ಕೆರೆಗಳಿಗೆ ಭದ್ರೆ ನೀರು ಹರಿಸಲು ಪ್ರಸ್ತಾವನೆ
ಶಾಸಕ ಡಿ.ಎಸ್.ಸುರೇಶ್ ಮಾಹಿತಿ•70 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Aug 29, 2019, 11:57 AM IST
ತರೀಕೆರೆ: ಲಿಂಗದಹಳ್ಳಿ ಗ್ರಾಮದಲ್ಲಿ 70 ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಡಿ.ಎಸ್.ಸುರೇಶ್ ಚಾಲನೆ ನೀಡಿದರು.
ತರೀಕೆರೆ: ತರೀಕೆರೆ, ಕಡೂರು ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳ ಕೆರೆಗಳಿಗೆ ಭದ್ರಾ ನದಿ ನೀರು ಹರಿಸಲು ಡಿಪಿಆರ್ ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಡಿ.ಎಸ್.ಸುರೇಶ್ ತಿಳಿಸಿದರು.
ಲಿಂಗದಹಳ್ಳಿಯ ಸಹ್ಯಾದ್ರಿಪುರ ಮತ್ತು ಗ್ರಾಮದ ವಿವಿಧೆಡೆ 70 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಲಿಂಗದಹಳ್ಳಿ ಮತ್ತು ಕಸಬಾ, ಕಡೂರಿನ ಕೆರೆಗಳಿಗೆ ಮತ್ತು ಬರಗಾಲದ ಸುಳಿಗೆ ಸಿಲುಕುತ್ತಿರುವ ಚಿಕ್ಕಮಗಳೂರಿನ ಕೆಲವು ಕೆರೆಗಳಿಗೆ ಅಂದಾಜು 900 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದರು.
ಮಲೆನಾಡಿನ ಸೆರಗಿನಲ್ಲಿದ್ದರು ಸಹ ಕಸಬಾ ಮತ್ತು ಲಿಂಗದಹಳ್ಳಿ ಹೋಬಳಿ ಕೆರೆಗಳಿಗೆ ನೀರು ಹರಿದು ಬರುತ್ತಿಲ್ಲ. ಈ ಭಾಗದಲ್ಲಿ ತೋಟಗಾರಿಕಾ ಬೆಳೆಗಳು ಅಧಿಕವಾಗಿದ್ದು, ಅವುಗಳನ್ನು ರಕ್ಷಿಸಿಕೊಳ್ಳಲು ರೈತರು ಹರಸಾಹಸಪಡುತ್ತಿದ್ದಾರೆ. ಕಾಲಕಾಲಕ್ಕೆ ಉತ್ತಮ ಮಳೆಯಾಗದಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದರು.
ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿಗೂ ತತ್ವಾರವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಭದ್ರಾವತಿ ಬಳಿಯ ಗೊಂದಿ ಅಣೆಕಟ್ಟೆಯಿಂದ ಪೈಪ್‌ಲೈನ್ ಮೂಲಕ ಕೆರೆಗಳಿಗೆ ನೀರು ಹರಿಸಲಾಗುವುದು. ಭದ್ರಾ ನದಿ ನೀರು ಹರಿದು ಬಂದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿ, ನೀರಾವರಿ ಸೌಲಭ್ಯಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.
ವಿರೋಧ ಪಕ್ಷದ ಶಾಸಕನಾಗಿದ್ದರೂ ಕೂಡ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇನೆ. ದೋರನಾಳು ಗ್ರಾಮದಿಂದ ಲಿಂಗದಹಳ್ಳಿ ತನಕ 9 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ನಡೆಸಲಾಗಿದೆ. ಮಳೆಗಾಲ ಮುಗಿದ ನಂತರ ಕಾಮಗಾರಿಯನ್ನು ಆರಂಭಿಸಲಾಗುವುದು. ಲಿಂಗದಹಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈಗಿರುವ ಪೈಪ್‌ಲೈನ್ ಜೊತೆಯಲ್ಲಿಯೇ ಹೆಚ್ಚುವರಿ ಪೈಪ್‌ಲೈನ್ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.
ಗ್ರಾಮೀಣ ಭಾಗಗಳಲ್ಲಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಸರಕಾರ ನೀಡುವ ಹಣ ಸದುಪಯೋಗವಾಗಬೇಕು ಎಂಬುದು ನಮ್ಮ ಆಶಯ. ಇದಕ್ಕೆ ಪೂರಕವಾಗಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಕಾಮಗಾರಿ ಗುಣಮಟ್ಟದಲ್ಲಿ ನಡೆಯುತ್ತಿದೆಯೇ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು ಎಂದು ಸಲಹೆ ನೀಡಿದರು.
ತಾಪಂ ಅಧ್ಯಕ್ಷೆ ಪದ್ಮಾವತಿ ಮಾತನಾಡಿ, ತಾಲೂಕಿನ ಎಲ್ಲಾ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ಗ್ರಾಮಸ್ಥರು ತರಬೇಕು. ಇದರಿಂದ, ಗ್ರಾಮಗಳ ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸಲು ಅವರಿಗೆ ಅನುಕೂಲವಾಗಲಿದೆ. ಅಲ್ಲದೇ, ಕೇವಲ 5 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಯಾಗಲಿ, ಸಮಸ್ಯೆ ಬಗೆಹರಿಸಲು ಅವರಿಂದ ಸಾಧ್ಯವಾಗುವುದಿಲ್ಲ. ಎರಡು ಬಾರಿ ಅಧಿಕಾರದ ಅವಕಾಶ ನೀಡಿದಲ್ಲಿ ತಾಲೂಕಿನ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಗ್ರಾಪಂ ಅಧ್ಯಕ್ಷ ಎಲ್.ಎನ್.ಲಿಂಗರಾಜು, ಸದಸ್ಯರಾದ ಸತೀಶ್, ಅನಿಲ್ಕುಮಾರ್, ಹೇಮಾವತಿ, ಎಲ್.ಪಿ.ಲೋಕೇಶ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.