ಗ್ರಾಮೀಣರೇ ಶುದ್ಧ ನೀರು ಬಳಸಿ
ಸಿಡಿಗನಹಳ್ಳಿಯಲ್ಲಿ ಶಾಸಕ ಮಂಜುನಾಥ್ ಸಲಹೆ
Team Udayavani, Aug 29, 2019, 4:48 PM IST
ಸಿಡಿಗನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕವನ್ನು ಶಾಸಕ ಎ.ಮಂಜುನಾಥ್ ಉದ್ಘಾಟಿಸಿದರು. ಬೆಳಗುಂಬ ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಕಂಪನಿ ಉಪಾಧ್ಯಕ್ಷ ನವೀನ್ ಸೋನಿ ಇದ್ದರು.
ಮಾಗಡಿ: ಕೇವಲ ಶ್ರೀಮಂತರು, ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ಶುದ್ಧ ನೀರು ಕುಡಿದರೆ ಸಾಲದು. ಗ್ರಾಮೀಣ ಜನರು ಶುದ್ಧ ನೀರು ಕುಡಿದು ಎಲ್ಲರಂತೆ ಆರೋಗ್ಯವಂತರಾಗಿರಬೇಕು ಎಂದು ಶಾಸಕ ಎ.ಮಂಜುನಾಥ್ ತಿಳಿಸಿದರು.
ತಾಲೂಕಿನ ಸಿಡಿಗನಹಳ್ಳಿ ಗ್ರಾಮದಲ್ಲಿ ನೂತನ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಸಿಡಿಗನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಗ್ರಾಮೀಣ ಭಾಗದ ಜನರ ಮತ್ತು ಶಾಲಾ ಮಕ್ಕಳ ಉಪಯೋಗಕ್ಕಾಗಿ ಶಾಲೆಗಳಿಗೆ ಶೌಚಾಲಯ, ಬಡ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ, ಶಿಥಿಲ ಶಾಲಾ ಕಟ್ಟಡಗಳ ಪುನರ್ ನಿರ್ಮಾಣ ಸೇರಿದಂತೆ ಹಲವು ಸಮಾಜಮುಖೀ ಸೇವೆ ಮಾಡಿಕೊಂಡು ಬರುತ್ತಿದೆ. ಈಗಾಗಲೇ 37 ಶುದ್ಧ ಕುಡಿವ ನೀರಿನ ಘಟಕ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.
ಕಲುಷಿತ ನೀರು ಸೇವನೆಯಿಂದ ರೋಗ: ಕಲುಷಿತ ನೀರು ಸೇವನೆಯಿಂದ ರೋಗಕ್ಕೆ ತುತ್ತಾಗುತ್ತಿದ್ದೇವೆ. ಸುಂದರ ಪರಿಸರ ಹಾಗೂ ಆರೋಗ್ಯಕ್ಕಾಗಿ ಗ್ರಾಮೀಣ ಜನತೆ ಶುಚಿತ್ವವನ್ನು ಕಾಪಾಡಬೇಕು. ಟೊಯೋಟಾ ಕಂಪನಿಯವರೇ 15 ವರ್ಷ ನಿರ್ವಹಣೆ ಮಾಡಲಿದ್ದಾರೆ. ಖಾಸಗಿ ಕಂಪನಿಯಡಿ ನಿರ್ಮಾಣಗೊಂಡ ಘಟಕಗಳು ಉತ್ತಮ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಸರ್ಕಾರ, ಶಾಸಕರ ಅನುದಾನದಡಿ ನಿರ್ಮಾಣಗೊಂಡ ಶುದ್ಧ ನೀರಿನ ಘಟಕಗಳು ನಿರ್ವಹಣೆಯಲ್ಲಿ ವಿಫಲಗೊಂಡಿದ್ದೇವೆ. ಇದು ತಲೆತಗ್ಗಿಸುವ ಕೆಲಸ ಎಂದು ಬೇಸರ ವ್ಯಕ್ತಪಡಿಸಿದರು.
ನೀರು ಪೋಲಾಗದಂತೆ ತಂತ್ರಜ್ಞಾನ ಅಳವಡಿಕೆ: ಟೊಯೋಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ ಕಂಪನಿ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗ್ಡೆ ಮಾತನಾಡಿ, ಇದು 1200 ಲೀಟರ್ ಶುದ್ಧ ಕುಡಿಯುವ ನೀರಿನ ಘಟಕವಾಗಿದೆ. ಇದರ ನಿರ್ವಹಣೆಯೂ ತಾಂತ್ರಿಕವಾಗಿದೆ. ಮೊಬೈಲ್ನಲ್ಲಿಯೇ ಎಲ್ಲಾ ಲೋಪದೋಷಗಳನ್ನು ನೋಡಬಹುದು. ಈ ಘಟಕಕ್ಕೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕ್ಯಾನ್ ಕ್ಲೀನಿಂಗ್ ಸಹ ಮಾಡಲಾಗುತ್ತದೆ. ಶುದ್ಧೀಕರಣದಿಂದ ಹೆಚ್ಚಿನ ನೀರು ಪೋಲಾಗದಂತೆ ವಿಶೇಷ ತಂತ್ರಜ್ಞಾನದಿಂದ ಘಟಕ ಕೂಡಿದೆ. ಗ್ರಾಮೀಣ ಜನತೆ ಶುದ್ಧ ನೀರು ಕುಡಿದು ಆರೋಗ್ಯವಂತರಾಗಿರಬೇಕು ಎಂದರು.
ಈ ವೇಳೆ ಬೆಳಗುಂಬ ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಕಂಪನಿ ಉಪಾಧ್ಯಕ್ಷ ನವೀನ್ ಸೋನಿ, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ಎಚ್.ಜೆ.ಕಿರಣ್, ಗ್ರಾಪಂ ಮಾಜಿ ಅಧ್ಯಕ್ಷ ಹೊನ್ನಪ್ಪ, ಕೋಟಪ್ಪ, ಸಿಡಿಗನಹಳ್ಳಿ ವೆಂಕಟೇಶ್, ವನರಾಜು, ರಾಮಣ್ಣ, ಮಡಿವಾಳರ ಪಾಳ್ಯದ ನರಸಿಂಹಯ್ಯ, ಶಿವಲಿಂಗಯ್ಯ, ಹರ್ತಿ ಮಾರಣ್ಣ, ರಂಗೇನಹಳ್ಳಿ ಜಯಣ್ಣ, ಉಗ್ರಪ್ಪ, ಬಿ.ಆರ್.ಗುಡ್ಡೇಗೌಡ, ಪಿಡಿಒ ಪುರುಷೋತ್ತಮ, ಧನಂಜಯ ಕುಮಾರ್, ಶಿವರಾಜು, ವೆಂಕಟಾಚಲಯ್ಯ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.