ಬಿಲ್ ಪಾವತಿಸಲೂ ಹಣವಿಲ್ಲವಂತೆ!
Team Udayavani, Aug 29, 2019, 10:45 AM IST
ಇಸ್ಲಾಮಾಬಾದ್:ಜಮ್ಮು-ಕಾಶ್ಮೀರದ ವಿಚಾರದಲ್ಲಿ ಕಾಲುಗೆದರಿ ಜಗಳಕ್ಕಿಳಿಯುತ್ತಿರುವ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಸಚಿವಾಲಯದ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡದ ಪರಿಣಾಮ ಪವರ್ ಕಟ್ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿ ತಿಳಿಸಿದೆ.
ಪಾಕಿಸ್ತಾನ ಮಾಧ್ಯಮದ ವರದಿ ಪ್ರಕಾರ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಚಿವಾಲಯ 41 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿದೆ. ಬಾಕಿ 41 ಲಕ್ಷ ರೂಪಾಯಿ ಕೂಡಲೇ ಪಾವತಿಸುವಂತೆ ಇಸ್ಲಾಮಾಬಾದ್ ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ(ಐಇಎಸ್ ಸಿಒ) ಬುಧವಾರ ನೋಟಿಸ್ ಜಾರಿ ಮಾಡಿರುವುದಾಗಿ ವರದಿ ವಿವರಿಸಿದೆ.
ಪಾಕ್ ಪ್ರಧಾನಿ ಸಚಿವಾಲಯದ ಕಳೆದ ತಿಂಗಳ ವಿದ್ಯುತ್ ಬಿಲ್ ಪಾವತಿ ಮೊತ್ತ 35 ಲಕ್ಷ ರೂಪಾಯಿ ಆಗಿತ್ತು. ಈ ತಿಂಗಳು ಆ ಮೊತ್ತ 41ಲಕ್ಷಕ್ಕೆ ಏರಿಕೆಯಾಗಿದೆ. ವಿದ್ಯುತ್ ಬಿಲ್ ಅನ್ನು ಕೂಡಲೇ ಪಾವತಿಸುವಂತೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಿದ್ದರೂ ಕೂಡಾ ಹಣ ಪಾವತಿಯಾಗಿಲ್ಲ ಎಂದು ಐಇಎಸ್ ಸಿಒ ಆರೋಪಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.