‘ಕರ್ನಾಟಕ ಒನ್’ ಸೇವೆ ತಾಲೂಕುಗಳಿಗೂ ವಿಸ್ತರಿಸಲು ಚಿಂತನೆ
ಪ್ರತಿ ದಿನ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆವರೆಗೆ ನಾಗರಿಕ ಸೇವಾ ಕೇಂದ್ರ ಕಾರ್ಯ ನಿರ್ವಹಣೆ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ
Team Udayavani, Aug 29, 2019, 12:16 PM IST
ಚಿತ್ರದುರ್ಗ: ಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸಾರ್ವಜನಿಕರಿಗೆ ಗುರುತಿನ ಚೀಟಿ ವಿತರಿಸಿದರು.
ಚಿತ್ರದುರ್ಗ: ನಗರದ ಕೆಳಗೋಟೆಯಲ್ಲಿರುವ ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ ಬಳಿ ನಗರಸಭೆಯ ಮಳಿಗೆಯಲ್ಲಿ ಇಂದಿನಿಂದ ಕರ್ನಾಟಕ ಒನ್ ಸೇವೆಗಳಿಗೆ ಚಾಲನೆ ದೊರೆತಿದ್ದು, 17 ಇಲಾಖೆಗಳ 57 ಸೇವೆಗಳು ದೊರೆಯಲಿವೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಬುಧವಾರ ಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ನೀಡುವುದು ಈ ಕೇಂದ್ರದ ಉದ್ದೇಶ. ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಸದ್ಯ ಜಿಲ್ಲಾ ಕೇಂದ್ರದಲ್ಲಿ ಆರಂಭವಾಗಿರುವ ಕರ್ನಾಟಕ ಒನ್ ನಿರ್ವಹಣೆ ಹಾಗೂ ಯಶಸ್ಸನ್ನು ಆಧರಿಸಿ ತಾಲೂಕು ಹಾಗೂ ನಗರದ ಇತರೆಡೆ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಪ್ರತಿ ದಿನ ಬೆಳಿಗ್ಗೆ 8 ರಿಂದ ಸಂಜೆ 7 ರವರೆಗೆ ವರ್ಷದ 360 ದಿನವೂ ಕಾರ್ಯ ನಿರ್ವಹಿಸಲಿದ್ದು, ಎಲ್ಇಡಿ, ಟ್ಯೂಬ್ಲೈಟ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ರಿಯಾಯತಿ ದರದಲ್ಲಿ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ನಗರಸಭೆ ಪೌರಾಯುಕ್ತ ಸಿ. ಚಂದ್ರಪ್ಪ ಮಾತನಾಡಿ, ಕರ್ನಾಟಕ ಒನ್ ಕೇಂದ್ರ ಸ್ಥಾಪನೆಯಿಂದಾಗಿ ನಗರ ಪ್ರದೇಶದ ಜನರ ಸಮಸ್ಯೆ ಬಹುತೇಕ ಕಡಿಮೆಗೊಳ್ಳಲಿದೆ. ಈ ಕೇಂದ್ರದ ಮಾಹಿತಿಯು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಹೀರಾತು ಮೂಲಕ ಪ್ರಚುರಪಡಿಸಲಾಗುವುದು ಎಂದರು.
ಸೇವಾ ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ವಿವಿಧ ಬಗೆಯ ಸೇವೆಗಳ ಗುರುತಿನ ಚೀಟಿಗಳನ್ನು ಸಾರ್ವಜನಿಕರಿಗೆ ಸಾಂಕೇತಿಕವಾಗಿ ವಿತರಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್ ಸೇರಿದಂತೆ ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.