ಹದಗೆಟ್ಟಿರುವ ಶಂಕರನಾರಾಯಣ – ಸಿದ್ದಾಪುರ ಮುಖ್ಯ ರಸ್ತೆ

8 ಕಿ.ಮೀ. ಪೈಕಿ ಸಂಪೂರ್ಣ ಹದಗೆಟ್ಟ ಸುಮಾರು 2 ಕಿ.ಮೀ. ರಸ್ತೆ ; ವಾಹನ ಸವಾರರು ಹೈರಾಣ

Team Udayavani, Aug 30, 2019, 5:30 AM IST

084235151008KDPP1B

ಹೊಂಡ ಗುಂಡಿಗಳಿಂದ ತುಂಬಿದ ರಸ್ತೆ.

ವಿಶೇಷ ವರದಿ-ಶಂಕರನಾರಾಯಣ: ಸಿದ್ದಾಪುರದಿಂದ ಶಂಕರನಾರಾಯಣ ಕಡೆಗೆ ಸಂಚರಿಸುವ ಜಿಲ್ಲಾ ಮುಖ್ಯ ರಸ್ತೆಯ ಸಿದ್ದಾಪುರ ಪೇಟೆಯಿಂದ ಆರಂಭವಾಗಿ ಸುಮಾರು 2 ಕಿ.ಮೀ. ಅಂತರದ ರಸ್ತೆಯ ಅಲ್ಲಲ್ಲಿ ಡಾಮರೆಲ್ಲ ಕಿತ್ತು ಹೋಗಿ ಡಾಮರು ಕಿತ್ತುಹೋಗಿ ದೊಡ್ಡ – ದೊಡ್ಡ ಹೊಂಡ ಗುಂಡಿಗಳು ನಿರ್ಮಾಣಗೊಂಡಿವೆ.

ಕುಂದಾಪುರ – ಶಿವಮೊಗ್ಗ ಹಾಗೂ ಬೈಂದೂರು – ವಿರಾಜಪೇಟೆ ಎರಡು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯೂ ಇದಾಗಿರುವುದರಿಂದ ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದೆ. ಹಾಲಾಡಿಯಿಂದ ತೀರ್ಥಹಳ್ಳಿ, ಶಿವಮೊಗ್ಗ ಕಡೆಗೆ ತೆರಳಬೇಕಾದರೂ ಶಂಕರನಾರಾಯಣ, ಸಿದ್ದಾಪುರ, ಹೊಸಂಗಡಿ ಮೂಲಕ ಇದೇ ಮಾರ್ಗವಾಗಿ ಹತ್ತಿರವಾಗುತ್ತದೆ. ಸಿದ್ದಾಪುರದಿಂದ ಶಂಕರನಾರಾಯಣಕ್ಕೆ ಸುಮಾರು 8 ಕಿ.ಮೀ. ಅಂತರವಿದ್ದು, ಈ ಪೈಕಿ ಸಿದ್ದಾಪುರದಿಂದ ಆರಂಭವಾಗಿ ಸುಮಾರು 2 ಕಿ.ಮೀ. ದೂರದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ.

ವಾಹನಗಳ ಸಂಖ್ಯೆ ಹೆಚ್ಚಳ
ಈಗ ಮಳೆಯಿಂದಾಗಿ ಆಗುಂಬೆ, ಚಾರ್ಮಾಡಿ, ಶಿರಾಡಿ ಘಾಟಿಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದರಿಂದ ಗೋಳಿಯಂಗಡಿ, ಹಾಲಾಡಿ, ಉಡುಪಿ ಕಡೆಯಿಂದ ಶಿವಮೊಗ್ಗ, ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳು ಹೊಸಂಗಡಿ ಮೂಲಕವಾಗಿ ಇದೇ ಮಾರ್ಗವಾಗಿ ತೆರಳುತ್ತಿದೆ. ಈಗ ಈ ಮಾರ್ಗದಲ್ಲಿ ವಾಹನಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಿದೆ. ಈಗಾಗಲೇ ಹೊಂಡ – ಗುಂಡಿಗಳ ಈ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ನಿತ್ಯ ವಾಹನ ಸವಾರರಂತೂ ಕಷ್ಟಪಟ್ಟು ಸಂಚರಿಸುತ್ತಿದ್ದಾರೆ.
ಶಂಕರನಾರಾಯಣ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವ ಜನರು ನಿತ್ಯ ಇದೇ ಮಾರ್ಗವಾಗಿ ಸಂಚರಿಸಬೇಕಿದೆ. ಮಳೆ ಸಂದರ್ಭ ರಸ್ತೆಯಲ್ಲಿಯೇ ನೀರು ನಿಂತು ವಾಹನ ಸವಾರರಿಗೆ ಕೆಸರ ಸಿಂಚನವಾಗುತ್ತಿದೆ.

ತೇಪೆಯೂ ಇಲ್ಲ
ಹೊಂಡ-ಗುಂಡಿಗಳ ರಸ್ತೆಯನ್ನು ಈ ಬಾರಿ ಮಳೆಗಾಲಕ್ಕೂ ಮುನ್ನ ಕನಿಷ್ಠ ದುರಸ್ತಿ ನಡೆಸುವ ಪ್ರಯತ್ನವೂ ನಡೆದಿಲ್ಲ. ಪ್ರತಿ ವರ್ಷವೂ ತೇಪೆ ಹಾಕಲಾಗುತ್ತಿತ್ತು. ಈ ಬಾರಿ ಅದನ್ನು ಕೂಡ ಮಾಡಿಲ್ಲ. ಇದರಿಂದ ರಸ್ತೆಯ ಅನೇಕ ಕಡೆಗಳಲ್ಲಿ ದೊಡ್ಡ – ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಅದರಲ್ಲೂ ಬೈಕ್‌ ಸವಾರರಂತೂ ಹರಸಾಹಸ ಪಟ್ಟು ವಾಹನ ಚಲಾಯಿಸುತ್ತಿದ್ದಾರೆ.

ಶೀಘ್ರ ತೇಪೆ ಹಾಕಲಾಗುವುದು
ಸಿದ್ದಾಪುರ – ಶಂಕರನಾರಾಯಣ ರಸ್ತೆಯ ಹೊಂಡ – ಗುಂಡಿಗಳಿರುವ ಕಡೆಯಲ್ಲಿ ಶೀಘ್ರ ಲೋಕೋಪಯೋಗಿ ಇಲಾಖೆಯ ಅನುದಾನದಿಂದ ತೇಪೆ ಹಾಕಲಾಗುವುದು. ಈ ರಸ್ತೆ ಸೇರಿದಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲು ರಾಜ್ಯ ಹೆದ್ದಾರಿ ಅಭಿವೃದ್ಧಿ ಇಲಾಖೆಯಿಂದ ಸುಮಾರು 43 ಕೋ.ರೂ. ಅನುದಾನ ಮಂಜೂರಾಗಿದ್ದು, ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಳೆ ಕಡಿಮೆ ಆದ ಅನಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
-ದುರ್ಗಾದಾಸ್‌, ಸಹಾಯಕ ಕಾರ್ಯನಿರ್ವಾಹಕ
ಇಂಜಿನಿಯರ್‌ ಲೋಕೋಪಯೋಗಿ ಇಲಾಖೆ, ಕುಂದಾಪುರ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.